Connect with us

ಲಾಕ್ ಡೌನ್ ಅವಧಿಯ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಡಿ.ವೈ.ಎಫ್.ಐ ದೇರಳಕಟ್ಟೆ ಘಟಕದಿಂದ ಮನವಿ….

Published

on

ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾಕ್ಕೆ ಚಂಬುಗುಡ್ಡೆ ಮೆಸ್ಕಾಂ ಕಚೇರಿ ಆಯುಕ್ತರಿಗೆ ಮನವಿ..

ಉಳ್ಳಾಲ: ಕೊರೊನಾ ಸಂಕಷ್ಟದ ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗ, ವ್ಯಾಪಾರವಿಲ್ಲದೇ ಜನ ಸಾಮಾನ್ಯರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ದಿನದ ದುಡಿಮೆಯಲ್ಲೇ ಜೀವನ ಸಾಗಿಸುತ್ತಿದ್ದ ಕುಟುಂಬಗಳು ಇಂದು ಒಂದೊತ್ತಿನ ಊಟಕ್ಕಾಗಿ ಕೈಚಾಚುವ ಸ್ಥಿತಿ ನಿರ್ಮಾಣಗೊಂಡಿದೆ.

ಇಂತಹ ಸಂಕಷ್ಟದ ಸಂದರ್ಭದಲ್ಲಿ ಲಾಕ್ ಡೌನ್ ಅವಧಿಯ ಮೂರು ತಿಂಗಳುಗಳ ಕಾಲದ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಒತ್ತಾಯಿಸಿ,

ಡಿವೈಎಫ್ಐ ದೇರಳಕಟ್ಟೆ ಘಟಕದ ವತಿಯಿಂದ ಇಂದು (ಜೂ 8) ತೊಕ್ಕೊಟ್ಟು ಚಂಬುಗುಡ್ಡೆಯಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಕೊರೊನಾ ಕಷ್ಟ ಕಾಲದಲ್ಲಿ ಮೆಸ್ಕಾಂ‌‌ ಸಂಸ್ಥೆಯು, ಜನಸಾಮಾನ್ಯರ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಗ್ರಾಹಕರ ಜೊತೆ ನಿಲ್ಲಬೇಕು.

ಮೂರು ತಿಂಗಳ ವಿದ್ಯುತ್ ದರ ಮನ್ನಾ ಮಾಡುವುದರ ಜೊತೆಗೆ ಆರು ತಿಂಗಳವರೆಗೆ ಬಿಲ್ಲು ಪಾವತಿಸಲು ಬಲವಂತ ಪಡಿಸದೇ,

ಸಮಯಾವಕಾಶ ನೀಡಬೇಕೆಂದು ಡಿವೈಎಫ್ಐ ದೇರಳಕಟ್ಟೆ ಸಮಿತಿಯ ನಿಯೋಗ ಈ ಸಂದರ್ಭದಲ್ಲಿ ಅಧಿಕಾರಿಗಳನ್ನು ಒತ್ತಾಯಿಸಿತು.

ನಿಯೋಗದಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಡಿವೈಎಫ್ಐ ದೇರಳಕಟ್ಟೆ ಸಮಿತಿಯ ಅಧ್ಯಕ್ಷ ನವಾಝ್,

ಉಪಾಧ್ಯಕ್ಷ ಜಗದೀಶ್, ಕೋಶಾಧಿಕಾರಿ ಬಾಝಿಕ್, ಕಾರ್ಮಿಕ ಮುಂದಾಳು ಇಬ್ರಾಹಿಂ ಮದಕ, ಡಿವೈಎಫ್ಐ ದೇರಳಕಟ್ಟೆ ಘಟಕದ ಸದಸ್ಯರಾದ ಕಿಶೋರ್, ಅಶ್ರಫ್, ಸಫ್ವಾನ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

LATEST NEWS

ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

Published

on

ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.

murder

ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.

Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Continue Reading

LATEST NEWS

ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Published

on

ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Continue Reading

LATEST NEWS

Trending