Home ಕರ್ನಾಟಕ ವಾರ್ತೆ ಕೇರಳ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ರಾಜ್ಯ ಸಮಿತಿ ಸದಸ್ಯತ್ವಕ್ಕೆ ರವೀಶ್ ತಂತ್ರಿ ರಾಜೀನಾಮೆ

ಕೇರಳ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ರಾಜ್ಯ ಸಮಿತಿ ಸದಸ್ಯತ್ವಕ್ಕೆ ರವೀಶ್ ತಂತ್ರಿ ರಾಜೀನಾಮೆ

ಕೇರಳ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ರಾಜ್ಯ ಸಮಿತಿ ಸದಸ್ಯತ್ವಕ್ಕೆ ರವೀಶ್ ತಂತ್ರಿ ರಾಜೀನಾಮೆ

ಕೇರಳ: ಕೇರಳ ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾದ ಪರಿಣಾಮ ಕುಂಟಾರು ರವೀಶ್ ತಂತ್ರಿ ಬಿಜೆಪಿ ರಾಜ್ಯ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ.

ಕಾಸರಗೋಡು ಜಿಲ್ಲಾಧ್ಯಕ್ಷ ಸ್ಥಾನ ವಿಚಾರವಾಗಿ ತಲೆದೋರಿದ ಭಿನ್ನಮತ ಕುಂಟಾರು ರವೀಶ್ ತಂತ್ರಿ ತಲೆದಂಡ ಕಾಣುವಂತಾಗಿದೆ. ಕೇರಳದ ಪ್ರಬಲ ಬಿಜೆಪಿ ನಾಯಕರಾಗಿದ್ದ ರವೀಶ್ ತಂತ್ರಿ ರಾಜ್ಯದಲ್ಲಿರೋ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಪಕ್ಷಗಳಿಗೆ ಸವಾಲಾಗಿದ್ದರು.

ಅಂತೆಯೇ ರಾಜ್ಯ ಸಮಿತಿ ಸದಸ್ಯರೂ ಆಗಿದ್ದ ಇವರು ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದವರೆಗೆ ರವೀಶ್ ತಂತ್ರಿ ಹೆಸ್ರು ಮುನ್ನೆಯಲ್ಲಿದ್ದರೂ, ಕೊನೆಯದಾಗಿ ಕೆ.ಶ್ರೀಕಾಂತ್ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಮಣೆ ಹಾಕಿದ್ದರು. ಮೊದಲೇ ಸುರೇಂದ್ರನ್ ಬಣದ ವಿರೋಧಿಯಾಗಿದ್ದ ಕುಂಟಾರು ರವೀಶ್ ತಂತ್ರಿ ಇದ್ರಿಂದ ಮನನೊಂದು ಹೊರನಡೆದಿದ್ದಾರೆ ಎನ್ನಲಾಗಿದೆ.

ರವೀಶ್ ತಂತ್ರಿ ಅವರು ಈ ಹಿಂದೆ ಬಿಜೆಪಿ ಪಕ್ಷದಿಂದ ವಿಧಾನಸಭೆ ಹಾಗೂ ಲೋಕಸಭೆಗಳಿಗೂ ಸ್ಪರ್ಧಿಸಿ ಎಲ್ ಡಿಎಫ್ ಹಾಗೂ ಯುಡಿಎಫ್ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ನೀಡಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...