Thursday, March 23, 2023

ಉಡುಪಿ: ಹದಿನೈದು ಅಡಿ ಆಳದ ಗುಂಡಿಗೆ ಬಿದ್ದ ಗೂಳಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಉಡುಪಿ: ಹದಿನೈದು ಅಡಿ ಆಳದ ತ್ಯಾಜ್ಯ ನೀರು ಸಂಗ್ರಹಣ ಗುಂಡಿಯಲ್ಲಿ ಬಿದ್ದಿದ್ದ ಗೂಳಿಯನ್ನು ಅಗ್ನಿಶಾಮಕ ದಳ, ಹಾಗೂ ನಾಗರಿಕ ಸಮಿತಿಯ ಕಾರ್ಯಕರ್ತರು ಸತತ ಮೂರು ಗಂಟೆಗಳ ಕಾರ್ಯಚರಣೆ ಮೂಲಕ ರಕ್ಷಿಸಿರುವ ಘಟನೆ ಮಣಿಪಾಲದಲ್ಲಿ ಇಂದು ನಡೆದಿದೆ.


ಕಾರ್ಯಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು, ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು, ಹೇಮಂತ್ ಸದಾನಂದ ಭಂಡಾರಿ ಸಹಕರಿಸಿದರು.


ಇಲ್ಲಿನ ಆರ್.ಎಸ್.ಬಿ ಸಂಭಾಗಣದ ಸಮೀಪ ಎರಡು ಬಲಿಷ್ಠ ಗೂಳಿಗಳು ಕಾದಾಟ ನಡೆಸುತ್ತಿದ್ದವು. ಬಳಿಕ ಆರ್.ಎಸ್.ಬಿ ನ ಕಂಪೌಂಡಿನ ಬಾಗಿಲು ತಳ್ಳಿಕೊಂಡು ಒಳ ಪ್ರವೇಶಿಸಿರುವ ಗೂಳಿಗಳಲ್ಲಿ ಒಂದು ಗೂಳಿ ಆಯ ತಪ್ಪಿ ಗುಂಡಿಗೆ ಬಿದ್ದಿದೆ.


ಗೂಳಿಯ ಆಕ್ರೋಶ ತಣಿಸಲು ಅರವಳಿಕೆಯನ್ನು ಪಶುವೈದ್ಯ ಡಾ. ಪ್ರಶಾಂತ್ ಶೆಟ್ಟಿ ಅವರು ನೀಡಿದರು. ಆ ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಕ್ರೇನ್ ಬಳಸಿಕೊಂಡು ಗೂಳಿಯನ್ನು ರಕ್ಷಿಸಿದರು.

LEAVE A REPLY

Please enter your comment!
Please enter your name here

Hot Topics

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...