Wednesday, December 1, 2021

ಕಾರ್ಕಳ: ದ್ವಿಚಕ್ರ ವಾಹನ ಹಾಗೂ ರಿಕ್ಷಾ ಢಿಕ್ಕಿ- ಸವಾರರಿಗೆ ಗಾಯ

ಕಾರ್ಕಳ: ದ್ವಿಚಕ್ರ ವಾಹನ ಹಾಗೂ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಾಯಗೊಂಡ ಘಟನೆ ಕಾರ್ಕಳದ ದೂಪದಕಟ್ಟೆ ಪಂಜೊಟ್ಟು ರಸ್ತೆ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.


ಅಮಿತ್ ಎಂ ಎಂಬಾತ ತನ್ನ ಸ್ನೇಹಿತ ಭುವನ್ ಎಂಬಾತನೊಂದಿಗೆ ಕಾರ್ಕಳ ಕಡೆಯಿಂದ ನಿಟ್ಟೆ ಕಡೆಗೆ ಹೋಗುತ್ತಿರುವಾಗ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ದೂಪದಕಟ್ಟೆ ಪಂಜೊಟ್ಟು ರಸ್ತೆ ಕ್ರಾಸ್ ಎಂಬಲ್ಲಿ ರಿಕ್ಷಾವೊಂದು ಹಠಾತ್ತನೆ ಅಡ್ಡ ಬಂದ ಪರಿಣಾಮ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ರಸ್ತೆಗೆ ಬಿದ್ದು, ಸವಾರ ಭುವನ್ ನ ಬಲಕೈ ಮೊಣಗಂಟಿನ ಬಳಿ ಒಳನೋವು, ಬಲಕಾಲಿನ ಕೆಳಗೆ ಹಾಗೂ ಮೂಗಿಗೆ ತರಚಿದ ಗಾಯವಾಗಿದ್ದು, ಅಮಿತ್ ಮೂಗಿಗೆ ರಕ್ತಗಾಯ, ತಲೆಗೆ ಒಳನೋವು ಆಗಿದ್ದು,

ಚಿಕಿತ್ಸೆ ಬಗ್ಗೆ ಮೊದಲು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...