DAKSHINA KANNADA
ವಿಚಾರವಾದಿ ಪ್ರೊ. ನರೇಂದ್ರ ನಾಯಕರ ಭದ್ರತೆಗೆ ನೀಡಲಾಗಿದ್ದ ಅಂಗರಕ್ಷಕ ಹಿಂಪಡೆದ ಪೊಲೀಸ್ ಇಲಾಖೆ.!
Published
2 years agoon
By
Adminಖ್ಯಾತ ವಿಚಾರವಾದಿ, ಹೋರಾಟಗಾರ ಪ್ರೊ| ನರೇಂದ್ರ ನಾಯಕ್ ಅವರ ಭದ್ರತೆಗೆ ನೀಡಲಾಗಿದ್ದ ಅಂಗರಕ್ಷಕನನ್ನು ಪೊಲೀಸ್ ಇಲಾಖೆ ಹಿಂಪಡೆದಿದೆ.
ಮಂಗಳೂರು : ಖ್ಯಾತ ವಿಚಾರವಾದಿ, ಹೋರಾಟಗಾರ ಪ್ರೊ| ನರೇಂದ್ರ ನಾಯಕ್ ಅವರ ಭದ್ರತೆಗೆ ನೀಡಲಾಗಿದ್ದ ಅಂಗರಕ್ಷಕನನ್ನು ಪೊಲೀಸ್ ಇಲಾಖೆ ಹಿಂಪಡೆದಿದೆ.
ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕರು ಬಲಪಂಥೀಯ ಉಗ್ರಗಾಮಿಗಳ ದಾಳಿಗೊಳಗಾಗುವ ಹಿಟ್ ಲೀಸ್ಟ್ ನಲ್ಲಿ ಇರುವ ಸಲುವಾಗಿ ಈವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಪೊಲೀಸ್ ಇಲಾಖೆ ಏಕಾಏಕಿ ರದ್ದುಗೊಳಿಸಿರೋದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ.
ಅವರ ಜೀವಕ್ಕೆ ತೊಂದರೆಯಾಗುವಂತಹ ಅನಾಹುತಗಳಿಗೆ ಪೊಲೀಸ್ ಇಲಾಖೆ, ಸರಕಾರವೇ ನೇರ ಹೊಣೆ ಎಂದು ಆರೋಪಿಸಿದೆ.
ಖ್ಯಾತ ವಿಚಾರವಾದಿ ಪ್ರೋ ನರೇಂದ್ರ ನಾಯಕ್ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ನಿರಂತಹ ಹಮ್ಮಿಕೊಳ್ಳುವ ಮೂಲಕ ಮೂಢನಂಬಿಕೆ ಹೋಗಲಾಡಿಸುವ ಮತ್ತು ಮೂಡನಂಬಿಕೆ ಹೆಸರಲ್ಲಿ ಅನ್ಯಾಯ ಎಸಗುತ್ತಿದ್ದ ಕಪಟ ಜೋತಿಷ್ಯರುಗಳ ವಿರುದ್ದ ರಾಜಿರಹಿತ ಹೋರಾಟಗಳನ್ನು ದೇಶದುದ್ದಗಲಕ್ಕೂ ನಡೆಸುತ್ತಾ ಬಂದಿದ್ದಾರೆ.
ಈ ರೀತಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಲಪಂಥೀಯ ಸಂಘಟನೆಗಳಿಗೆ ಸೇರಿದ ಗುಂಪುಗಳು ಬಲಿ ಪಡೆದಿರುವ ಘಟನೆಗಳು ನಮ್ಮ ಕಣ್ಣ ಮುಂದಿದೆ.
ಪ್ರೋ ನರೇಂದ್ರ ನಾಯಕರ ಒಡನಾಡಿಯಾದ ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು, ಹೋರಾಟಗಾರರನ್ನು ಗುಂಡಿಕ್ಕಿ ಸಾಯಿಸಿದ ಘಟನೆಗಳು ನಡೆಯುವ ಸಂದರ್ಭದಲ್ಲೇ ಪ್ರೋ ನರೇಂದ್ರ ನಾಯಕರಂತವರ ಹೆಸರು ಅಂತಹ ಕೊಲೆಗಟುಕರ ಹಿಟ್ ಲೀಸ್ಟಲ್ಲಿ ಇತ್ತೆಂದು ಗುಪ್ತಚರ ಇಲಾಖೆಗೆ ಮಾಹಿತಿಗಳು ಒದಗಿದ್ದವು.
ಪ್ರೋ ನರೇಂದ್ರ ನಾಯಕರಿಗೂ ಕೊಲೆ ಬೆದರಿಕೆ ಇರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಯಾವುದೇ ಷರತ್ತುಗಳಿಲ್ಲದೆ ಅಂಗರಕ್ಷಕ ಭದ್ರತೆಯನ್ನು ಒದಗಿಸಿಕೊಟ್ಟಿದ್ದವು.
ಭದ್ರತಾ ಅಂಗರಕ್ಷಕ ಇರುವ ಸಂದರ್ಭದಲ್ಲೇ ಪ್ರೋ ನರೇಂದ್ರ ನಾಯಕರ ಮೇಲೆ ಹಲವು ಬಾರಿ ಹಲ್ಲೆ ನಡೆಸುವ, ಜೀವಕ್ಕೆ ಹಾನಿ ಮಾಡುವ ಪ್ರಯತ್ನಗಳು ನಡೆದಿರುವ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ.
ಇತ್ತೀಚೆಗೆ 2016 ರಲ್ಲಿ ಕೊಲೆಯಾದ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾರನ್ನು ಬಲಿಪಡೆದ ಸೂತ್ರದಾರರ ಬಂಧನಗೊಳಿಸಲು ನಡೆಸಿದ ಹೋರಾಟದ ನೇತೃತ್ವ ವಹಿಸಿದ ಪ್ರೋ ನರೇಂದ್ರನಾಯಕ್ ಅವರಿಗೆ ನಿರಂತರ ಜೀವ ಬೆದರಿಕೆ ಒಡ್ಡುವ, ವಾಹನಗಳಿಗೆ ಹಾನಿ ಮಾಡುವಂತಹ ಪ್ರಯತ್ನಗಳು ನಡೆದಿದೆ.
ಸದ್ಯ ನ್ಯಾಯಾಲಯದಲ್ಲಿ ವಿನಾಯಕ ಬಾಳಿಗೆ ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಈಗಾಗಲೇ ಆರೋಪಿಗಳು ಸಾಕ್ಷಿದಾರರನ್ನು ಬೆದರಿಸುವ ,ದಿಕ್ಕು ತಪ್ಪಿಸುವ ಪ್ರಯತ್ನಗಳು ಇರೋದರಿಂದ ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಪ್ರೋ ನರೇಂದ್ರ ನಾಯಕರ ಅಂಗರಕ್ಷಕ ಭದ್ರತೆಯನ್ನು ರದ್ದುಗೊಳಿಸಿರುವುದರ ಬಗ್ಗೆ ಹಲವು ಅನುಮಾನಗಳು ಎದ್ದು ಕಾಣುತ್ತಿದೆ.
ಪ್ರೋ ನರೇಂದ್ರ ನಾಯಕರಿಗೆ ಜೀವ ಬೆದರಿಕೆ ಇರುವ ಹಿನ್ನಲೆಯಲ್ಲಿ ಈವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸದೆ ಈ ಹಿಂದಿನಂತೆ ಯಾವುದೇ ಷರತ್ತುಗಳಿಲ್ಲದ ಅಂಗರಕ್ಷಕ ಭದ್ರತೆಯನ್ನು ಒದಗಿಸಿಕೊಡಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.
ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
BIG BOSS
ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ
Published
18 minutes agoon
23/11/2024ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.
ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.
ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?