Wednesday, October 5, 2022

ಉಗ್ರರೆಂದು ತಪ್ಪಾಗಿ ಗುರುತಿಸಿ 13 ನಾಗರಿಕರನ್ನು ಹತ್ಯೆಗೈದಿದ್ದೇವೆ: ಅಮಿತ್‌ ಶಾ ವಿಷಾದ

ನವದೆಹಲಿ: ನಾಗಾಲ್ಯಾಂಡ್​​​ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರು ಎಂದು ಭಾವಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಇಂದು ಸಂಸತ್​​ನಲ್ಲಿ ಮಾಹಿತಿ ನೀಡಿದರು.

ನಾಗರಿಕರ ಸಾವಿಗೆ ಕೇಂದ್ರ ಸರ್ಕಾರ ವಿಷಾದ ವ್ಯಕ್ತಪಡಿಸಿದ್ದು, ಉಗ್ರರೆಂದು ತಪ್ಪಾಗಿ ಗುರುತಿಸಿ ಈ ಘಟನೆ ನಡೆದಿದೆ ಎಂದರು.


ಭವಿಷ್ಯದಲ್ಲಿ ಇಂತಹ ಯಾವುದೇ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಲು ಎಲ್ಲ ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದ್ದು, ಈ ದುರದೃಷ್ಟಕರ ಘಟನೆ ಬಗ್ಗೆ ಕೇಂದ್ರ ಸರ್ಕಾರ ವಿಷಾದ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ಡಿಸೆಂಬರ್​​​ 4ರಂದು ಆ ಪ್ರದೇಶದಲ್ಲಿ ಉಗ್ರರ ಚಲನವಲನದ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿತ್ತು. ಇದರ ಆಧಾರದ ಮೇಲೆ 21 ಕಮಾಂಡೋಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು.

ಇದೇ ವೇಳೆ, ಸ್ಥಳಕ್ಕೆ ವಾಹನವೊಂದು ಬಂದಿದ್ದು, ನಿಲ್ಲುವಂತೆ ಸೂಚನೆ ನೀಡಲಾಗಿತ್ತು. ಆದರೆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದರಿಂದ ಉಗ್ರರು ಇರಬಹುದು ಎಂಬ ಶಂಕೆಯ

ಮೇರೆಗೆ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆಂದು ಗೃಹ ಸಚಿವರು ಮಾಹಿತಿ ನೀಡಿದರು.
ವಾಹನದಲ್ಲಿದ್ದ ಎಂಟು ಜನರ ಪೈಕಿ ಆರು ಮಂದಿ ಸಾವನ್ನಪ್ಪಿದ್ದಾರೆ.

ಇದರ ಬೆನ್ನಲ್ಲೇ ತಪ್ಪಾದ ಗುರುತು ಎಂದು ಕಂಡುಬಂದಿದ್ದು, ಗಾಯಗೊಂಡಿರುವ ಇಬ್ಬರನ್ನ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.

ಪ್ರಕರಣದ ಸುದ್ದಿ ತಿಳಿದ 250ಕ್ಕೂ ಗ್ರಾಮಸ್ಥರು ಸೇನಾ ಘಟಕವನ್ನು ಸುತ್ತುವರಿದು ಅಲ್ಲಿನ ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ದಾಳಿ ನಡೆಸಿದರು.

ಈ ವೇಳೆ ಓರ್ವ ಯೋಧ ಸಾವನ್ನಪ್ಪಿದ್ದು, ಕೆಲ ಯೋಧರು ಗಾಯಗೊಂಡಿದ್ದಾರೆ.

ಪರಿಸ್ಥಿತಿ ಹತೋಟಿಗೆ ತರುವ ಉದ್ದೇಶದಿಂದ ಸೇನೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಮತ್ತೆ ಏಳು 7 ನಾಗರಿಕರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾಗಿ ಮಾಹಿತಿ ನೀಡಿದರು.

ಪ್ರಕರಣವನ್ನ ಈಗಾಗಲೇ ಎಸ್​​ಐಟಿಗೆ ನೀಡಲಾಗಿದ್ದು, ಮುಂದಿನ 30 ದಿನದೊಳಗೆ ಸಂಪೂರ್ಣ ತನಿಖಾ ವರದಿ ಒಪ್ಪಿಸುವಂತೆ ಸೂಚನೆ ನೀಡಲಾಗಿದೆ ಎಂದಿರುವ ಗೃಹ ಸಚಿವರು,

ಸ್ಥಳದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ ಎಂಬ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...