DAKSHINA KANNADA
ರವಿ ಅಲೆವೂರಾಯರಿಗೆ ವಾಗೀಶ್ವರೀ ಸಂಮಾನ…
Published
3 years agoon
By
Adminಮಂಗಳೂರು : ಖ್ಯಾತ ಯಕ್ಷಗಾನ ಕಲಾವಿದ,ಕಲಾಗುರು,ಸಂಘಟಕ,ಬರಹಗಾರ ರವಿ ಅಲೆವೂರಾಯ ವರ್ಕಾಡಿ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನ ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ನಡೆಯಿತು.
ಧನ ಸಂಗ್ರಹ ಮಾಡಬಹುದು ಜನ ಸಂಗ್ರಹ ಕಷ್ಟ. ಆದರೆ ಶ್ರೀ ವಾಗೀಶ್ವರೀ ಯಕ್ಷಗಾನ ಸಂಘದ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಯಕ್ಷಗಾನದ ಅಭಿಮಾನಿಗಳು ಇಷ್ಟು ಸಂಖ್ಯೆಯಲ್ಲಿ ಸೇರಿರುವುದು ಸಂತಸದ ವಿಚಾರ ಎಂದು ಶ್ರೀ ಕೃಷ್ಣ ಯಕ್ಷ ಸಭಾದ ಪ್ರಧಾನ ಕಾರ್ಯದರ್ಶಿ ಶ್ರೀ ಸುಧಾಕರ್ ರಾವ್ ಪೇಜಾವರ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.
ಯಕ್ಷ ಎನ್ನುವುದು ತಿರುವು ಮುರುವು ಆಗಿ ಕ್ಷಯ ಆಗಬಾರದು ಎಂಬ ಮಾತನ್ನು ಪೂಜ್ಯ ಪೇಜಾವರ ಶ್ರೀಗಳು ಹೇಳುತ್ತಿದ್ದ ವಿಚಾರವನ್ನು ನೆನಪಿಸಿದರು.
ಹಾಗಾಗಿ ಇಂತಹ ಸಂಘಗಳು ಮಾಡುವಂತಹ ಶತಮಾನೋತ್ಸವ ಕಾರ್ಯಕ್ರಮ, ಸಂಸ್ಮರಣೆ, ಸಮ್ಮಾನ ಸ್ಟುತ್ಯರ್ಹ ಎಂದರು.
ಕೀರ್ತಿಶೇಷ ಲಕ್ಷ್ಮೀನಾರಾಯಣ ಅಲೆವೂರಾಯರ ಸಂಸ್ಮರಣೆಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಸಂಜಯ ಕುಮಾರ್ ರಾವ್ ಮಾಡಿದರು.ವರ್ಕಾಡಿಯಲ್ಲಿ ಕಾವಿ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಮಂಡಳಿಯನ್ನು ಹುಟ್ಟು ಹಾಕುವ ಮೂಲಕ ಯಕ್ಷಗಾನಕ್ಕೆ ಕೊಡುಗೆಯನ್ನು ನೀಡಿದವರು.
ಅರ್ಥಧಾರಿಯೂ, ಪಾತ್ರಧಾರಿಯೂ ಆಗಿ ರಂಗದಲ್ಲಿ ಮಿಂಚಿದವರು ಎಂದು ನೆನಪಿಸಿದರು. ರವಿ ಅಲೆವೂರಾಯರ ಅಭಿನಂದನೆಯನ್ನು ಶ್ರೀ ಜಿ. ಕೆ. ಭಟ್ಟರು ನಿರ್ವಹಿಸಿದರು.
8 ಭಾಷೆಗಳಲ್ಲಿ ವೇಷ ಮಾಡಬಲ್ಲ ಸಮರ್ಥ ಕಲಾವಿದ ಶ್ರೀ ರವಿ ಅಲೆವೂರಾಯ.
ದಾಕ್ಷಾಯಿಣಿ, ದಮಯಂತಿ ಮೊದಲಾದ ಪಾತ್ರಗಳಿಗೆ ಜೀವ ತುಂಬುವ ಕಲಾವಿದ ಇವರು. ಮುಂದಿನ ಪೀಳಿಗೆಗೆ ಯಕ್ಷಗಾನ ಉಳಿಸುವುದಕ್ಕಾಗಿ ಸರಯೂ ಬಾಲ ಯಕ್ಷ ವೃಂದ ಎನ್ನುವ ಸಂಸ್ಥೆಯನ್ನು ತೆಂಕು ತಿಟ್ಟಿನಲ್ಲಿ ಪ್ರಾರಂಭ ಮಾಡಿದವರು ಶ್ರೀ ರವಿ ಅಲೆವೂರಾಯರು ಎಂದರು.
ಶ್ರೀ ವಾಗೀಶ್ವರೀ ಕಲಾವರ್ಧಕ ಸಂಘದ 10 ನೆಯ ಸರಣಿಯ ಸನ್ಮಾನಕ್ಕೆ ಉತ್ತರಿಸಿದ ಶ್ರೀ ರವಿ ಅಲೆವೂರಾಯರು, ಈ ಸಂಘದಲ್ಲಿ ಕದ್ರಿ ನವನೀತ ಶೆಟ್ಟಿ,ಪಿ.ವಿ.ಪರಮೇಶ್ ಮೊದಲಾದ ಹವ್ಯಾಸಿ ಕಲಾವಿದರೊಂದಿಗಿನ ತನ್ನ ಸಾಹಚರ್ಯವನ್ನು ನೆನಪಿಸಿಕೊಂಡರು.
ಸುದೀರ್ಘ ಕಾಲ ತಾಳಮದ್ದಳೆ ಮತ್ತು ಯಕ್ಷಗಾನದಲ್ಲಿ ತಾನು ಸೇವೆಯನ್ನು ಸಲ್ಲಿಸಿದ್ದೇನೆ.
ಇಂದಿನ ಸಮ್ಮಾನ ಅವಿಸ್ಮರಣೀಯ ಎಂದರು.
ಮುಖ್ಯ ಅತಿಥಿಯಾಗಿದ್ದ ಶ್ರೀ ಮಹೇಶ್ ಪಾಂಡೆಯವರು ಯಕ್ಷಗಾನಕ್ಕೆ ಪ್ರೇಕ್ಷಕರ ಕೊಡುಗೆ ಅಪಾರ.ಇಂತಹ ಕಾರ್ಯಕ್ರಮಗಳ ಮೂಲಕ ಇನ್ನಷ್ಟು ಪ್ರೇಕ್ಷಕರು ಯಕ್ಷಗಾನದತ್ತ ಆಕರ್ಷಿತರಾಗಲಿ ಎಂದರು. ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘಕ್ಕೆ ಶುಭವನ್ನು ಹಾರೈಸಿದರು.ಸಿ.ಎಸ್.ಭಂಢಾರಿ,ಶ್ರೀನಾಥ್ ಪ್ರಭು ,ಹರಿಶ್ಚಂದ್ರ ನಾಯ್ಗ ಉಪಸ್ಥಿತರಿದ್ದರು.
ಕೋಶಾಧಿಕಾರಿ ಶ್ರೀ ಶಿವಪ್ರಸಾದ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಬ್ರಹ್ಮಶ್ರೀ ನಾರಾಯಣ ಗುರು ಯಕ್ಷಗಾನ ಮಂಡಳಿ, ಕೊಲ್ಯ, ಸೋಮೇಶ್ವರ ಇದರ ಕಲಾವಿದರಿಂದ ಯುವ ಕಲಾವಿದೆ ಕುಮಾರಿ ಶ್ರೀಹಿತ ಶೆಟ್ಟಿಯವರ ಭಾಗವತಿಕೆಯಲ್ಲಿ “ಸೀತಾಪಹಾರ, ಜಟಾಯು ಮೋಕ್ಷ” ತಾಳಮದ್ದಳೆ ಜರಗಿತು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
2 days agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?