Connect with us

    DAKSHINA KANNADA

    ಮಂಗಳೂರು ವಿಮಾನ ನಿಲ್ದಾಣಕ್ಕೆ ಅಬ್ಬಕ್ಕ, ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ನಾರಾಯಣ ಗುರು ಹೆಸರಿಡಿ-CMಗೆ ಖಾದರ್ ಒತ್ತಾಯ

    Published

    on

    ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಹಾಗೆಯೇ ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡಿದ್ದಾರೆ.


    ಮಂಗಳೂರಿನಲ್ಲಿ ಸ್ವಾತಂತ್ರ್ಯ ವೀರ ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆ ಅನಾವರಣ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬಾವುಟ ಗುಡ್ಡೆಯಲ್ಲಿ ಮಾಡಲಾಗಿರುವ ಪ್ರತಿಮೆ ಅನಾವರಣ ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಚಾರವಾಗಿದೆ.

    ಭವಿಷ್ಯದಲ್ಲಿ ಇದು ವಿದ್ಯಾರ್ಥಿಗಳಿಗೆ ಇತಿಹಾಸ ತಿಳಿಸಲು ಅಗತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ಜಿಲ್ಲೆಯಲ್ಲಿ ಇದ್ದಾರೆ. ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕ ಮಹತ್ವ ನಮ್ಮವರಿಗೆ ಸಿಕ್ಕಿಲ್ಲ.

    ಹಾಗಾಗಿ ಪಠ್ಯ ಪುಸ್ತಕದಲ್ಲಿ ರಾಮಯ್ಯ ಗೌಡರ ಪಠ್ಯ ಸೇರಿಸಬೇಕು, ಸರ್ಕಾರ ಆ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಬೇಕು ಎಂದು ಯು.ಟಿ.ಖಾದರ್ ಸಿಎಂ‌ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರದ್ದು ಜಾತಿ, ಧರ್ಮ ಮೀರಿ ನಿಂತ ವ್ಯಕ್ತಿತ್ವವಾಗಿತ್ತು.

    ಸ್ವಾತಂತ್ರ್ಯ ಹೋರಾಟಗಾರರ ತತ್ವ ನಮಗೆ ಮುಖ್ಯ ಆಗಬೇಕು. ಅವರೆಲ್ಲರ ಇತಿಹಾಸಗಳು ಪಠ್ಯದಲ್ಲಿ ದಾಖಲಾಗಿ ಮುಂದಿನ ಪೀಳಿಗೆಗೆ ತಿಳಿಯುವಂತಾಗಲಿ ಎಂದರು.


    ಜಾತಿ ಆಧಾರದಲ್ಲಿ ಇವತ್ತು ನಾವು ಹೋರಾಟಗಾರರನ್ನು, ಇತಿಹಾಸ ಪುರುಷರನ್ನು ನೆನಪಿಸುವಂತಹ ಕಾಲ ಬಂದಿದೆ. ಆದ್ದರಿಂದ ಜಾತಿ, ಧರ್ಮ, ಮತ ಮರೆತು ಸ್ವಾತಂತ್ರ್ಯ ಹೋರಾಟಗಾರರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು. ಅವರ ತತ್ವ, ಆದರ್ಶ ತೆಗೆದುಕೊಳ್ಳಬೇಕು ಹೊರತು ಜಾತಿ, ಧರ್ಮವನ್ನಲ್ಲ.

    ಬೊಮ್ಮಾಯಿಯನ್ನು ಹೊಗಳಿದ ಖಾದರ್‌ ಜಿಲ್ಲೆಗೆ ನಿರ್ಮಲಾನಂದನಾಥ ಸ್ವಾಮೀಜಿಯವರ ಮಾರ್ಗದರ್ಶನ ಬೇಕು. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಜಿಲ್ಲೆಗೆ ಯಾವುದೇ ಯೋಜನೆ ಕೇಳಿದರೂ ಕೂಡ ಇಲ್ಲ ಅಂದಿಲ್ಲ.

    ಮಂಗಳೂರು ಏರ್‌ಪೋರ್ಟ್‌ಗೆ ವೀರರಾಣಿ ಅಬ್ಬಕ್ಕ ಹಾಗೂ ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಗಮನಹರಿಸಲಿ ಎಂದು ಖಾದರ್ ಮನವಿ ಮಾಡಿದರು. ಬಸವರಾಜ ಬೊಮ್ಮಾಯಿಗೆ ಖಾದರ್‌ ಬೇಡಿಕೆ ಜೊತೆಗೆ ಈ ವೇದಿಕೆಯಲ್ಲಿ ಜಿಲ್ಲೆಗೆ 100 ಕೋಟಿ ಅನುದಾನ ಘೋಷಣೆ ಮಾಡಲಿ.

    ಅಲ್ಲದೇ 2ಎ ಮೀಸಲಾತಿ ಇನ್ನು ‌ಮುಂದೆ ಯಾರಿಗೂ ಕೊಡುವುದು ಬೇಡ. ಇದರಿಂದ ಜಿಲ್ಲೆಯ ಹಲವು ಜಾತಿಗಳಿಗೆ ಸಮಸ್ಯೆ ಆಗುತ್ತದೆ. ಇದನ್ನು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಕೇಳಿಕೊಳ್ಳುತ್ತೇವೆ ಅಂತಾ ಯು.ಟಿ.ಖಾದರ್ ಹೇಳಿದರು.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending