Connect with us

    LATEST NEWS

    ಆರ್‌ಸಿಬಿ ಅಭ್ಯಾಸ ಪಂದ್ಯ ರದ್ದು..! ನಾಲ್ವರು ಉಗ್ರರ ಅರೆಸ್ಟ್

    Published

    on

    ಬೆಂಗಳೂರು: ಇಂದು(ಮೇ.22) ರಾಜಸ್ಥಾನ್ ರಾಯಲ್ಸ್ ಹಾಗೂ ಬೆಂಗಳೂರು ಚಾಲೆಂಜರ್ಸ್ ನಡುವೆ ಇಂದು ಎಲಿಮಿನೇಟೆಡ್ ಪಂದ್ಯ ನಡೆಯಲಿದೆ. ಹಾಗಾಗಿ ನಿನ್ನೆ ಆರ್‌ಸಿಬಿ ಅಭ್ಯಾಸ ಪಂದ್ಯವನ್ನು ಆಡಬೇಕಿತ್ತು. ಆದರೆ ಅದು ರದ್ದಾಗಿದ್ದು ಇದಕ್ಕೆ ಮೂಲ ಕಾರಣ ಈಗ ಹೊರ ಬಿದ್ದಿದೆ.

    virat kohli

    ಆರ್​ಸಿಬಿ ಸುದ್ದಿಗೋಷ್ಠಿಯನ್ನ ರದ್ದುಗೊಳಿಸಿದೆ ಎಂಬ ಮಾತುಗಳು ಕೇಳಿಬಂದಿದೆ. ಜೊತೆಗೆ ಆರ್​ಸಿಬಿ ಅಭ್ಯಾಸವನ್ನು ರದ್ದು ಗೊಳಿಸಿದೆ ಎನ್ನಲಾಗುತ್ತಿದೆ. ಮಂಗಳವಾರ ಆರ್‌ಸಿಬಿ ಗುಜರಾಜ್ ಮೈದಾನದಲ್ಲಿ ಅಭ್ಯಾಸ ನಡೆಸಬೇಕಿತ್ತು. ಆದರೆ ಯಾವುದೇ ಕಾರಣವನ್ನು ಬಿಚ್ಚಿಡದೆ ಆರ್​ಸಿಬಿ ಅಭ್ಯಾಸವನ್ನು ರದ್ದುಗೊಳಿಸಿತು. ಇನ್ನು ರಾಜಸ್ಥಾನ್​ ತಂಡ ಅಭ್ಯಾಸವನ್ನು ನಡೆಸಿದೆ. ಇದಕ್ಕೆ ಮೂಲ ಕಾರಣ ವಿರಾಟ್​ ಕೊಹ್ಲಿಗೆ ಬಂದಿದ್ದ ಭದ್ರತಾ ಬೆದರಿಕೆ. ವಿರಾಟ್‌ ಕೊಹ್ಲಿಗೆ ಭದ್ರತಾ ಬೆದರಿಕೆ ಇರುವ ಕಾರಣ ಆರ್​ಸಿಬಿ ಸುದ್ದಿಗೋಷ್ಟಿ ನಡೆಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

    ನಾಲ್ವರು ಉಗ್ರರ ಬಂಧನ..!

    ಗುಜರಾತ್​ ಪೊಲೀಸರು ಸೋಮವಾರದಂದು ಭಯೋತ್ಪಾದಕರು ಎಂಬ ಶಂಕೆ ಮೇಲೆ ನಾಲ್ವರನ್ನು ಅರೆಸ್ಟ್​ ಮಾಡಿದ್ದರು. ಗುಜರಾತ್​​ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಿದರು. ವಿಚಾರಣೆ ನಡೆಸಿದ ಬಳಿಕ ಬಂಧಿತರ ಅಡುಗು ತಾಣವನ್ನು ಪತ್ತೆಹಚ್ಚಿದ್ದಾರೆ. ಈ ವೇಳೆ ವಿಡಿಯೋಗಳು, ಪಠ್ಯ ಸಂದೇಶಗಳು ಹಾಗೂ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಂಡಿದ್ದಾರೆ.

    Read More..; ಪೆನ್ ಡ್ರೈವ್ ಪ್ರಕರಣ : ಪುತ್ರ ಪ್ರಜ್ವಲ್ ಬಗ್ಗೆ ಹಾಸನದಲ್ಲಿ ರೇವಣ್ಣ ಪ್ರತಿಕ್ರಿಯೆ

    ಈ ವಿಚಾರವನ್ನು ರಾಜಸ್ಥಾನ ರಾಯಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ತಿಳಿಸಲಾಗಿತ್ತು. ಅಹಮದಾಬಾದ್‌ಗೆ ವಿರಾಟ್‌ ಕೊಹ್ಲಿ ಬಂದ ನಂತರ ಈ ವಿಚಾರವನ್ನು ತಿಳಿಸಲಾಗಿದೆ. ವಿರಾಟ್‌ ಕೊಹ್ಲಿ ದೇಶದ ಸಂಪತ್ತು ಮತ್ತು ಅವರ ಭದ್ರತೆ ನಮ್ಮ ಅತ್ಯಂತ ಆದ್ಯತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ವಿಜಯ್ ಸಿಂಗ್ ಜ್ವಾಲಾ ಹೇಳಿದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

    Published

    on

    ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮಳೆಯು 5 ದಿನಗಳ ಕಾಲ ಅಬ್ಬರಿಸಿ ಬೊಬ್ಬಿರಿಯಲಿದೆ. ಬಲವಾದ ಗಾಳಿ ಜೊತೆಗೆ ಮಳೆ ಬೀಳುವ ನಿರೀಕ್ಷೆ ಇದೆ ಎಂದು ತಿಳಿಸಿದೆ.

    ಹೇಗಿರುತ್ತೆ ಮಳೆಯ ಆರ್ಭಟ..?

    22/06/2024: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆ ಆಗಲಿದೆ. ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆ ಆಗಲಿದೆ. ಗುಡುಗು ಸಹಿತ ಭಾರೀ ಗಾಳಿ ಕೂಡ ಬೀಸಲಿದ್ದು, 30-40 kmph ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    23/06/2024: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಮಳೆ ಆಗಲಿದೆ. ಗುಡುಗು ಸಹಿತ ಭಾರೀ ಮಳೆ ಆಗಲಿದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದ ಭಾರೀ ಗಾಳಿ ಮಳೆ ಆಗಲಿದೆ. 30-40 kmph ವೇಗದಲ್ಲಿ ಗಾಳಿ ಬೀಸಲಿದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳ ಕರ್ನಾಟಕದ ದಾವಣಗೆರೆ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ.

    24/06/2024: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಲಿದೆ.

    25-26/06/2024: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    ದಾಖಲಾತಿ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ : ಉಳ್ಳಾಲ ಪೊಲೀಸ್

    Published

    on

    ಉಳ್ಳಾಲ: ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರು ಠಾಣಾ ವ್ಯಾಪ್ತಿಯ ಕೆಲವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ಮನೆಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಈ ಠಾಣಾ ವ್ಯಾಪ್ತಿಯ ಜನರು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು ಎಂದು ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಬಾಲಕೃಷ್ಣ ತಿಳಿಸಿದ್ದಾರೆ.

    ಈ ಪ್ರದೇಶದಲ್ಲಿ ದಾಖಲಾತಿ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ. ಮನೆ ಬಳಿ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರು ಎಂದು ಕಂಡು ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ 9480802315 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಇನ್ಮುಂದೆ ಪರೀಕ್ಷೆಗಳಲ್ಲಿ ಅಕ್ರಮ, ಪೇಪರ್​ ಲೀಕ್ ಮಾಡಿದ್ರೆ 1 ಕೋಟಿ ರೂ ದಂಡ..!

    Published

    on

    ನವದೆಹಲಿ: National Eligibility Test (NET) ಹಾಗೂ National Eligibility cum Entrance Test (NEET) ಪರೀಕ್ಷೆ ಪತ್ರಿಕೆ​ಗಳು ಸೋರಿಕೆ ಆಗಿರೋದು ದೊಡ್ಡ ವಿವಾದವೇ ಸೃಷ್ಟಿಯಾಗಿದೆ. ಈ ಸಂಬಂಧ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಕಾಯ್ದೆ ಜಾರಿಗೆ ತಂದಿದ್ದು, ಕಠಿಣ ಶಿಕ್ಷೆಯ ಜೊತೆಗೆ 1 ಕೋಟಿ ರೂಪಾಯಿ ದಂಡ ಇರುತ್ತದೆ ಎಂದು ಕಾಯ್ದೆ ಹೇಳುತ್ತದೆ.

    ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಗಳನ್ನು ಮೇ 5ರಂದು ನಡೆಸಲಾಗಿತ್ತು. ಈ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿವೆ. ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಸದ್ಯ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ.

    ಬೆನ್ನಲ್ಲೇ ಕೇಂದ್ರ ಸರ್ಕಾರ ಕಠಿಣ ಕಾಯ್ದೆಯನ್ನು ಜಾರಿ ಮಾಡಿದೆ. ಕಾಯ್ದೆ ಪ್ರಕಾರ ಅಪರಾಧಿಗಳಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಇರುತ್ತದೆ ಎಂದು ಕಾಯ್ದೆ ಹೇಳುತ್ತದೆ. ಇದೇ ಕಾಯ್ದೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ), ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ), ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಇಂತಹ ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ ಎಂದು ಹೇಳಲಾಗುತ್ತಿದೆ.

    ಪರೀಕ್ಷೆಯ ಪತ್ರಿಕೆಗಳನ್ನು ಸೋರಿಕೆ ಮಾಡುವ ಅಥವಾ ಉತ್ತರ ಪತ್ರಿಕೆಗಳನ್ನು ತಿದ್ದುವ ಅಪರಾಧಿಗಳಿಗೆ 3 ವರ್ಷಗಳಿಂದ 5 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ಕಾಯ್ದೆ ಸೂಚಿಸುತ್ತದೆ. 10 ಲಕ್ಷ ರೂಪಾಯಿವರೆಗೆ ದಂಡ ಕೂಡ ಕಟ್ಟಬೇಕಾಗುತ್ತದೆ.

    ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಗೊತ್ತಾದರೆ ಪೊಲೀಸರು ವಾರಂಟ್ ಇಲ್ಲದೆ ವ್ಯಕ್ತಿಗಳನ್ನು ಬಂಧಿಸಬಹುದು. ಅಕ್ರಮ ನಡೆದಿರುವುದು ಸತ್ಯವೆಂದು ತಿಳಿದರೆ ಕೋರ್ಟ್​​ನಲ್ಲಿ ತಪ್ಪಿತಸ್ತರಿಗೆ ಜಾಮೀನು ಕೂಡ ಸಿಗುವುದಿಲ್ಲ. ಪ್ರಸ್ತುತ ಅಪರಾಧದ ಬಗ್ಗೆ ಗೊತ್ತಿದ್ದರು ಆದರೆ ಅದನ್ನು ವರದಿ ಮಾಡಲು ವಿಫಲರಾಗುವ ಪರೀಕ್ಷಾ ಸೇವಾ ಪೂರೈಕೆದಾರರಿಗೆ ಹಾಗೂ ದುಷ್ಕೃತ್ಯದಲ್ಲಿ ತೊಡಗುವ ಪರೀಕ್ಷಾ ಅಧಿಕಾರಿಗಳು 1 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು. ಜೊತೆಗೆ ಇವರಿಗೆ 5 ವರ್ಷದಿಂದ 10 ವರ್ಷದವರೆಗೆ ಶಿಕ್ಷೆ ನೀಡಲಾಗುತ್ತದೆ ಎಂದು ಕಾಯ್ದೆ ಹೇಳುತ್ತದೆ.

    Continue Reading

    LATEST NEWS

    Trending