Connect with us

DAKSHINA KANNADA

ಮುಲ್ಕಿ: ರಿಬ್ಬನ್ಸ್‌ ಆ್ಯಂಡ್ ಬೆಲೂನ್ಸ್‌ ಸಂಸ್ಥೆಯ 29ನೇ ಶಾಖೆ ಶುಭಾರಂಭ

Published

on

ಮುಲ್ಕಿ: ದೇಶದ ವಿವಿಧ ಕಡೆಗಳಲ್ಲಿ ಶ್ರೇಷ್ಠತೆಯ ಗುಣಮಟ್ಟದ ಕೇಕ್ ಮತ್ತಿತ್ತರ ಉತ್ಪನ್ನಗಳ ಹೆಸರು ಮಾಡಿರುವ ರಿಬ್ಬನ್ಸ್ ಆ್ಯಂಡ್ ಬಲೂನ್ಸ್‌ ಸಂಸ್ಥೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 29 ಶಾಖೆಗಳ ಮೂಲಕ ಉತ್ತಮ ಸೇವೆಯನ್ನು ನೀಡಿ ಜನ ಮೆಚ್ಚುಗೆಯನ್ನು ಪಡೆದು ದೇಶದ 149ನೇ ಶಾಖೆ ಮೂಲ್ಕಿಯಲ್ಲಿ ಆರಂಭವಾಗುವ ಮೂಲಕ ನಮ್ಮೂರಿನ ಜನರ ಸೇವೆಗೆ ಮುಂದಾಗಿದೆ.

ಈ ಸಂಸ್ಥೆ ಇದೇ ರೀತಿ ಯಶಸ್ಸು ಕಾಣಲಿ ಎಂದು ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಹಾಗೂ ಆಡಳಿತ ಮೊಕ್ತೇಸರ ಎನ್.ಎಸ್‌ ಮನೋಹರ್ ಶೆಟ್ಟಿ ಹೇಳಿದರು.

ಅವರು ದೇಶದ ಪ್ರಖ್ಯಾತ ಕೇಕ್ ತಯಾರಿಕಾ ಸಂಸ್ಥೆ ರಿಬ್ಬನ್ಸ್‌ ಆ್ಯಂಡ್ ಬೆಲೂನ್ಸ್‌ ಸಂಸ್ಥೆಯ 149ನೇ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 29ನೇ ಶಾಖೆ ಮೂಲ್ಕಿ ಅದಿದನ್ ಹೊಟೇಲ್ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮತ್ತೋರ್ವ ಮುಖ್ಯ ಅತಿಥಿ ಉದ್ಯಮಿ ಹಾಗೂ ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಎಂ ಅತುಲ್ ಕುಡ್ವ ಮಾತನಾಡಿ ‘ದೇಶದ ಮಕ್ಕಳ ಮೆಚ್ಚುಗೆಯ ರಿಬ್ಬನ್ ಆ್ಯಂಡ್ ಬೆಲೂನ್ಸ್‌ ಸಂಸ್ಥೆ ನಮ್ಮ ಊರಲ್ಲಿ ಆರಂಭವಾಗಿದೆ.

ದೇವರ ಆಶೀರ್ವಾದ ಹಾಗೂ ಜನರ ಪ್ರೀತಿಯನ್ನು ಗಳಿಸಿ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹೇಳಿದರು.
ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಬಾಷ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಶುಭ ಹಾರೈಸಿದರು.

ರಿಬ್ಬನ್ ಆ್ಯಂಡ್ ಬೆಲೂನ್ ಪ್ರಾಂಚೈಸಿ ಸಂಸ್ಥೆಯ ಮಾಲಕ ಸಿ.ಎ ಸತೀಶ್ ಶೆಟ್ಟಿ ಮಾತನಾಡಿ ತಮ್ಮ ಕಂಪೆನಿಯ ಮೂಲಕ ಗುಣಮಟ್ಟದ ತಯಾರಿಕೆಗಳನ್ನು ಜನರಿಗೆ ಒದಗಿಸುವಲ್ಲಿ ಯಾವತ್ತೂ ರಾಜಿ ಮಾಡಿಕೊಳ್ಳದೆ ಜನರ ಹಿತ ಮತ್ತು ಪ್ರೀತಿಯನ್ನು ಬೆಳೆಸಿರುವ ಫಲವಾಗಿ ಕಂಪೆನಿಯು ಈ ಎತ್ತರಕ್ಕೆ ಬೆಳೆದು ನಿಂತಿದೆ’ ಎಂದು ಹೇಳಿದರು.

ಸಂಸ್ಥೆಯ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಪ್ರಸ್ತಾವಿಸಿ ನಿತೇಶ್ ಶೆಟ್ಟಿ ಇರಂದಾಡಿ ಸ್ವಾಗತಿಸಿದರು.

ನಮಿತ ಶೆಟ್ಟಿ ಅಧಿದನ್ ಹೊಟೇಲ್ ಮಾಲಕ ಉದಯ ಶೆಟ್ಟಿ, ಸಮಾಜ ಸೇವಕ ಎನ್ ಕಿಶೋರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?

Published

on

ಇತ್ತೀಚಿನ ದಿನಗಳಲ್ಲಿ ತುಳುನಾಡಿನ ದೈವಾರಾಧನೆ ವಿಶ್ವ ಪ್ರಸಿದ್ದಿಯನ್ನು ಪಡೆದುಕೊಳ್ಳುತ್ತಿದ್ದು, ಸಾವಿರಾರು ಜನ ತುಳುನಾಡ ದೈವಗಳನ್ನು ನಂಬಲು ಆರಂಭಿಸಿದ್ದಾರೆ. ಆದ್ರೆ ದೈವಗಳನ್ನು ನಂಬುವ ಬಗೆ ಹೇಗೆ ಅನ್ನೋದು ಗೊತ್ತಿಲ್ಲದೆ ಇದ್ರೂ ಭಕ್ತಿಯಿಂದ ಕೈ ಮುಗಿದವರನ್ನು ದೈವಗಳು ಎಂದಿಗೂ ಕೈ ಬಿಟ್ಟಿಲ್ಲ. ಹೀಗಾಗಿ ಸೆಲೆಬ್ರೆಟಿಗಳೂ ಸೇರಿದಂತೆ ಪ್ರತಿನಿತ್ಯ ಹಲವಾರು ಜನ ದೈವ ಸಾನಿಧ್ಯಕ್ಕೆ ಬಂದು ಭಕ್ತಿಯಿಂದ ಕೈ ಮುಗಿಯುತ್ತಿದ್ದಾರೆ. ಅದರಲ್ಲೂ ಕುತ್ತಾರು ಕೊರಗಜ್ಜನ ಕ್ಷೇತ್ರವಂತೂ ನಿತ್ಯ ಹೊರ ಜಿಲ್ಲೆಯ ಭಕ್ತರಿಂದ ತುಂಬಿ ತುಳುಕುತ್ತಿರುತ್ತದೆ.

ದೈವಾರಾಧನೆಯೇ ಪ್ರಮುಖವಾಗಿರುವ ತುಳುನಾಡಿನಲ್ಲಿ ಜನ ದೇವರಿಗಿಂತ ಹೆಚ್ಚು ಭಯ ಪಡೋದು ದೈವಗಳಿಗೆ. ಪ್ರಕೃತಿಯ ಆರಾಧನೆಯ ಮೂಲಕ ಇಲ್ಲಿನ ನೆಲ, ಜಲ, ಹಾಗೂ ಪರಿಸರ ಎಲ್ಲದರಲ್ಲೂ ದೈವಗಳನ್ನು ಕಾಣುವ ಸಂಸ್ಕೃತಿ ತುಳುನಾಡಿನದ್ದು. ಸಾವಿರದ ಎರಡು ದೈವಗಳು ಇಲ್ಲಿ ಆರಾಧಿಸಲ್ಪಡುತ್ತದೆ ಅನ್ನೋದು ಇತ್ತೀಚಿನ ವರೆಗೆ ಸಂಶೋಧಕರು ಕಂಡು ಕೊಂಡಿರೋ ಸತ್ಯ ಕೂಡ.

ಕೊರಗಜ್ಜ ಯಾರು ಏನು ಅನ್ನೋದು ಇಲ್ಲಿ ಮುಖ್ಯವಾಗದೇ ಇದ್ರೂ ಕೊರಗಜ್ಜ ಸಮಸ್ಯೆಗಳಿಗೆ ಪರಿಹಾರ ನೀಡ್ತಾನೆ ಅನ್ನೋದು ನಂಬಿ ಬರುವ ಭಕ್ತರಿಗೆ ಇರುವ ಆಶಾಕಿರಣ. ಯಾವುದೇ ಮದ್ಯವರ್ತಿ ಇಲ್ಲದೆ ತಾವೇ ಕೊರಗಜ್ಜನಿಗೆ ಪೂಜೆ ಸಲ್ಲಿಸಿ ಅವರಿಗೆ ಇಷ್ಟವಾದುದನ್ನು ಕೊಟ್ಟು ಕೈ ಮುಗಿದು ಬೇಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ಮೇಲು ಕೀಳೆಂಬ ಭೇದ-ಭಾವ ಇಲ್ಲ. ಇನ್ನು ಕೊರಗಜ್ಜ ಶ್ರೀಮಂತನಿಂದಲೂ ಬಡವನಿಂದಲೂ ಕೇಳೋದು ಎಲೆ ಅಡಿಕೆ , ಚಕ್ಕುಲಿ, ಹಾಗೂ ಒಂದು ಸ್ವಲ್ಪ ಮದ್ಯ ಅಷ್ಟೇ…

ಕೇವಲ ಎಲೆ-ಅಡಿಕೆಗೆ ನಮ್ಮ ಕಷ್ಟಕಾರ್ಪಣ್ಯಗಳನ್ನು ಪರಿಹಾರ ಮಾಡೊ ದೈವ ಎಂದರೆ ಸ್ವಾಮಿ ಕೊರಗಜ್ಜ. ಅಜ್ಜನನ್ನು ಆರಾಧಿಸಬೇಕೆಂದರೆ ದೊಡ್ಡ ದೊಡ್ಡ ದೈವ ಸ್ಥಾನಗಳೇ ಬೇಕೆಂದಿಲ್ಲ. ಕೇವಲ ಮನಸಿನಲ್ಲೇ ಸ್ವಾಮಿ ಕೊರಗಜ್ಜ ಅಂತ ಕಷ್ಟದ ಸಮಯದಲ್ಲಿ ನೆನೆಸಿದ್ರೆ ಸಾಕು ಅದ್ಯಾವುದೋ ರೂಪದಲ್ಲಿ ಬಂದು ಕಷ್ಟ ಪರಿಹಾರ ಮಾಡ್ತಾರೆ ಅನ್ನೋ ನಂಬಿಕೆ ತುಳುನಾಡಿನ ಜನರಲ್ಲಿ ಇದೆ. ಇನ್ನು ಕೊರಗಜ್ಜನ ಹಲವು ಕ್ಷೇತ್ರಗಳು ತುಳುನಾಡಿನಲ್ಲಿದ್ದು ಅಲ್ಲಿಗೆ ಎಲೆ ಅಡಿಕೆ, ಚಕ್ಕುಲಿ, ಮದ್ಯದ ಹರಕೆ ಹೇಳಿಕೊಂಡ್ರೆ ಮುಗಿತು.

ಇನ್ನು ಕೊರಗಜ್ಜನಿಗೆ ಅಗೇಲು ನೀಡುವ ಸಂಪ್ರದಾಯವಿದ್ದು ಅಲ್ಲಿ ಕೊರಗಜ್ಜನಿಗೆ ಕೋಡೊದು ಅನ್ನ, ಬಸಳೆಯ ಸಾರು, ಮೀನಿನ ಪದಾರ್ಥ, ಕೋಳಿಯ ಪದಾರ್ಥ, ಬೇಯಿಸಿದ ಮೊಟ್ಟೆ, ನಿಂಬೆ ಹಣ್ಣಿನ ಉಪ್ಪಿನಕಾಯಿ ಹಾಗೂ ಮದ್ಯ ಮಾತ್ರ. ಇದಿಷ್ಟಕ್ಕೆ ತೃಪ್ತಿಪಟ್ಟುಕೊಳ್ಳುವ ಕೊರಗಜ್ಜ “ಅಜ್ಜಾ ಕಾಪುಲೆ ನಮನ್.. ಈರೆಗ್ ಬಾಜೆಲ್ ಕೊರ್ಪೆ” ಅಂತ ಹೇಳಿದರೆ ಸಾಕು ಕ್ಷಣ ಮಾತ್ರದಲ್ಲಿ ಭಕ್ತರ ಇಚ್ಛೆಯನ್ನು ನೆರವೇರಿಸುತ್ತಾನೆ.

ನೀವು ಕೊರಗಜ್ಜನ ಫೋಟೊವನ್ನು ಮನೆಯಲ್ಲಿ ಇಡಬಹುದಾ.. ಎಂದು ನೋಡುವುದಾದರೆ ಅಜ್ಜನ ಫೋಟೋ ಮಾತ್ರವಲ್ಲ ಯಾವ ದೈವಗಳ ಫೋಟೋವನ್ನೂ ಮನೆಯಲ್ಲಿ ಇಟ್ಟು ಆರಾಧನೆ ಮಾಡುವ ಪದ್ಧತಿ ಅಷ್ಟು ಬಳಕೆಯಲ್ಲಿಲ್ಲ. ಫೋಟೋ ಇಟ್ಟು ಆರಾಧನೆ ಮಾಡಬೇಕೆಂದು ಎಲ್ಲೂ ಹೇಳಿಲ್ಲ. ತಿನ್ನುವಂತಹ ಆಹಾರದಲ್ಲಿ, ನಾವು ನೋಡುವಂತಹ ನೋಟದಲ್ಲಿ, ನಾವು ಮಾಡುವ ಒಳ್ಳೆಯ ಕೆಲಸದಲ್ಲಿ, ಅಜ್ಜನ ಪ್ರಸಾದದಲ್ಲಿ ಅಜ್ಜ ಇರುತ್ತಾನೆ. ಹೀಗಾಗಿ ಅಜ್ಜನ ಫೋಟೋ ಇಟ್ಟು ಪೂಜಿಸುವ ಕ್ರಮ ಇಲ್ಲ. ಪವಿತ್ರವಾದ ಹೃದಯದಲ್ಲಿ ನಾವು ಯಾವ ದೈವವನ್ನು ನಂಬುತ್ತೇವೊ ಆ ದೈವಕ್ಕೆ ನೆಲೆ ಕೊಟ್ಟರೆ ನಾವು ಎಲ್ಲಿ ನಿಂತು ಕೈ ಮುಗಿದರೂ ಕೂಡ ಕೊರಗಜ್ಜ ಆಗಲಿ ಅಥವಾ ಇನ್ನು ಯಾವೂದೇ ದೈವವಾಗಲಿ ಅಲ್ಲಿ ಬಂದು ನಮ್ಮನ್ನು ಕಾಪಾಡಿಯೇ ಕಾಪಾಡುತ್ತಾರೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending