Connect with us

    ಮರೆಯಾದ ಭೂಗತಲೋಕದ ಮಾಜಿ ಡಾನ್ ಮುತ್ತಪ್ಪ ರೈ: ಬಂಟ್ಸ್ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನ

    Published

    on

    ಮರೆಯಾದ ಭೂಗತಲೋಕದ ಮಾಜಿ ಡಾನ್ ಮುತ್ತಪ್ಪ ರೈ: ಬಂಟ್ಸ್ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನ

    ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭೂಗತ ಲೋಕದ ಮಾಜಿ ಡಾನ್,  ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರು ಇಂದು ನಿಧನರಾಗಿದ್ದಾರೆ.

     

    68 ವರ್ಷದ ರೈ ಅವರು ಮೆದುಳು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಮುತ್ತಪ್ಪ ರೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

    ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2.30 ರ ಸುಮಾರಿಗೆ ಮೃತಪಟ್ಟಿದ್ದಾರೆ.

    ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಜನವರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದರು.

    ‘ನನ್ನ ಆರೋಗ್ಯದ ಕುರಿತು ಹರಿದಾಡುತ್ತಿರುವ ವಿಷಯಗಳು ಸತ್ಯ, ನನಗೆ ಕ್ಯಾನ್ಸರ್ ಇರುವುದು ನಿಜ. ಮಿರಾಕಲ್ ನಡೆಯುತ್ತಿರುವುದು ನಿಜವಾಗಿದ್ದು, ವಿಲ್ ಪವರ್ ನಿಂದ ಆರೋಗ್ಯವಾಗಿದ್ದೇನೆ.

    ಟಿಕೆಟ್ ಯಾವಾಗಲೋ ಕನ್ಫರ್ಮ್ ಆಗಿದ್ದು, ಓಕೆ ಆದ್ಮೇಲೆ ಫ್ಲೈಟ್ ಹತ್ತಬೇಕು ಅಷ್ಟೇ’ ಎಂದು ಭಾವನಾತ್ಮಕವಾಗಿ ಮಾತನಾಡಿದ್ದರು.

     

    ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ನ ಅಧ್ಯಕ್ಷರಾಗಿಯೂ ಇದ್ದ ಮುತ್ತಪ್ಪ ರೈ ಗ್ರಾಮೀಣ ಭಾಗದ ಕ್ರೀಡಾಪಟುಗಳ ನೆರವಿಗೆ ನಿಲ್ಲುತ್ತಿದ್ದರು.

    ಅನಾರೋಗ್ಯದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಪೂರ್ಣ ವಿಶ್ರಾಂತಿಯಲ್ಲಿದ್ದರು. ವೈದ್ಯರು ವಿಶ್ರಾಂತಿ ಸೂಚಿಸಿದ್ದರಿಂದ ತಮ್ಮ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ತೊರೆದಿದ್ದರು.

    ಪುತ್ತೂರಿನಲ್ಲಿ ನೆಟ್ಟಾಲ ನಾರಾಯಣ ರೈ ಮತ್ತು ಸುಶೀಲಾ ರೈ ದಂಪತಿಗೆ ಜನಿಸಿದ ಬಂಟ ಸಮುದಾಯದ ಮುತ್ತಪ್ಪ ರೈ ಮನೆ ಮಾತು ತುಳು.

    ರೇಖಾ ಅವರನ್ನು ಮದುವೆಯಾದ ಮುತ್ತಪ್ಪ ರೈ ಅವರಿಗೆ ರಾಕಿ ಮತ್ತು ರಿಕ್ಕಿ ಎಂಬ ಇಬ್ಬರು ಮಕ್ಕಳಿದ್ದಾರೆ.

    2013ರಲ್ಲಿ ಇವರ ಪತ್ನಿ ರೇಖಾ ಅವರು ಅನಾರೋಗ್ಯದಿಂದ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

    ಇದೀಗ ಕ್ಯಾನ್ಸರ್ ನಿಂದಾಗಿ ಮುತ್ತಪ್ಪ ರೈ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಇಚ್ಚೆಯಂತೆ ಬಂಟ್ಸ್ ಸಮುದಾಯದ ಸಂಪ್ರದಾಯದ ಪ್ರಕಾರ ಅವರ ಧರ್ಮಪತ್ನಿಯ ಸಮಾಧಿಯ ಬಳಿಯೇ ಅಂತಿಮ ಸಂಸ್ಕಾರ ಮಾಡುತ್ತೇವೆ.

    ಮುತ್ತಪ್ಪ ರೈ ಅವರ ಹಿರಿಯ ಮಗ ರಾಕಿ ರೈ ಕೆನಡಾದಲ್ಲಿ ಇದ್ದಾರೆ. ಅವರು ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತಕ್ಕೆ ಬರಲು ಸಾಧ್ಯವಿಲ್ಲ.

    ಹೀಗಾಗಿ ಅವರ ಕಿರಿಯ ಮಗ ರಿಕ್ಕಿ ರೈ ಎಲ್ಲಾ ಅಂತಿಮ ವಿಧಿ ವಿಧಾನ ನೆರವೇರಿಸಲಿದ್ದಾರೆ.

    ಬಿಡದಿಯಲ್ಲಿ ಅಂತಿಮ ಕಾರ್ಯ ನಡೆಯಲಿದ್ದು, ಲಾಕ್ ಡೌನ್ ಇರೋದ್ರಿಂದ ಕುಟುಂಬದ 25 ಜನ ಮಾತ್ರ ಭಾಗಿಯಾಗುತ್ತಾರೆ ಎಂದು ಅವರ ಆಪ್ತ ವಲಯ ಮಾಹಿತಿ ನೀಡಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ

    Published

    on

    ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.


    ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್‌ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್‌, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ‌. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್​​ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
    ಇತ್ತ ಸುಮಿತ್‌ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
    ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.

    Continue Reading

    LATEST NEWS

    ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ

    Published

    on

    ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ.  ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

    ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್‌ ಹೈ ಅಲರ್ಟ್‌:
    “ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.

    ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

    Continue Reading

    LATEST NEWS

    ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು

    Published

    on

    ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್‌ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ

    ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್‌ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

    Continue Reading

    LATEST NEWS

    Trending