Connect with us

LATEST NEWS

76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ

Published

on

ನವದೆಹಲಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10:30ಕ್ಕೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೇನಾ ಹೆಲಿಕಾಪ್ಟರೆ ಮೂಲಕ ಪುಷ್ಪವೃಷ್ಠಿ ಸಲ್ಲಿಸಲಾಯಿತು.

ಈ ಬಾರಿ ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಹಾಗೆಯೇ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹುತಾತ್ಮ ಯೋಧರಿಗೆ ಮೋದಿ ಗೌರವ

76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.

ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣಗೊಳ್ಳುತ್ತಿದೆ. ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, 10,000 ಗಣ್ಯರು ಪಾಲ್ಗೊಂಡಿದ್ದಾರೆ. ಅಲ್ಲದೇ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

BIG BOSS

ಹನುಮಂತನ ಮುಂದೆ ಗಾಂಧೀಜಿ ನಿಂತಿದ್ರೂ ಹನುಮಂತನೇ ಗೆಲುತ್ತಿದ್ದ- ರಜತ್

Published

on

ಬೆಂಗಳೂರು: ಬಿಗ್ ಬಾಸ್ ಕನ್ನಡ -11 ರ ಟ್ರೋಫಿಯನ್ನು ಹಳ್ಳಿಹೈದ ಹನುಮಂತು ಮುಡಿಗೇರಿಸಿಕೊಂಡಿದ್ದಾರೆ. ಅವರ ಗೆಲುವನ್ನು ಅಭಿಮನಿಗಳು ಅದ್ಧೂರಿಯಾಗಿಯೇ ಆಚರಿಸಿಕೊಂಡಿದ್ದಾರೆ.

ದೊಡ್ಡನೆ ಆಟಕ್ಕೆ ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿದ್ದ ಹನುಮಂತು, ಟಾಕ್ – ಟಾಸ್ಕ್ ಎರಡರಲ್ಲೂ ಮೇಲುಗೈ ಸಾಧಿಸಿ 5 ಕೋಟಿ ವೋಟ್ಸ್ ಪಡೆದು ಬಿಗ್ ಬಾಸ್ ಕಪ್ ಎತ್ತಿಕೊಂಡಿದ್ದಾರೆ. ಅವರ ಗೆಲುವನ್ನು ದೊಡ್ಡನೆಯ ಸ್ಪರ್ಧಿಗಳು ಕೂಡ ಖುಷಿಪಟ್ಟಿದ್ದಾರೆ. ಸೆಕೆಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿದ ರಜತ್ ಕಿಶನ್ ಅವರು ಹನುಮಂತು ಗೆಲುವಿನ ಬಗ್ಗೆ ಖುಷಿಯಿಂದಲೇ ಮಾತನಾಡಿದ್ದಾರೆ.

“ಹನುಮಂತು ಮುಂದೆ ಗಾಂಧೀಜಿ ನಿಂತಿದ್ರೂ ಹನುಮಂತುನೇ ಗೆಲುತ್ತಿದ್ದ. ತೊಂದರೆ ಇಲ್ಲ. ಎಲ್ಲ ಆರಾಮವಾಗಿದ್ದೀವಿ. ಖುಷಿ ಆಗಿದ್ದೀವಿ. ಇಷ್ಟು ಸಣ್ಣ ಅವಧಿಯಲ್ಲಿ ಪ್ರೀತಿ – ಅಭಿಮಾನವನ್ನು ಸಿಗೋದು ತುಂಬಾ ಕಷ್ಟ. ಇದಕ್ಕೆ ಯಾವತ್ತೂ ಚಿರಋಣಿ” ಎಂದು ರಜತ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ರಜತ್ ಅವರ ಪತ್ನಿಯಿಂದ ಕೆಲ ಟ್ರೋಲ್ ಪೇಜ್ ಹಣ ಪಡೆದ ಬಗ್ಗೆ ಅವರು ಮಾತನಾಡಿದ್ದಾರೆ. ರಜತ್ ಅವರ ಮಾಜಿ ಗೆಳತಿ ಜತೆಗಿನ ಫೋಟೋವನ್ನು ಕೆಲ ಟ್ರೋಲ್ ಪೇಜ್ ಗಳು ವೈರಲ್ ಮಾಡಿದ್ದವು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಡಲಿ ಬಿಡಿ, ನಾನೀಗ ಹೊರಗೆ ಬಂದಿದ್ದೇನೆ. ನಾನು ನೋಡಿಕೊಳ್ಳುತ್ತೇನೆ ಎಂದು ರಜತ್ ಹೇಳಿದ್ದಾರೆ.

Continue Reading

LATEST NEWS

ಸುಳ್ಯದ ಅರಣ್ಯದಲ್ಲಿ ಕಾಡಾನೆಯ ಕಳೇಬರ ಪತ್ತೆ

Published

on

ಮಂಗಳೂರು : ಸುಳ್ಯ ಸಮೀಪದ ಮಂಡೆಕೋಲು ಮೀಸಲು ಅರಣ್ಯ ಪ್ರದೇಶದ ಎರಕಲಪಾಡಿ ಎಂಬಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ.

ಸುಮಾರು 50 ವರ್ಷ ಪ್ರಾಯದ ಗಂಡಾನೆಯು ತೀವ್ರ ರಕ್ತ ಸ್ರಾವದಿಂದ ಮೃತ ಪಟ್ಟಿರುವುದಾಗಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಕಾಡಿನಲ್ಲಿ ಆನೆಗಳ ನಡುವೆ ನಡೆದ ಕಾಳಗದಲ್ಲಿ ಈ ಗಂಡಾನೆ ಗಂಭೀರ ಗಾಯಗೊಂಡಿತ್ತು.

ಇದನ್ನೂ ಓದಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಇದರ ಪರಿಣಾಮವಾಗಿ ತೀವ್ರ ರಕ್ತ ಸ್ರಾವ ಉಂಟಾಗಿ ಆನೆ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಆನೆಯ ಮೈನಲ್ಲಿ ಅಲ್ಲಲ್ಲಿ ಹಲವು ಗಾಯಗಳು ಕಂಡು ಬಂದಿದ್ದು, ಇದು ಕಾಳಗದಿಂದ ಆಗಿರಬಹುದು ಎಂದು ಅರಣ್ಯ ಅಧಿಕಾರಿಗಳು ಅಂದಾಜಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಅಧಿಕಾರಿಗಳು ಆನೆಯ ಕಳೆಬರದ ವಿಲೇವಾರಿಗೆ ಕ್ರಮ ಕೈಗೊಂಡಿದ್ದಾರೆ.

Continue Reading

LATEST NEWS

ಅಲೆವೂರು : ಗೋಡೌನ್‌ನಲ್ಲಿ ಭಾರೀ ಅ*ಗ್ನಿ ಅವಘ*ಡ

Published

on

ಉಡುಪಿ : ಅಲೆವೂರು ಗುಡ್ಡೆಯಂಗಡಿಯಲ್ಲಿನ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಿಂದ ಅಂದಾಜು 40 ಲಕ್ಷ ರೂಪಾಯಿ ನಷ್ಟವಾಗಿದೆ.

ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.  ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಭಾರೀ  ಅನಾಹುತ ತಪ್ಪಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

 

 

Continue Reading

LATEST NEWS

Trending

Exit mobile version