Saturday, May 15, 2021

ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಬೇಡ ; ಸರ್ಕಾರಕ್ಕೆ ಶಾಸಕ ರಘುಪತಿ ಭಟ್ ಮನವಿ..

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ  ಧಾರ್ಮಿಕ ಕಾರ್ಯಕ್ರಮ ನಡೆಯುತ್ತದೆ.ಆದ್ದರಿಂದ ಕೊವೀಡ್ ಗೈಡ್ಸ್ ಲೈನ್ಸ್ ಪಾಲನೆ ಮಾಡಿಕೊಂಡು ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅವಕಾಶ ನಿಡಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಕೊವೀಡ್ ಕಾರಣದಿಂದ ಧಾರ್ಮಿಕ ಕಾರ್ಯಕ್ರಮದ ಆಚರಣೆಗೆ ಸಂಬಂಧ ಪಟ್ಟಂತೆ ಸರ್ಕಾರ ನಿಷೇಧ ಹೇರಿರುವ ಕುರಿತು ಮಾಧ್ಯಮಗಳಿಗೆ ಅವರು ಹೇಳಿಕೆ ನೀಡಿದರು. ನಾನೊಬ್ಬ ಆಡಳಿತ ಪಕ್ಷದ ಸದಸ್ಯನಾಗಿ ಈ ಮಾತನ್ನು ಹೇಳುತ್ತಿದ್ದೇನೆ.

ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡದಿರುವುದು ಜನಪ್ರಿಯ ಸರಕಾರದ ಲಕ್ಷಣವಲ್ಲ. ಆದೇಶವನ್ನು ತಕ್ಷಣ ವಾಪಸು ಪಡೆಯಬೇಕು. ಕೋವಿಡ್ ನಿಯಮಾವಳಿಗಳನ್ನು ರೂಪಿಸಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ.ಭಾಗವಹಿಸುವ ಭಕ್ತರ ಸಂಖ್ಯೆಯನ್ನು ನಿಗಧಿಪಡಿಸಿ.

ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ಕೊಟ್ಟಿದ್ದೇವೆ.ಆದರೆ ರಾಜಕೀಯ ಕಾರ್ಯಕ್ರಮಗಳು ಅನಿವಾರ್ಯ ಇಲ್ಲ. ಜಿಲ್ಲೆಗಳಲ್ಲಿ ಧಾರ್ಮಿಕ ಕೇಂದ್ರಗಳು ಹೆಚ್ಚಿವೆ.

ಕೋಲ,ನೇಮೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳಿಗೆ ಜನ ಕಂಕಣ ಬದ್ಧರಾಗಿದ್ದಾರೆ. ಜನರ ಧಾರ್ಮಿಕ ಭಾವನೆಗಳಿಗೆ ಅಡ್ಡಿ ಮಾಡಬೇಡಿ.

ಮುಹೂರ್ತ ನಿಗಧಿಯಾಗಿದೆ ಎಲ್ಲಾ ಸಿದ್ಧತೆಗಳು ನಡೆದಿವೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಉಡುಪಿ ನಗರಕ್ಕೆ ನೈಟ್ ಕರ್ಫ್ಯೂ ನ ಅಗತ್ಯವೂ ಇಲ್ಲ. ಕೊರೋನ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರ ಅಲ್ಲ ಎಂದವರು ಹೇಳಿದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...