DAKSHINA KANNADA
ಕೊಲೆ ರಾಜಕಾರಣ ತಿರಸ್ಕರಿಸಿ, ಸೌಹಾರ್ದತೆ ಎತ್ತಿ ಹಿಡಿಯಿರಿ: ಡಿವೈಎಫ್ಐ ಮನವಿ
ಮಂಗಳೂರು: ಬೆಳ್ಳಾರೆಯಲ್ಲಿ ಎರಡು ಕೊಲೆಗಳ ನಡೆದ ಬೆನ್ನಿಗೆ ಸುರತ್ಕಲ್ ನಲ್ಲಿ ಅಮಾಯಕ ಯುವಕ ಮುಹಮ್ಮದ್ ಫಾಝಿಲ್ ಕೊಲೆ ನಡೆದಿರುವುದು ನಾಡಿನ ಕೋಮು ಸೌಹಾರ್ದಕ್ಕೆ ದೊಡ್ಡ ಬೆದರಿಕೆ ಒಡ್ಡಿದೆ. ಇಂತಹ ಆತಂಕಕಾರಿ ಬೆಳವಣಿಗೆಗಳಿಗೆ ಬಿಜೆಪಿ ಸರಕಾರ ನೇರ ಹೊಣೆಯಾಗಿದೆ.
ಜನಾಮಾನ್ಯರ ಬದುಕಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಕೊಲೆ ರಾಜಕಾರಣವನ್ನು ಜನತೆ ಒಕ್ಕೊರಲಿನಿಂದ ತಿರಸ್ಕರಿಸಬೇಕು, ಮತ ಸೌಹಾರ್ದತೆಯನ್ನು ಎತ್ತಿ ಹಿಡಿಯಬೇಕು ಎಂದು ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಜನತೆಯಲ್ಲಿ ಮನವಿ ಮಾಡಿದೆ.
ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಬಿಜೆಪಿ ತನ್ನ ಎಂದಿನ ಚಾಳಿಯಂತೆ ಸರಕಾರದ ಬೆಂಬಲದೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ಮತೀಯ ಹಿಂಸೆಯನ್ನು ಪ್ರಚೋದಿಸುತ್ತಿದೆ. ಆ ಮೂಲಕ ಧರ್ಮಾಧಾರಿತ ಧ್ರುವೀಕರಣ ನಡೆಸುವುದು,
ಸರಕಾರದ ವಿರುದ್ದ ಎದ್ದಿರುವ ಜನಾಭಿಪ್ರಾಯದ ದಿಕ್ಕು ತಪ್ಪಿಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಈ ಕಾರಣದಿಂದಲೆ ಕರಾವಳಿಯಲ್ಲಿ ಸರಣಿ ಕೊಲೆಗಳು ನಡೆಯುತ್ತಿದೆ ಎಂದು ಡಿವೈಎಫ್ಐ ಆಪಾದಿಸಿದೆ.
ರಾಜ ಧರ್ಮ ಪಾಲಿಸಿದ್ದರೆ ಫಾಝಿಲ್ ಹತ್ಯೆ ನಡೆಯುತ್ತಿರಲಿಲ್ಲ
ಬೆಳ್ಳಾರೆಯಲ್ಲಿ ಕೊಲೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಯಾರು ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಸರಕಾರದ ವತಿಯಿಂದ ಪರಿಹಾರ ಧನ ವಿತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದೇ ಗ್ರಾಮದಲ್ಲಿ ಹತ್ಯೆ ಗೀಡಾದ ಮುಹಮ್ಮದ್ ಮಸೂದ್ ಮನೆಗೆ ಭೇಟಿ ನೀಡದಿರುವುದು,
ಪರಿಹಾರ ಧನ ನೀಡದಿರುವುದು ಅತ್ಯಂತ ಕೆಟ್ಟ ನಡವಳಿಕೆ. ಮುಖ್ಯಮಂತ್ರಿಯಾದವರು ಈ ರೀತಿ ನಿರ್ಲಜ್ಜ ತಾರತಮ್ಯ ಎಸಗುವುದು ಅಕ್ಷಮ್ಯ. ಈ ನಡವಳಿಕೆಯೇ ಫಾಝಿಲ್ ಕೊಲೆಗೆ ಪ್ರೇರಣೆ ಒದಗಿಸಿದೆ.
ಮುಖ್ಯಮಂತ್ರಿಗಳು ರಾಜಧರ್ಮ ಪಾಲಿಸಿದ್ದರೆ ಕರಾವಳಿಯ ಪ್ರಕ್ಷುಬ್ದತೆ ಒಂದಿಷ್ಟು ಶಮನವಾಗುತ್ತಿತ್ತು ಎಂದು ಹೇಳಿರುವ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ನರಗುಂದದ ಸಮೀರ್ ನಿಂದ ಹಿಡಿದು ಸುರತ್ಕಲ್ ನ ಫಾಝಿಲ್ ಕುಟುಂಬದ ವರಗೆ ತಾರತಮ್ಯ ವಿಲ್ಲದೆ ಪರಿಹಾರ ಧನ ಒದಗಿಸಬೇಕು ಎಂದು ಆಗ್ರಹಿಸಿದೆ
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.