Thursday, September 29, 2022

ಇನ್ಮುಂದೆ ರೂಪಾಯಿ ನೋಟಿನಲ್ಲಿ ಕಾಣಿಸಲಿದ್ದಾರೆ ಟ್ಯಾಗೋರ್‌-ಕಲಾಂ..!

ನವದೆಹಲಿ: ಸ್ವಾತಂತ್ರ್ಯ ಬಂದಾಗಿನಿಂದ ಏಕಾಏಕಿ ನೋಟ್‌ಬ್ಯಾನ್‌ಗೊಳಿಸಿ ಕೇಂದ್ರ ಸರ್ಕಾರ ಶಾಕ್‌ ನೀಡಿ 6 ವರ್ಷ ಕಳೆದರೂ ಹಲವರು ಚೇತರಿಸಿಕೊಂಡಿಲ್ಲ.

ಇದೀಗ ಇದೇ ವಿಚಾರದಲ್ಲಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಸಿದ್ದತೆ ನಡೆಸುತ್ತಿದೆ.


ಇನ್ಮುಂದೆ ನೋಟುಗಳಲ್ಲಿ ರವೀಂದ್ರನಾಥ ಟ್ಯಾಗೋರ್‌ ಹಾಗೂ ಅಬ್ದುಲ್‌ ಕಲಾಂರನ್ನು ಸೇರಿಸಲು ಚಿಂತನೆ ನಡೆಸಿದೆ.
ರವೀಂದ್ರನಾಥ ಟ್ಯಾಗೋರ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳನ್ನು ಅಂದರೆ ಅವರ ವಾಟರ್‌ಮಾರ್ಕ್‌ ಚಿತ್ರಗಳನ್ನು ಹಾಕುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕೆಲವು ಮುಖಬೆಲೆಯ ನೋಟುಗಳಲ್ಲಿ ಗಾಂಧಿ ಜೊತೆಗೆ ಇವರಿಬ್ಬರು ಮಹಾನ್‌ ನಾಯಕರ ಚಿತ್ರ ಅಳವಡಿಸಲು ಮುಂದಾಗಿದೆ ಎನ್ನಲಾಗಿದೆ. ಸದ್ಯ ಇದು ಉನ್ನತ ಮಟ್ಟದಲ್ಲಿ ಚರ್ಚೆಯಲ್ಲಿದೆ ಎನ್ನಲಾಗುತ್ತಿದೆ.

ಆರ್‌ಬಿಐ ಸ್ಪಷ್ಟನೆ

ಈ ಬಗ್ಗೆ ಆರ್‌ಬಿಐ ಸ್ಪಷ್ಟನೆ ನೀಡಿ, ಇಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರಿಗೆ ಕರೆನ್ಸಿ ನೋಟುಗಳಲ್ಲಿ ಗೌರವದ ಸ್ಥಾನ ನೀಡಲಾಗಿದೆ. ಇದನ್ನು ಬದಲಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...