LATEST NEWS
ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರೇವಣ್ಣ; ಕೇಸ್ ಬಗ್ಗೆ ಏನಂದ್ರು?
ಧರ್ಮಸ್ಥಳ : ಪ್ರಜ್ವಲ್ ರೇವಣ್ಣ ಪ್ರಕರಣ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ. ಈ ನಡುವೆ ಅವರ ತಂದೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡ್ನ್ಯಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿ ಜಾಮೀನಿನ ಮೇಲೆ ಹೊರಗೆ ಬಂದಿದ್ದೂ ಆಗಿದೆ. ಇದೀಗ ರೇವಣ್ಣ ಟೆಂಪಲ್ ರನ್ ಕೂಡಾ ಆರಂಭಿಸಿದ್ದಾರೆ. ಸೋಮವಾರ(ಮೇ 27) ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಮಾತನಾಡಿದ ಎಚ್.ಡಿ.ರೇವಣ್ಣ, ನಾನು ಮಂಜುನಾಥ ಸ್ವಾಮಿಯ ಭಕ್ತ. ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರ್ತೇನೆ ಎಂದರು. ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ. ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ ಎಂದರು.
ಇದನ್ನೂ ಓದಿ : ವಿದೇಶದಲ್ಲೇ ಠಿಕಾಣಿ ಹೂಡಿದ ಪ್ರಜ್ವಲ್..! ತಾತಾ, ಚಿಕ್ಕಪ್ಪನ ಮನವಿಗೂ ಡೋಂಟ್ ಕ್ಯಾರ್..!
ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದ ಅವರು, ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೇಗೌಡರು ಪತ್ರ ಬರೆದಿರೋ ಬಗ್ಗೆಯು ಗೊತ್ತಿಲ್ಲ. ಯಾವುದರ ಬಗ್ಗೆಯು ಪ್ರತಿಕ್ರಿಯೆ ನೀಡಲ್ಲ ಎಂದರು.
ದೇವಸ್ಥಾನ ಭೇಟಿ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಜೊತೆ ಮಾತುಕತೆಯನ್ನು ನಡೆಸಿದರು.
LATEST NEWS
ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..!
ನವದೆಹಲಿ / ಮಂಗಳೂರು : ರಾಯ್ ಬರೇಲಿ ಹಾಗೂ ವಯನಾಡು ಎರಡೂ ಕಡೆಯಿಂದ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಚುನಾವಣೆ ಸ್ಪರ್ಧಿಸುವುದು ಖಚಿತವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ.
2019 ರ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಮರು ಜೀವ ನೀಡಿದ ಕ್ಷೇತ್ರ ವಯನಾಡು. ಅಮೇಠಿ ಹಾಗೂ ವಯನಾಡಿನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಅಮೇಠಿಯಲ್ಲಿ ಸೋಲು ಕಂಡಿದ್ದರು. ಬಿಜೆಪಿಯ ಸ್ಮೃತಿ ಇರಾನಿ ಗೆಲುವು ಸಾಧಿಸಿ ಸಚಿವೆ ಕೂಡಾ ಆಗಿದ್ದರು. 2024 ರ ಚುನಾವಣೆಯಲ್ಲಿ ಅಮೇಠಿಯಲ್ಲಿ ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್ ಶರ್ಮ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದಾರೆ.
ರಾಯಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಈ ಬಾರಿ ಅವರು ರಾಜ್ಯಸಭೆಯಿಂದ ಸಂಸದರಾಗಿ ಕ್ಷೇತ್ರವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟಿದ್ದರು. ರಾಯಬರೇಲಿಯಲ್ಲಿ ರಾಹುಲ್ ಗಾಂಧಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಇನ್ನು ವಯನಾಡಿನಲ್ಲೂ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದರು. ಇದೀಗ ವಯನಾಡು ಕ್ಷೇತ್ರವನ್ನು ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ.
ಈ ಎರಡೂ ಕ್ಷೇತ್ರಗಳ ಜನರ ಜೊತೆ ನನ್ನ ಉತ್ತಮ ಬಾಂಧವ್ಯವಿದ್ದು, ವಯನಾಡು ಕ್ಷೇತ್ರ ಬಿಟ್ಟಿರುವುದಕ್ಕೆ ತುಂಬಾ ಬೇಸರವಾಗಿದೆ. ಆದ್ರೆ, ನನ್ನ ಸಹೋದರಿ ಅಲ್ಲಿ ಗೆದ್ದು ಜನರ ಜೊತೆ ಇರಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನು ಓದಿ:ಪ್ರತಿಭಟನೆ ವೇಳೆ ಸುಸ್ತಾದ ಬಿಜೆಪಿಯ ಹಿರಿಯ ನಾಯಕ ಭಾನುಪ್ರಕಾಶ್ ನಿಧನ
LATEST NEWS
ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತ; 8 ಮಂದಿ ಸಾವು
ನವದಹಲಿ: ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ(ಜೂ.17) ಗೂಡ್ಸ್ ರೈಲು ಸೀಲ್ದಾಹ್ ಕಡೆಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ 19 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Read More..; ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ
ನ್ಯೂ ಜಲ್ಪೈಗುರಿ ಬಳಿ ಗೂಡ್ಸ್ ರೈಲು ಸಿಗ್ನಲ್ ಅನ್ನು ನಿರ್ಲಕ್ಷಿಸಿದ ಕಾರಣ ಮತ್ತು ಅಗರ್ತಲಾದಿಂದ ಸೀಲ್ದಾಹ್ಗೆ ತೆರಳುತ್ತಿದ್ದ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿದೆ ಎಂದು ರೈಲ್ವೇ ಮಂಡಳಿಯ ಅಧ್ಯಕ್ಷ ಜಯ ವರ್ಮ ಸಿನ್ಹಾ ಹೇಳಿದ್ದಾರೆ.
DAKSHINA KANNADA
ಚಿಕ್ಕಮೇಳದ ಹೆಸರಿನಲ್ಲಿ ಯಕ್ಷಗಾನ ಕಲೆಗೆ ಅಪಚಾರ ಮಾಡದಿರಿ; ಒಕ್ಕೂಟ ಮನವಿ
ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ ಮನೆ ಮನೆಗೆ ಚಿಕ್ಕ ಮೇಳಗಳು ಹೊರಡುತ್ತವೆ. ಆದರೆ ಯಕ್ಷಗಾನದ ಬಾಲಪಾಠವೂ ಆಗದವರಿಂದ ಚಿಕ್ಕ ಮೇಳ ಎಂದು ಹೆಸರಿಟ್ಟುಕೊಂಡು ಅದೊಂದು ದಂಧೆಯಾಗಿ ವ್ಯಾಪಕವಾಗಿರುವುದು ನೋವಿನ ಸಂಗತಿ ಎಂದು ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಮಿತಿ ದೂರಿದೆ.
ಸಂಪ್ರದಾಯಕ್ಕೆ ಬದ್ಧವಾಗಿ, ಶಿಸ್ತುಬದ್ಧವಾಗಿ ಯಕ್ಷಗಾನ ಮಾಡಲು ಕಲಾವಿದರಲ್ಲಿ ಒಟ್ಟು ಮಾಡಿಕೊಂಡು ತೆಂಕುತಿಟ್ಟು ಚಿಕ್ಕಮೇಳ ಹೆಸರಿನಲ್ಲಿ ತಿರುಗಾಟವನ್ನು ಆರಂಭಿಸಲಾಗಿದೆ. ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಮನೆಯಲ್ಲಿ ಆಟವಾಡಿಸಲು ಜನತೆ ಅನುವು ಮಾಡಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ನಿಜವಾದ ಕಲಾವಿದರಿಗೆ ಅನ್ಯಾಯವಾಗಬಾರದು ಎನ್ನುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಒಕ್ಕೂಟದ ಅಧಿಕೃತ ಪರವಾಣಿಗೆ ಪಡೆದು ತಿರುಗಾಟ ಮಾಡುವವರು ಸಂಜೆ 6ರಿಂದ ರಾತ್ರಿ 10.30ರವರೆಗೆ ಕನ್ನಡ ಇಲ್ಲವೇ ತುಳುಭಾಷೆಗಳ ಗರಿಷ್ಠ 20 ನಿಮಿಷಗಳ ಸಂದೇಶ ಇರುವ ಸನ್ನಿವೇಶದ ಪ್ರದರ್ಶನ ಮಾಡಲಿರುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ರಮೇಶ ಕುಲಶೇಖರ, ಕುಮಾರ್ ಮಾಲೆಮಾರ್, ದಿವಾಕರ ದಾಸ್, ಕಡಬ ದಿನೇಶ ರೈ ಮೊದಲಾದವರಿದ್ದರು.
- LATEST NEWS4 days ago
ಅಡುಗೆ ಮನೆಯಿಂದ ಹಲ್ಲಿಗಳನ್ನು ಓಡಿಸಲು ಈ ಟಿಪ್ಸ್ ಅನುಸರಿಸಿ
- LATEST NEWS5 days ago
ಅಡುಗೆಯಲ್ಲಿ ಉಪ್ಪು ಜಾಸ್ತಿ ಆಯ್ತಾ? ಯೋಚನೆ ಬೇಡ, ಈ ಟಿಪ್ಸ್ ಫಾಲೋ ಮಾಡಿ
- FILM5 days ago
ಡ್ರೋನ್ ಪ್ರತಾಪ್ ಹುಟ್ಟು ಹಬ್ಬಕ್ಕೆ ಸಿಕ್ತು ಬ್ಯೂಟಿಫುಲ್ ಗಿಫ್ಟ್
- LATEST NEWS6 days ago
ನಿಲ್ಲಿಸಿದ್ದ ಕಂಟೈನರ್ ಗೆ ಎಕ್ಸ್ ಪ್ರೆಸ್ ಬಸ್ ಡಿಕ್ಕಿ..; ಚಾಲಕ ಸಹಿತ 20ಕ್ಕೂ ಅಧಿಕ ಮಂದಿಗೆ ಗಾಯ