Connect with us

    DAKSHINA KANNADA

    ನಗರ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ದಾಖಲೆಯ 4500 ಕೋಟಿ ರೂ. ಅನುದಾನ – ಶಾಸಕ ವೇದವ್ಯಾಸ್ ಕಾಮತ್

    Published

    on

    ಇನ್ನಷ್ಟು ಹೆಚ್ಚಿನ ಅನುದಾನದ ಮೂಲಕ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ನಡೆದು 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

    ಮಂಗಳೂರು : ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಅದು ಜನರ ಕಣ್ಣ ಮುಂದಿದೆ. 

    ಮುಂದಿನ ಅವಧಿಯಲ್ಲಿ ಈಗ ಪ್ರಗತಿಯಲ್ಲಿರುವ ಕಾಮಗಾರಿಗಳು ಸಂಪೂರ್ಣಗೊಳ್ಳಲಿದ್ದು, ಇನ್ನಷ್ಟು ಹೆಚ್ಚಿನ ಅನುದಾನದ ಮೂಲಕ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ನಡೆದು 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

    ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸೋಮವಾರ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ಧಿಯ ಕುರಿತಾದ “ಅಭಿವೃದ್ಧಿ ಪಥ” ಪುಸ್ತಕ ಬಿಡುಗಡೆಗೊಳಿಸಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

    ತನ್ನ ಅವಧಿಯಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು, ನಗರಕ್ಕೆ ಅತೀ ಮುಖ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜಲಸಿರಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, 70 – 80 ದಶಕದ ಹಳೆ ಪೈಪುಗಳನ್ನು ಬದಲಾಯಿಸಿ ಹೊಸ ಪೈಪುಗಳ ಜೋಡಣೆ ಮಾಡಲಾಗುತ್ತಿದ್ದು, ಅದಕ್ಕಾಗಿ 792 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.

    ನೀರಿನ ಪೈಪುಗಳಲ್ಲಿ ಲೋಪ ಕಂಡು ಬಂದಲ್ಲಿ ಅದನ್ನು ತಕ್ಷಣ ಪರಿಹರಿಸಲು ಪಾಲಿಕೆಯಲ್ಲಿ ಕಂಪ್ಯೂಟರಿಕೃತ ವ್ಯವಸ್ಥೆಯ ಮೂಲಕ ಕ್ರಮ ಕೈಗೊಳ್ಳುವ ವಿಶೇಷ ವ್ಯವಸ್ಥೆ ಮಾಡಲಾಗುವುದು.

    ನಮ್ಮ ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 300 ಕೋಟಿ ರೂಗಳನ್ನು ಬಳಸಿ ಒಳಚರಂಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

    ಕೊರೊನಾ ಅವಧಿಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರಿಗೆ ತೆರಳಿ ಕಡಿಮೆ ಸಂಖ್ಯೆಯಲ್ಲಿ ಮಂಗಳೂರಿಗೆ ಮತ್ತೆ ಬಂದಿದ್ದು ಈ ಯೋಜನೆ ಪೂರ್ಣಗೊಳ್ಳಲು ತಡವಾಗಿರಬಹುದು.

    ಆದರೆ ಪ್ರಸ್ತುತ ಈ ಕಾರ್ಯ ಈ ವೇಗ ಪಡೆದುಕೊಂಡಿದ್ದು, 2025 ರಲ್ಲಿ ಪೂರ್ಣಗೊಳ್ಳಲಿದೆ.

    ಕಳೆದ ಐದು ವರ್ಷಗಳಲ್ಲಿ 25 ಕ್ಕೂ ಹೆಚ್ಚಿನ ಕೆರೆಗಳನ್ನು ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, 10-15 ಈಗಾಗಲೇ ಅಭಿವೃದ್ಧಿಯಾಗಿದ್ದು, ಉಳಿದ 20 ಕೆರೆಗಳು ಅಭಿವೃದ್ಧಿಯಾಗುತ್ತಿವೆ. 53 ಪಾರ್ಕುಗಳು ಅಭಿವೃದ್ಧಿಯಾಗುತ್ತಿದ್ದು, ಕೆಲವು ಹೊಸ ಉದ್ಯಾನವನಗಳು ಕೂಡ ತಲೆಎತ್ತಲಿವೆ.

    ವೃತ್ತಗಳಿಗೂ ಹೊಸ ರೂಪ, ನೀಡಲಾಗುತ್ತಿದ್ದು, ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಮಂಜೇಶ್ವರ ಗೋವಿಂದ ಪೈ, ಮಂಗಳಾದೇವಿ ವೃತ್ತಗಳು ಅಭಿವೃದ್ಧಿಯಾಗಿವೆ.

    (ಬಾಕ್ಸಿನಲ್ಲಿ) ನೀರಾವರಿ ಇಲಾಖೆಯಿಂದ 125 ಕೋಟಿ ರೂ ಅನುದಾನ ಬಳಸಿ ಬೃಹತ್ ತಡೆಗೋಡೆ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ.

    400 ಹೆಚ್ಚು ಕಿಲೋ ಮೀಟರ್ ರಾಜಕಾಲುವೆ ತಡೆಗೋಡೆಗಳು ನಿರ್ಮಾಣವಾಗಲು 1500 ಕೋಟಿ ರೂ ಅಗತ್ಯವಿದ್ದು, ಈಗ ಬಿಡುಗಡೆಯಾಗಿರುವ ಅನುದಾನದಲ್ಲಿ 70 ಶೇಕಡಾ ಕಾಮಗಾರಿಗಳು ನಡೆದಿದ್ದು, ಉಳಿದ ಕಾಮಗಾರಿಗಳು ನಡೆಯಲಿವೆ.

    ನಗರ ಪ್ರದೇಶಕ್ಕೆ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುವುದು ದಾಖಲೆಯಾಗಿದ್ದು, ನಮ್ಮ ಪ್ರಯತ್ನ ಯಶಸ್ವಿಯಾಗಿದೆ.
    (ಬಾಕ್ಸಿನಲ್ಲಿ) ಒಂದೇ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಸರಕಾರಿ ಡಿಗ್ರಿ ಕಾಲೇಜುಗಳಿಗೆ ನ್ಯಾಕ್ ಎ ಸ್ಥಾನಮಾನ ಸಿಕ್ಕಿರುವುದು ಇಡೀ ದೇಶ ಅಥವಾ ಇಡೀ ರಾಜ್ಯದಲ್ಲಿ ಒಂದು ವಿಶೇಷ ಎನ್ನಬಹುದು.

    ನ್ಯಾಕ್ ಎ ಗ್ರೇಡ್ ಸ್ಥಾನಮಾನ ಸಿಗಬೇಕಾದರೆ ಪೂರೈಸಬೇಕಾದ ಮಾನದಂಡಗಳನ್ನು ಒಂದು ಕೋಟಿ ರೂ ವೆಚ್ಚದಲ್ಲಿ ಪೂರೈಸಲಾಗಿದ್ದು, ಮುಂದಿನ ದಿನಗಳಲ್ಲಿ ಆ ಕಾಲೇಜುಗಳಿಗೆ 10 ರಿಂದ 15 ಕೋಟಿ ರೂ ಅನುದಾನ ಕೇಂದ್ರ ಮತ್ತು ರಾಜ್ಯದಿಂದ ಬರುವ ವ್ಯವಸ್ಥೆ ಮಾಡಿದ್ದೇನೆ.

    ರಥಬೀದಿ ಡಿಗ್ರಿ ಕಾಲೇಜು, ಬಲ್ಮಠ ಡಿಗ್ರಿ ಕಾಲೇಜು, ವಿಶ್ವವಿದ್ಯಾನಿಲಯದ ಡಿಗ್ರಿ ಕಾಲೇಜು ಈ ಯೋಜನೆಯ ಲಾಭ ಪಡೆದುಕೊಂಡಿದೆ.

    ಮಹಿಳಾ ಮತ್ತು ಪುರುಷ ಐಟಿಐ ತಲಾ 36 ಕೋಟಿ, ಜರ್ಮನ್ ತಂತ್ರಜ್ಞಾನ ಅಳವಡಿಕೆಗೆ 21 ಕೋಟಿ ರೂ ಬಳಸಿ ಅಭಿವೃದ್ಧಿ ಮಾಡಲಾಗಿದೆ. ಹಲವು ಹೊಸ ಶಾಲೆ, ಕಾಲೇಜುಗಳ ಆರಂಭ, ಅಭಿವೃದ್ಧಿ ನಡೆದಿವೆ.

    ಆರೋಗ್ಯ ಕ್ಷೇತ್ರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹಕಾರದಿಂದ ಉತ್ತಮ ವ್ಯವಸ್ಥೆ ಮಾಡಲಾಗಿದ್ದು, ನಾನು ಶಾಸಕನಾಗುವ ಮೊದಲು ವೆನಲಾಕ್ ನಲ್ಲಿ 12 ಇದ್ದ ವೆಂಟಿಲೇಟರ್ ಸಂಖ್ಯೆ ಈಗ 165 ಆಗಿದೆ.

    250 ಆಕ್ಸಿಜನ್ ಬೆಡ್, 50 ಕೋಟಿ ವೆಚ್ಚದಲ್ಲಿ ಸರ್ಜಿಕಲ್ ಬ್ಲಾಕ್, ಆಕ್ಸಿಜನ್ ಪ್ಲಾಂಟ್, 30 ಕೋಟಿ ರೂ ವೆಚ್ಚದಲ್ಲಿ ಲೇಡಿಗೋಶನ್ ಆಸ್ಪತ್ರೆ ನವೀಕರಣ, ತಾಯಿ-ಮಗು ವಿಶೇಷ ಚಿಕಿತ್ಸಾ ಕ್ರಮದ ಅಭಿವೃದ್ಧಿ, ನಾಲ್ಕು ನಮ್ಮ ಕ್ಲಿನಿಕ್ ಕೂಡ ವ್ಯವಸ್ಥೆಗೊಳಿಸಲಾಗಿದೆ.

    ಕ್ರೀಡಾಳುಗಳಿಗೆ ಮಂಗಳಾ ಕ್ರೀಡಾಂಗಣದಲ್ಲಿ ಅತ್ಯುನ್ನತ ಮೂಲಭೂತ ಸೌಕರ್ಯ ಮತ್ತು ಉನ್ನತೀಕರಣ, ಬಂದರು ಮತ್ತು ಮೀನುಗಾರಿಕಾ ಅಭಿವೃದ್ಧಿಗಾಗಿ 65 ಕೋಟಿ ರೂ ವೆಚ್ಚದಲ್ಲಿ ಬೆಂಗ್ರೆಯಲ್ಲಿ ಜೆಟ್ಟಿ ನಿರ್ಮಾಣ ನಡೆಯಲಿದ್ದು, ಅನೇಕ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.

    ಪ್ರವಾಸೋದ್ಯಮ ಬೆಳವಣಿಗಾಗಿ ನೇತ್ರಾವತಿ ನದಿ ತೀರದಿಂದ ಸುಲ್ತಾನ್ ಭತ್ತೇರಿ ತನಕ ರಿವರ್ ಫ್ರಂಟ್ ಯೋಜನೆ ಕೂಡ ಜಾರಿಗೆ ಬರಲಿದೆ.

    ಸ್ವಯಂಘೋಷಿತ ಆಸ್ತಿ ತೆರಿಗೆ, ಈ ಖಾತಾ ಆನ್ ಲೈನ್ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಬಿಲ್ ಮತ್ತು ಇತರ ಕಾರ್ಯಗಳು ಕೂಡ ಪಾಲಿಕೆಯಲ್ಲಿ ಆನ್ ಲೈನ್ ಆಗಲಿವೆ.

    ತುಳುನಾಡಿನ ಸಂಸ್ಕೃತಿ, ಆಚಾರಗಳನ್ನು ಮುಂದಿನ ತಲೆಮಾರಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಹುಲಿವೇಷದೊಂದಿಗೆ ಕುಣಿತ, ಪ್ರವಾಸೋದ್ಯಮ ಬೆಳವಣಿಗೆ ಬೀದಿಆಹಾರ ಉತ್ಸವ ಕೂಡ ಮಾಡಿದ್ದು ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

    ಸುದ್ದಿಗೋಷ್ಟಿಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಚುನಾವಣಾ ಉಸ್ತುವಾರಿ ಸುಪ್ರಸಾದ್ ಶೆಟ್ಟಿ, ಮಂಡಲ ಬಿಜೆಪಿ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಗಳಾದ ದಿವಾಕರ್ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ ಪ್ರಮುಖರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ರೂಪಾ ಡಿ ಬಂಗೇರ, ಸುರೇಂದ್ರ ಜೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending