Wednesday, October 20, 2021

ಬಿಜೆಪಿಯ ನಾಯಕರನ್ನು ಭೇಟಿ ಮಾಡಿದ ರವಿ.ಡಿ ಚನ್ನಣ್ಣನವರ್: ಪಕ್ಷ ಸೇರುವ ಮುನ್ಸೂಚನೆ..?

ಬೆಂಗಳೂರು: ಇತ್ತೀಚೆಗೆ ಐಪಿಎಸ್ ಹುದ್ದೆ ತೊರೆದು ಭಾರತೀಯ ಜನತಾ ಪಕ್ಷ ಸೇರಿದ್ದ ಅಣ್ಣಾ ಮಲೈ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಅದೇ ದಾರಿಯಲ್ಲಿ ಮತ್ತೋರ್ವ ಐಪಿಎಸ್‌ ಅಧಿಕಾರಿ ಇದ್ದಾರೆಂಬ ಗುಸುಗುಸು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ನೀಡುವಂತ ಫೊಟೋಗಳು ವೈರಲ್‌ ಆಗಿದೆ.

36 ವರ್ಷದ ಮೂಲತಃ ಗದಗ ಜಿಲ್ಲೆಯ ಐಪಿಎಸ್ ಅಧಿಕಾರಿ ರವಿ. ಡಿ. ಚನ್ನಣ್ಣನವರ್ ರಾಜಕೀಯ ಪ್ರವೇಶ ಪಡೆಯುತ್ತಾರೆ ಎಂಬ ಗುಸುಗುಸು ದೆಹಲಿ ವಲಯದಲ್ಲಿ ಪ್ರಾರಂಭವಾಗಿದೆ. ಇಂತಹದ್ದೊಂದು ಅನುಮಾನ ಮೂಡಲು ಕಾರಣ, ಇತ್ತೀಚೆಗೆ ದೆಹಲಿಯಲ್ಲಿ ರವಿ. ಡಿ. ಚನ್ನಣ್ಣನವರ್ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನುವ ಫೋಟೋ ವೈರಲ್ ಆಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ರನ್ನು ರವಿ. ಡಿ. ಚನ್ನಣ್ಣನವರ್ ಮಂಗಳವಾರ ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ದೆಹಲಿಯ ಅಶೋಕ ರಸ್ತೆಯ ನಂಬರ್ 9 ನಿವಾಸದಲ್ಲಿ ಬಿ.ಎಲ್‌. ಸಂತೋಷ್‌ರನ್ನು ರವಿ. ಚನ್ನಣ್ಣನವರ್ ಭೇಟಿಯಾಗಿ ಪಕ್ಷ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿಯಲ್ಲಿ ಸಚಿವ ಸಂಪುಟ ರಚನೆಗೆ ಹೈಕಮಾಂಡ್‌ನೊಂದಿಗೆ ಚರ್ಚಿಸುತ್ತಿರುವಾಗಲೇ ರವಿ. ಚನ್ನಣ್ಣನವರ್ ಕೂಡಾ ದೆಹಲಿಯಲ್ಲಿದ್ದರು. ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ವರಿಷ್ಠರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದ ವೇಳೆ ಐಪಿಎಸ್ ಅಧಿಕಾರಿ ರವಿ. ಚನ್ನಣ್ಣನವರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಹಲವು ಅನುಮಾನಗಳನ್ನು ಮೂಡಿಸಿದೆ.


ಐಪಿಎಸ್ ಅಧಿಕಾರಿ ರವಿ. ಚನ್ನಣ್ಣನವರ್ ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬೆಂಗಳೂರು ನಗರ ಸಿಐಡಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಪೊಲೀಸ್ ಅಧಿಕಾರಿ ಬಿಜೆಪಿ ಸೇರಿ ಹಳೆ ಮೈಸೂರು ಭಾಗದ ಮೀಸಲು ಕ್ಷೇತ್ರವೊಂದರಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನುತ್ತಿವೆ ಮೂಲಗಳು. ರಾಜಕೀಯ ಇತ್ತೀಚೆಗೆ ರವಿ. ಚನ್ನಣ್ಣನವರ್ ಮಠ- ಮಾನ್ಯಗಳಿಗೆ ಭೇಟಿ ಕೊಡುತ್ತಿದ್ದು, ಚಿತ್ರದುರ್ಗದ ಬಸವ ಮಹಾಸ್ವಾಮೀಜಿ, ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹರಿಹರ ಪೀಠದ ವಚನಾನಂದ ಶ್ರೀ, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಮೈಲಾರಲಿಂಗೇಶ್ವರ ದೇವಸ್ಥಾನಕ್ಕೂ ಹೋಗಿ ಬಂದಿದ್ದರು. ಇದೇ ವೇಳೆ ಮಠಗಳ ಭೇಟಿ ಜೊತೆಗೆ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...