Connect with us

  DAKSHINA KANNADA

  ವಿದ್ಯಾರ್ಥಿ ಪಾರ್ಲಿಮೆಂಟ್ ನಲ್ಲಿ ಎನ್ಇಪಿ ತಿರಸ್ಕರಿಸಿ ನಿರ್ಣಯ ಅಂಗೀಕಾರ

  Published

  on

  ಮಂಗಳೂರು : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು, ಲೋಕ ಸಭೆಯಲ್ಲಾಗಲಿ ವಿಧಾನಸಭೆಯಲ್ಲಾಗಲಿ ಚರ್ಚೆಗಳು ನಡೆಯದ ಕಾರಣ ವಿದ್ಯಾರ್ಥಿಗಳು ಸೇರಿಕೊಂಡು ಮಂಗಳೂರಿನ ಜಮ್ಯಿಯತುಲ್ ಫಲಾಹ್ ಸಭಾಂಗಣದಲ್ಲಿ ವಿದ್ಯಾರ್ಥಿ ಪಾರ್ಲಿಮೆಂಟ್ ನಡೆಸಿ ಎನ್.ಇ.ಪಿಯ ಬಗ್ಗೆ ಪರ ವಿರೋಧ ಚರ್ಚೆ ನಡೆಸಿ ತಿರಸ್ಕರಿಸಿ ನಿರ್ಣಯ ಮಂಡಿಸಲಾಯಿತು.
  ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆಗಳ ನಾಯಕರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತಾಗಿರುವ ಲೋಪದೋಷಗಳನ್ನು ಮಂಡಿಸಿ, ಪರ ವಿರೋಧ ಚರ್ಚೆಗಳು ನಡೆಯಿತು. ಹೈಕೋರ್ಟ್ ವಕೀಲರಾದ ಅಶ್ರಫ್ ಅಗ್ನಾಡಿ ಸಭಾಪತಿಗಳಾಗಿ ಅಂತಿಮ ನಿರ್ಣಯವನ್ನು ಅಂಗೀಕರಿಸಿದರು.

  ನಿರ್ಣಯ: ಹಲವಾರು ರೀತಿಯ ಗೊಂದಲಗಳಿಂದ ಕೂಡಿದ, ವಿದ್ಯಾರ್ಥಿ ವಿರೋಧಿಯಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಿರಸ್ಕರಿಸಲು ನಿರ್ಣಯ ಮಂಡನೆ.

  ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಅಧಿಕಾರದಲ್ಲಿರುವ ಸರಕಾರದ ಪ್ರತಿನಿಧಿಗಳ ಹಿನ್ನೆಲೆಯುಳ್ಳ ಸಿದ್ಧಾಂತವನ್ನು ಶಿಕ್ಷಣದಲ್ಲಿ ಹೇರಿಸುವ ಸ್ವಜನಪಕ್ಷಪಾತದ ಧೋರಣೆ ಹೊಂದಿರುವ ಮತ್ತು ಜಾರಿಗೊಳಿಸುವ ಪ್ರಕ್ರಿಯೆಯಲ್ಲಿ ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳದೆ ಸಂವಿಧಾನಾತ್ಮಕವಾಗಿ ಸಮವರ್ತಿ ಪಟ್ಟಿಗೆ ಸೇರುವ ಶಿಕ್ಷಣವನ್ನು ನೇರವಾಗಿ ಒಕ್ಕೂಟ ಸರಕಾರದ ಮಂತ್ರಿ ಮಂಡಲದಲ್ಲಿ ಅನುಮೋದನೆ ಪಡೆದು ಜಾರಿಗೊಳಿಸುವ ರೀತಿಯಲ್ಲೇ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡು, ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ ಹುನ್ನಾರದೊಂದಿಗೆ, ಇತಿಹಾಸವನ್ನು ತಿರುಚಿ ಪ್ರಾಚೀನ ಇತಿಹಾಸದಲ್ಲಿ ಬದಲಾವಣೆಗಳನ್ನು ತರುವ ಧ್ಯೇಯವನ್ನಿಟ್ಟುಕೊಂಡು ಭಾರತದ ಮೂಲನಿವಾಸಿಗಳಾದ ದ್ರಾವಿಡರ ಇತಿಹಾಸವನ್ನು ಮರೆಮಾಚುವ ಮೂಲ ಉದ್ದೇಶದೊಂದಿಗೆ ಮನುವಾದಕ್ಕೆ ಒತ್ತು ಕೊಡುವ ದುರಾಲೋಚನೆ ಹೊಂದಿದೆ. ಮತ್ತು ಈ ಶಿಕ್ಷಣ ನೀತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತವಾದ ಸ್ವಾತಂತ್ರ್ಯ ನೀಡಿ ವಿಶೇಷವಾದ ಅಧಿಕಾರ ನೀಡುವ ಮೂಲಕ ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ತಂತ್ರ ಹೊಂದಿದೆ ಹಾಗೂ ವಿದೇಶಿ ಶಿಕ್ಷಣ ಸಂಸ್ಥೆಗಳಿಗೆ ಹೂಡಿಕೆ ಮಾಡಲು ಅವಕಾಶ ಮಾಡಿಕೊಡುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ವ್ಯಾಪಾರ ನಡೆಸಿ ಶಿಕ್ಷಣವನ್ನು ವಾಣಿಜ್ಯಕರಣ ಮಾಡಿ ಸಾಮಾಜಿಕವಾಗಿ ಹಿಂದುಳಿದ, ಶೋಷಿತ, ದಮನಿತ, ಮಧ್ಯಮ ಮತ್ತು ಬಡ ವರ್ಗದ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತಗೊಳಿಸುವ ದೊಡ್ಡ ಯೋಜನೆಯಾಗಿದೆ ಎಂಬುದು ಈ ವಿದ್ಯಾರ್ಥಿಗಳ ಸಂಸತ್ತಿನಲ್ಲಿ ಪ್ರಮುಖವಾಗಿ ಕಂಡು ಬಂದಿರುವ ಅಂಶಗಳಾಗಿವೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುತಂತ್ರವನ್ನು ವಿದ್ಯಾರ್ಥಿಗಳ ಸಂಸತ್ತಿನಲ್ಲಿ ಬಯಲಾಗಿವೆ ಆದುದ್ದರಿಂದ ವಿದ್ಯಾರ್ಥಿ ವಿರೋಧಿಯಾಗಿರುವ NEP-2020 ಯನ್ನು ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆಗಳ ನಾಯಕರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳ ಸಮಕ್ಷಮತೆಯಲ್ಲಿ, ಸಭಾಪತಿಗಳ ನೇತೃತ್ವದಲ್ಲಿಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, NEP-2020 ಯನ್ನು ಈ ಸಂಸತ್ತಿನಲ್ಲಿ ತಿರಸ್ಕರಿಸಿ ನಿರ್ಣಯವನ್ನು ಮಂಡಿಸಿ ಅಂಗೀಕರಿಸಲಾಯಿತು.

  DAKSHINA KANNADA

  ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

  Published

  on

  ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

  ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.

  Continue Reading

  DAKSHINA KANNADA

  ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ

  Published

  on

  ಮಂಗಳೂರು: ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.

  • ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
  • ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
  • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
   ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ.
  • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್‌ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
  • ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.
  Continue Reading

  DAKSHINA KANNADA

  ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಸ್ವರ್ಣಪಾದುಕೆ ಸಮರ್ಪಣೆ

  Published

  on

  ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶೃಂಗೇರಿ ಶಾರದಾಪೀಠದ ವತಿಯಿಂದ 40 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಗಿದೆ.

  ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು 1974 ರಲ್ಲಿ ಸನ್ಯಾಸ ಸ್ವೀಕರಿಸಿದ್ದು, 2024 ಕ್ಕೆ 50 ವರ್ಷಗಳಾಗುತ್ತಿವೆ. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇವಳದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನು ಜೂ.19 ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಅವರು ನೀಡಿರುತ್ತಾರೆ.

  Read More..; ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕ್ರಿಕೆಟಿಗ ಮಯಂಕ್ ಅಗರವಾಲ್ ಭೇಟಿ

  Continue Reading

  LATEST NEWS

  Trending