ಕಾರ್ಕಳ: ಕಾರು ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ನಡೆದಿದೆ.
ಶೇಖರ ಮೂಲ್ಯ(58) ಸಾವಿಗೀಡಾದವರು.
ಶೇಖರ ಮೂಲ್ಯ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು ವಾಪಾಸು ಕಾಡುಹೊಳೆ ರಿಕ್ಷಾ ಸ್ಟ್ಯಾಂಡ್ ಗೆ ಬರುತ್ತಿದ್ದಾಗ ದೊಂಡೇರಂಗಡಿ ಕಡೆಯಿಂದ ಅತೀ ವೇಗವಾಗಿ ಬಂದ ಟವೇರಾ ವಾಹನ ನೂಜಿಗುರಿಯ ತಿರುವಿನಲ್ಲಿ ಶೇಖರ ಮೂಲ್ಯ ಚಲಾಯಿಸುತ್ತಿದ್ದ ರಿಕ್ಷಾಗೆ ರಭಸವಾಗಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಶೇಖರ್ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉಡುಪಿಯ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.