Connect with us

    LATEST NEWS

    ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆಗೆ ಯತ್ನ…!

    Published

    on

    ಬೆಂಗಳೂರು : ರಿಯಲ್ ಎಸ್ಟೆಟ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
    ಸಾಯಿ ಡೆವಲಪರ್ಸ್ ಮಾಲೀಕ ಉದ್ಯಮಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ.
    ಆರ್ ಆರ್ ನಗರದ ತನ್ನ ಮನೆಯಲ್ಲಿ ಪ್ರಭಾಕರ್ ರೆಡ್ಡಿ ಪೆನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೆಡ್ಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
    ರಿಯಲ್ ಎಸ್ಟೆಟ್ ಉದ್ಯಮಿಯಾಗಿರುವ ಪ್ರಭಾಕರ್ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
    ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.ಆಸ್ಪತ್ರೆಗೆ‌ ಭೇಟಿ ನೀಡಿ ಆರ್ ಆರ್ ನಗರ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !

    Published

    on

    ಮಂಗಳೂರು/ಮಂಡ್ಯ: ರಾಜ್ಯದಲ್ಲಿ ಕಳ್ಳತನ ಎನ್ನುವುದು ಸಾಮಾನ್ಯವಾಗಿದೆ. ಕಳ್ಳರು ಕದ್ದ ಚಿನ್ನಾಭಾರಣಗಳನ್ನು ಎಲ್ಲಿಯಾದರೂ ಮಾರಿ ಬಿಡುತ್ತಾರೆ. ಆದರೆ ಕಳ್ಳರಲ್ಲೂ ಪ್ರಾಮಾಣಿಕತೆ ಇದೆ ಎಂದು ಮಂಡ್ಯದಲ್ಲಿ ಸಾಕ್ಷಿಯಾಗಿದೆ.

     

     

    ಈ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದೇಗೌಡ ಎಂಬುವವರ ಕುಟುಂಬ ಮನೆದೇವರ ಪೂಜೆಗೆಂದು ಹೋಗಿದ್ದರು. ಈ ವೇಳೆ ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿದ್ದ ಕಳ್ಳರು ಬೀರುವನ್ನು ಒಡೆದು ಕಳ್ಳತನ ಮಾಡಿದ್ದರು. ಈ ವೇಳೆ 50 ಗ್ರಾಂ ಚಿನ್ನದ ಸರ, 10 ಗ್ರಾಂ ಚೈನ್, 15 ಗ್ರಾಂನ ಮೂರು ಜೊತೆ ಓಲೆಗಳು ಸೇರಿ ಒಟ್ಟು 75 ಗ್ರಾಂನಷ್ಟು ಚಿನ್ನಾಭರಣ ಕದ್ದಿದ್ದರು.

    ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ 


    ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಕಳ್ಳರಿಗೆ ಪೊಲೀಸರ ಭಯವೋ ಅಥವಾ ಮನೆದೇವರ ಆಶೀರ್ವಾದವೋ ಗೊತ್ತಿಲ್ಲ, ಪೊಲೀಸರಿಗೆ ದೂರು ನೀಡಿದ ಎರಡು ದಿನಗಳ ನಂತರ ಕಳ್ಳರು ಮನೆಯ ಮುಂಭಾಗದ ಜಗಲಿಯ ಮೇಲೆ ಚಿನ್ನಾಭರಣಗಳನ್ನು ಇಟ್ಟು ಹೋಗಿದ್ದಾರೆ.
    ಚಿನ್ನಾಭರಣ ವಾಪಸ್ಸು ಸಿಕ್ಕ ಖುಷಿಯಲ್ಲಿ ಸಿದ್ದೇಗೌಡರ ಕುಟುಂಬ ನಿರಾಳವಾಗಿದೆ.

    Continue Reading

    LATEST NEWS

    WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    Published

    on

    ಮಂಗಳೂರು/ಕಾನ್ಪುರ : ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲು ಹತ್ತುವ ವೇಳೆ ಅಥವಾ ಇಳಿಯುವ ವೇಳೆ ಆಯತಪ್ಪಿ ಬಿದ್ದ ಘಟನೆಗಳು ಸಂಭವಿಸಿವೆ. ಕೆಲವೊಮ್ಮೆ ಅದೃಷ್ಟವಶಾತ್, ಪಾರಾಗಿರುವುದಿದೆ. ರೈಲ್ವೇ ಸಿಬ್ಬಂದಿ ರಕ್ಷಿಸಿರುವ ಘಟನೆಗಳೂ ಇವೆ. ಇಂತಹ ಹಲವು ವೀಡಿಯೋಗಳು ವೈರಲ್ ಆಗಿವೆ. ಇದೀಗ ಮತ್ತೊಂದು ಅಂತಹುದೇ ವೀಡಿಯೋ ವೈರಲ್ ಆಗಿದೆ.


    ರೈಲು ಬಂದು ನಿಂತಿತ್ತು. ಮಹಿಳೆ ರೈಲು ಹತ್ತಿದ್ದರು. ಆದರೆ, ಮಕ್ಕಳು ಪ್ಲಾಟ್ ಫಾರ್ಮ್ ನಲ್ಲಿಯೇ ಉಳಿದಿದ್ದರು.  ಮಕ್ಕಳು ಅಲ್ಲೇ ಇರುವುದನ್ನು  ನೋಡಿ ಮಹಿಳೆ ಮಕ್ಕಳನ್ನು ಕರೆದಿದ್ದಾರೆ. ಅವರು ಬರದೇ ಇದ್ದಾಗ ರೈಲಿನಿಂದ ಕೆಳಗೆ ಹಾರಲು ಯತ್ನಿಸಿದ್ದಾರೆ. ಈ ವೇಳೆ  ಆಯತಪ್ಪಿ ರೈಲು ಹಾಗೂ ಪ್ಲಾರ್ಟ್ ಫಾರ್ಮ್ ನಡುವೆ ಸಿಲುಕಿಕೊಂಡಿದ್ದಾರೆ. ತಕ್ಷಣ ರೈಲ್ಬೇ ಪೊಲೀಸರು ಆಕೆಯನ್ನು ರಕ್ಷಿಸಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.

    ಸದ್ಯ ಘಟನೆಯ ವೀಡಿಯೋ ವೈರಲ್ ಆಗಿದ್ದು, ಇದು ಕಾನ್ಪುರ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.  ಮಹಿಳೆಯನ್ನು ಜಿಆರ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಸಾಗರ್ ಶುಕ್ಲಾ ಮತ್ತು ಕಾನ್‌ಸ್ಟೇಬಲ್ ಅನೂಪ್ ಕುಮಾರ್ ಪ್ರಜಾಪತಿ ರಕ್ಷಿಸಿದ್ದಾರೆ.

    ಇದನ್ನೂ ಓದಿ : ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !

    11 ಸೆಕೆಂಡುಗಳಈ ವೀಡಿಯೋದಲ್ಲಿ ಇಬ್ಬರು ರೈಲ್ವೆ ಸಿಬ್ಬಂದಿ ರೈಲಿನಿಂದ ಜಿಗಿದ ಮಹಿಳೆಯನ್ನು ರಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ಆಕೆ ಬಿದ್ದ ಕೆಲವೇ ಕ್ಷಣಗಳಲ್ಲಿ ಜಿಆರ್‌ಪಿ ಸಿಬ್ಬಂದಿ ಆಕೆಯನ್ನು ಹಿಡಿದು ರಕ್ಷಿಸಿದ್ದು, ವ್ಯಾಪಕ ಮೆಚ್ಚುಗೆ ಗಳಿಸಿದೆ.

    Continue Reading

    LATEST NEWS

    Trending