Home ಕರ್ನಾಟಕ ವಾರ್ತೆ ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ಬೆಂಗಳೂರು: ಹಲವಾರು ದಿಟ್ಟ ಕ್ರಮಗಳಿಂದ ಸರಕಾರವನ್ನು ಹಲವು ಬಾರಿ ಎದುರು ಹಾಕಿಕೊಂಡಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು ಸೇವೆಯಿಂದ ನಿವೃತ್ತರಾಗಿದ್ದಾರೆ.

14 ವರ್ಷಗಳ ಕಾಲ ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದ ಕೆ.ಮಥಾಯಿ ಸೇವೆಯಿಂದ ನಿವೃತ್ತರಾದರು.

2006ರಲ್ಲಿ ಅವರು ಶೃಂಗೇರಿಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ಆರಂಭಿಸಿದ್ದರು.

ಬಿಬಿಎಂಪಿ ಜಾಹೀರಾತು ಹಗರಣವನ್ನು ಬೆಳಕಿಗೆ ತಂದಿದ್ದ ಕೆ.ಮಥಾಯಿ ಅವರು ಭ್ರಷ್ಟಾಚಾರಕ್ಕೆ ತಡೆ ಹಾಕಿದ ಕಾರಣಕ್ಕಾಗಿಯೇ ಹಲವು ಬಾರಿ ವರ್ಗಾವಣೆಯಾಗಿದ್ದರು.

ಕರ್ನಾಟಕದಲ್ಲಿ ಸಕಾಲ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಅವರ ಪಾತ್ರವೂ ಮಹತ್ವದ್ದಾಗಿದೆ.

ವಾಯುಪಡೆಯಲ್ಲಿ 1 ವರ್ಷ ಕೆಲಸ ಮಾಡಿದ್ದ ಕೆ.ಮಥಾಯಿ ಅವರು 8 ವರ್ಷ ಮಂಗಳೂರಿನಲ್ಲಿ ವಕೀಲರಾಗಿ ಕೆಲಸ ಮಾಡಿದ್ದರು.

ಜೋಯಿಡಾ, ಭಟ್ಕಳ, ಹಿರೇಕೆರೂರು, ಮಡಿಕೇರಿ, ಹಾಸನದಲ್ಲಿಯೂ ಅವರು ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದರು.

ಕರ್ನಾಟಕ ಸರಕಾರ ಕಚೇರಿ ಕೆಲಸಕ್ಕೆ ವಾಹನ ನೀಡಲು ನಿರಾಕರಿಸಿದ ಕಾರಣಕ್ಕೆ, ಮನೆಯಿಂದ ಎಂ.ಎಸ್.ಬಿಲ್ಡಿಂಗ್ ನಲ್ಲಿರುವ ಕಚೇರಿಗೆ ಸೈಕಲ್ ನಲ್ಲಿ ಆಗಮಿಸಿದ್ದರು.

ಈ ವಿಚಾರ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು. 14 ವರ್ಷಗಳ ಸರ್ವಿಸ್ ನಲ್ಲಿ 35ಕ್ಕೂ ಹೆಚ್ಚು ಬಾರಿ ವರ್ಗಾವಣೆಗೊಂಡಿದ್ದರು.

ಬಿಬಿಎಂಪಿಯಲ್ಲಿನ 2 ಸಾವಿರ ಕೋಟಿ ರೂ.ಹಗರಣವನ್ನು ಅವರು ಬಯಲಿಗೆಳೆದಿದ್ದರು.

ಆಗ ಕೆಲವು ಬಿಬಿಎಂಪಿ ಸದಸ್ಯರು, ಜಾಹೀರಾತು ಏಜೆನ್ಸಿಯವರು ಕೆ.ಮಥಾಯಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!