Connect with us

    DAKSHINA KANNADA

    ಇಂದು ರಾತ್ರಿ 12.30ಕ್ಕೆ ರೆಸ್ಟೋರೆಂಟ್, ಮಾಲ್, ಕೆಫೆ ಕ್ಲೋಸ್-ಮಂಗಳೂರು ಕಮಿಷನರ್ ಖಡಕ್ ಆದೇಶ

    Published

    on

    ಮಂಗಳೂರು: ಇಂದು ರಾತ್ರಿ 12 ಗಂಟೆಗೆ ರೆಸ್ಟೋರೆಂಟ್, ಮಾಲ್, ಕೆಫೆ ಕ್ಲೋಸ್ ಆಗಲಿದೆ. ಹಾಗೆಯೇ ಹೊಸ ವರ್ಷದ ಆಗಮನದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಸಂಪೂರ್ಣ ಬಂದೋಬಸ್ತ್‌ನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ.


    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇತ್ತೀಚೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಡಳಿತದ ಇತರ ಪ್ರಮುಖ ಇಲಾಖೆಗಳು ಮತ್ತು ಪೊಲೀಸ್ ಇಲಾಖೆ ಜತೆಗೂಡಿ ಒಂದು ಸಭೆಯನ್ನು ನಡೆಸಲಾಗಿತ್ತು. ಆ ಸಭೆಯಲ್ಲಿ ಹೊಸ ವರ್ಷದ ಮಾರ್ಗ ಸೂಚಿಗಳನ್ನು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಚರ್ಚಿಸಿ ಸಿದ್ಧಪಡಿಸಿದೆ.

    ಅದರಂತೆ ರಾತ್ರಿ ಸುಮಾರು 12 ಗಂಟೆಯವರೆಗೆ ಹೊಟೇಲ್‌ಗಳು , ರೆಸ್ಟೋರೆಂಟ್ ಗಳು, ಐಸ್ ಕ್ರೀಮ್ ಪಾರ್ಲರ್‌ಗಳು , ಕೆಫೆ , ಮಾಲ್ ಗಳನ್ನು ತೆರೆಯುವುದಕ್ಕೆ ಅವಕಾಶವಿದೆ. ಇದನ್ನು ಹೊರತುಪಡಿಸಿ ಸೌಂಡ್ ಸಿಸ್ಟಮ್ ಹಾಕುವುದಕ್ಕೆ ಎಲ್ಲಿ ಅನುಮತಿ ಇದೆಯೋ ಅಲ್ಲಿ ಹತ್ತು ಗಂಟೆಯವರೆಗೆ ಮಾತ್ರ ಹಾಕಬಹುದು.

    ಇನ್ನು ಲಿಕ್ಕರ್ ಗೆ ಸಂಬಂಧಿಸಿ ಎಲ್ಲಿ ಅನುಮತಿ ನೀಡಲಾಗಿದೆಯೋ, ಅಲ್ಲಿ ಮಾತ್ರ ಅಬಕಾರಿ ಇಲಾಖೆಯ ನಿಯಮಕ್ಕೆ ಒಳಪಟ್ಟು ಮದ್ಯವನ್ನು ಮಾರಾಟ ಮಾಡಬಹುದು. ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷದ ಆಚರಣೆಯನ್ನು ಮಾಡುವುದಕ್ಕೆ ಅವಕಾಶವಿಲ್ಲ. ಒಂದು ವೇಳೆ ಹಾಗೇನಾದ್ರೂ ಆಚರಿಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

    ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಪ್ರತ್ಯೇಕ ಸ್ಥಳಗಳಲ್ಲಿ ಚೆಕ್ ಫೋಸ್ಟ್ ನಿರ್ಮಾಣ ಮಾಡಲಾಗಿದೆ. ಕುಡಿದು ವಾಹನ ಚಲಾಯಿಸುವವರ ವಿರುದ್ಧ ಹಾಗೂ ಅತೀ ವೇಗ ಮತ್ತು ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವರನ್ನು ಗುರಿಯಾಗಿರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

    ಡ್ರಂಕ್ ಆ್ಯಂಡ್ ಡ್ರೈವ್ ಟೆಸ್ಟ್ ನ್ನು ಕೂಡ ಈ ಸಂದರ್ಭದಲ್ಲಿ ನಡೆಸಲಾಗುವುದು. ಅದು ಮಾತ್ರವಲ್ಲದೆ ವಿವಿಧ ಭಾಗಗಳಿಂದ ಬರುವ ಎಲ್ಲಾ ವಾಹನಗಳ ದಾಖಲಾತಿಗಳು ಪರಿಶೀಲನೆ ಮಾಡಲಾಗುತ್ತದೆ.

    ಜಿಲ್ಲೆಯ ದೇವಸ್ಥಾನ , ಮಸೀದಿ ,ಚರ್ಚ್ , ಬೀಚ್ ಗಳಲ್ಲಿ ಯಾವುದೇ ಅನಾಹುತಗಳು ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

    ಇದರ ಜತೆಗೆ ಸಾರ್ವಜನಿಕರು ಶಾಂತಿ ಸುವ್ಯಸ್ಥೆಯನ್ನು ಕಾಪಾಡುವ ಮೂಲಕ ಹೊಸ ವರ್ಷದ ಆಚರಣೆಯನ್ನು ಸಂಭ್ರಮದಿಂದ ಆಚರಿಸುವಂತೆ ಮನವಿ ಮಾಡಿದ್ದಾರೆ.

     

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending