LATEST NEWS
ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ನವದೆಹಲಿ: ಭಾರತೀಯ ಸೇನೆಯು ಮೆಟೀರಿಯಲ್ ಅಸಿಸ್ಟೆಂಟ್, ಲೋವರ್ ಡಿವಿಷನ್ ಕ್ಲರ್ಕ್ (LDC), ಫೈರ್ಮ್ಯಾನ್, ಟ್ರೇಡ್ಸ್ಮ್ಯಾನ್ ಮೇಟ್, MTS (ಮಾಲಿ), MTS (ಮೆಸೆಂಜರ್) ಮತ್ತು ಡ್ರಾಫ್ಟ್ಸ್ಮ್ಯಾನ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ https://indianarmy.nic.in/ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಮೆಟೀರಿಯಲ್ ಅಸಿಸ್ಟೆಂಟ್ 3 ಹುದ್ದೆಗಳು
ಲೋವರ್ ಡಿವಿಷನ್ ಕ್ಲರ್ಕ್ (LDC) 3 ಹುದ್ದೆಗಳು
ಫೈರ್ಮ್ಯಾನ್ 14 ಹುದ್ದೆಗಳು
ಟ್ರೇಡ್ಸ್ಮ್ಯಾನ್ ಮೇಟ್ 150 ಹುದ್ದೆಗಳು
MTS (ಮಾಲಿ) 2 ಹುದ್ದೆಗಳು
MTS (ಮೆಸೆಂಜರ್) 1 ಹುದ್ದೆಗಳು
ಡ್ರಾಫ್ಟ್ಮ್ಯಾನ್ 1 ಹುದ್ದೆಗಳು
ಅರ್ಹತಾ ಮಾನದಂಡಗಳು:
ಮೆಟೀರಿಯಲ್ ಅಸಿಸ್ಟೆಂಟ್- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು ಅಥವಾ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಮಾಡಿರಬೇಕು.
ಲೋವರ್ ಡಿವಿಷನ್ ಕ್ಲರ್ಕ್ (LDC) 12ನೇ ತರಗತಿ ಪಾಸ್ ಅಥವಾ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಫೈರ್ಮ್ಯಾನ್, ಟ್ರೇಡ್ಸ್ಮ್ಯಾನ್ ಮೇಟ್, MTS (ಮಾಲಿ), MTS (ಮೆಸೆಂಜರ್) ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಾಲಾ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು.
ಡ್ರಾಫ್ಟ್ಸ್ಮನ್ ಯಾವುದೇ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ತತ್ಸಮಾನ ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿ ಪಾಸ್ ಮತ್ತು ಡ್ರಾಫ್ಟ್ಸ್ಮ್ಯಾನ್ಶಿಪ್ನಲ್ಲಿ ಎರಡು ವರ್ಷಗಳ ಡಿಪ್ಲೊಮಾ / ಪ್ರಮಾಣಪತ್ರ (ಸಿವಿಲ್) ಹೊಂದಿರಬೇಕು.
ವಯೋಮಿತಿ:
18 ರಿಂದ 25 ವರ್ಷಗಳ ನಡುವಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವೇತನ:
ಮೆಟೀರಿಯಲ್ ಅಸಿಸ್ಟೆಂಟ್ ರೂ. 29200/-
ಲೋವರ್ ಡಿವಿಷನ್ ಕ್ಲರ್ಕ್ (ಎಲ್ಡಿಸಿ) ರೂ. 1900/-
ಫೈರ್ಮ್ಯಾನ್ ರೂ, 19000/-
ಟ್ರೇಡ್ಸ್ಮ್ಯಾನ್ ಮೇಟ್ ರೂ. 18000/-
ಎಂಟಿಎಸ್ (ಮಾಲಿ) ರೂ. 18000/-
ಎಂಟಿಎಸ್ (ಮೆಸೆಂಜರ್) ರೂ. 18000/-
ಡ್ರಾಫ್ಟ್ಮ್ಯಾನ್ – ರೂ. 25500/
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ https://indianarmy.nic.in/Site/NewsDetail/frmNewsDetails.aspx?MnId=wZKaJTvhq6pc+/CjfB48LQ&NewsID=czm4QqXrDZCoT+Onmu52dg== ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅಧಿಸೂಚನೆಗಾಗಿ
https://images.news18.com/ibnkhabar/uploads/2022/06/Indian-Army-36-FAD-Notification-2022-Apply-Now-MTS-LDC-Asst-383-Post.pdf ಕ್ಲಿಕ್ ಮಾಡಿ.
DAKSHINA KANNADA
‘ನಾಟು ನಾಟು’ ರೀತಿಯ ಸಾಂಗ್..! ಕುತೂಹಲ ಮೂಡಿಸಿದ ‘ವಾರ್ 2’
2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್ಟಿಆರ್ ಜೊತೆಯಾಗಿದ್ದಾರೆ.
ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್ ರಾಜ್ ಫಿಲಂಸ್ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್ಟಿಆರ್ ಅವರ ಆಸ್ಕರ್ ಅವಾರ್ಡ್ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್ಟಿಆರ್ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.
ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.
LATEST NEWS
ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mohammed Naufal
03/06/2022 at 12:27 PM
I interested this job