Connect with us

    BELTHANGADY

    ಬೆಳ್ತಂಗಡಿಯಲ್ಲಿ ಅಚ್ಚರಿಗೆ ಕಾರಣವಾದ ಕೆಂಪು ಮಳೆ…!

    Published

    on

    ಬೆಳ್ತಂಗಡಿ: ಕೆಂಪು ಮಳೆ ಸುರಿದ ಅಚ್ಚರಿಯ ಘಟನೆಯೊಂದು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ನಡೆದಿದೆ.


    ಕಲ್ಮಂಜ ವ್ಯಾಪ್ತಿಯ ಗಡಿಕಲ್ಲು ಶಾನುಭೋಗ್ ನಿವಾಸಿ ದಿವಾಕರ ಗೌಡ ಎಂಬವರ ಮನೆಯ ಪರಿಸರದಲ್ಲಿ ಕೆಂಪು ಮಳೆ ಸುರಿದಿದೆ. ಹೀಗಾಗಿ ನಿಡುಗಲ್ಲು ಪ್ರದೇಶದ ಜನರು ಕೆಂಪು ಮಡಿಯನ್ನು ವೀಕ್ಷಿಸಿ ಆಶ್ಚರ್ಯಚಕಿತರಾಗಿದ್ದಾರೆ.

    ಹವಾಮಾನ ಇಲಾಖೆಯ ತಜ್ಞರ ಅಧ್ಯಯನದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.
    ಕೇವಲ ಇಲ್ಲಿ ಮಾತ್ರವಲ್ಲದೆ ಬೆಳ್ತಂಗಡಿಯ ಶಿರ್ಲಾಲು ಎಂಬ ಪ್ರದೇಶದಲ್ಲಿ ಕೂಡಾ ಕೆಂಪು ಮಳೆ ಸುರಿದಿದೆ.

    Click to comment

    Leave a Reply

    Your email address will not be published. Required fields are marked *

    BELTHANGADY

    ಬೆಳ್ತಂಗಡಿ: ದನಗಳ ಅಕ್ರಮ ಸಾಗಾಟ ಪತ್ತೆ: ನಾಲ್ವರ ಬಂಧನ

    Published

    on

    ಬೆಳ್ತಂಗಡಿ: ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ.

    ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

    ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

    ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    BELTHANGADY

    ಗಾಂಜಾ ಸಾಗಾಟ ಪ್ರಕರಣ: ಓರ್ವ ಆರೋಪಿ ಸೆರೆ

    Published

    on

    ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್‌ ಸಹಿತ ಒಟ್ಟು 1,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

    ಬೆಳ್ತಂಗಡಿಯ ಕುಕ್ಕೇಡಿಯ ಗೋಳಿಯಂಗಡಿ ನಿವಾಸಿ ಅಬುತಾಹಿರ್ ಯಾನೆ ಅನ್ವರ್ (25) ಬಂಧಿತ ಆರೋಪಿ. ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್‌ನಲ್ಲಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

    ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ನರೇಂದ್ರ, ಎಎಸ್‌ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

    Continue Reading

    BELTHANGADY

    ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾ*ವು

    Published

    on

    ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾ*ವನ್ನಪ್ಪಿರುವ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊರಲೆ ಎಂಬಲ್ಲಿ ನಡೆದಿದೆ.

    ಇಲ್ಲಿನ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಪಿಯಾ (6) ಮೃ*ತ ಬಾಲಕಿ.

    ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾ*ವನ್ನಪ್ಪಿದೆ ಎನ್ನಲಾಗಿದೆ. ಕೇರ್ಯ ಮಸೀದಿಯಲ್ಲಿ ದಫನ ಅಂ*ತ್ಯ ಸಂ*ಸ್ಕಾ*ರ ನಡೆಯಿತು. ಜಮಾತ್ ಅಧ್ಯಕ್ಷರ ರಶೀದ್‌ ಕುಂಡಡ್ಕ ಮತ್ತು ಜಮಾತ್ ಶಿಕ್ಷಕರು ಉಪಸ್ಥಿತರಿದ್ದರು.

    Continue Reading

    LATEST NEWS

    Trending