Home ಪ್ರಮುಖ ಸುದ್ದಿ ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿ ಮೇಲೆ ಮಂಗಳೂರಿನಲ್ಲಿದೆ 34 ಕೇಸ್‌ಗಳು

ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿ ಮೇಲೆ ಮಂಗಳೂರಿನಲ್ಲಿದೆ 34 ಕೇಸ್‌ಗಳು

ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿ ಮೇಲೆ ಮಂಗಳೂರಿನಲ್ಲಿದೆ 34 ಕೇಸ್‌ಗಳು

ಮಂಗಳೂರು: ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿ ಮೇಲೆ ಮಂಗಳೂರಿನಲ್ಲಿ 34 ಪ್ರಕರಣಗಳು ದಾಖಲಾಗಿವೆ, ಸೆನೆಗಲ್‌ನಲ್ಲಿ ಬೆಂಗಳೂರು ಪೋಲಿಸರಿಂದ ಬಂಧನಕ್ಕೊಳಗಾದ ರವಿಪೂಜಾರಿ ಪ್ರಸ್ತುತ ಬೆಂಗಳೂರಿನಲ್ಲಿ ಪೋಲಿಸರ ವಶದಲ್ಲಿದ್ದು ಕೊಲೆ, ಕೊಲೆಯತ್ನ, ಸುಲಿಗೆ, ಹಫ್ತಾ ವಸೂಲಿ, ಜೀವ ಬೆದರಿಕೆ ಹೀಗೆ ಅನೇಕ ಪ್ರಕರಣಗಳ ಬಗ್ಗೆ ತನಿಖೆ ಮುಂದುವರಿದೆ.

ಪೋಲಿಸ್‌ ಮೂಲಗಳ ಪ್ರಕಾರ ಇನ್ನೂ 15 ದಿನಗಳ ಕಾಲ ಬೆಂಗಳೂರು ಪೋಲಿಸರು ನ್ಯಾಯಾಲಯದ ಅನುಮತಿ ಪಡೆದು ವಿಚಾರಣೆಗಾಗಿ ವಶದಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಳಿಕ ಮಂಗಳೂರಿಗೆ ಕರೆತರುವ ಬಗ್ಗೆ ಇಲ್ಲಿನ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ 28 ಪ್ರಕರಣಗಳು ದಾಖಲಾಗಿವೆ.

ಇದಲ್ಲದೇ 2015ರಲ್ಲಿ ಆಗಿನ ರಾಜ್ಯ ಸಚಿವರಾದ ಮಾಜಿ ಶಾಸಕ ಬಿ. ರಮಾನಾಥ ರೈ ಮತ್ತು ಅಭಯಚಂದ್ರ ಜೈನ್‌ ಅವರಿಗೂ ಜೀವ ಬೆದರಿಕೆ ಒಡ್ಡಿದ ಪ್ರಕರಣಗಳು ರವಿ ಪೂಜಾರಿ ಮೇಲೆ ದಾಖಲಾಗಿವೆ. ಮೂಡಬಿದಿರೆಯಲ್ಲಿ ನಡೆದ ಭಜರಂಗ ದಳ ಕಾರ್ಯಕರ್ತ ಪ್ರಶಾಂತ್‌ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೆ ಬಂದಿಸುವಂತೆ ಒತ್ತಾಯಿಸಿ ಆಗಿನ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ರಮಾನಾಥ ರೈ ಮೇಲೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಉಳಿದಂತೆ ಮಂಗಳೂರಲ್ಲಿ 2007ರಿಂದ 2018ರ ಮಧ್ಯದಲ್ಲಿ ಅತೀ ಹೆಚ್ಚಿನ ಕೇಸುಗಳು ರವಿ ಪೂಜಾರಿ ಮೇಲೆ ದಾಖಲಾಗಿವೆ. ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯ ಮೂಡಬಿದ್ರೆ, ಕಾವೂರು, ಕದ್ರಿ, ಕೋಣಾಜೆ, ಬರ್ಕೆ ಮತ್ತು ಉರ್ವ ಪೋಲಿಸ್‌ ಠಾಣೆಯಲ್ಲಿ ರವಿ ಪೂಜಾರಿ ಮೇಲೆ ಪ್ರಕರಣ ದಾಖಲಾಗಿವೆ. ಅದಲ್ಲದೆ 2012ರಲ್ಲಿ ಕಿನ್ನಿಗೋಳಿಯಲ್ಲಿ ಉದ್ಯಮಿಯೋರ್ವರಿಗೆ ಹಣದ ಬೇಡಿಕೆಯಿಟ್ಟು ಜೀವ ಬೆದರಿಕೆ ಒಡ್ಡಿದ ಕಾರಣಕ್ಕಾಗಿ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ. ಈ ಎಲ್ಲಾ ಪ್ರಕರಣಗಳು ಮಂಗಳೂರಿನ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ 15 ದಿನಗಳ ಬಳಿಕ ಮಂಗಳೂರಿಗೆ ಕರೆತರುವ ಬಗ್ಗೆ ಮಂಗಳೂರು ಪೋಲಿಸರು ಸಿದ್ಧತೆ ನಡೆಸಿದ್ದಾರೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...