Wednesday, May 18, 2022

ಟ್ರಕ್‌-ಬಸ್‌ ನಡುವೆ ಭೀಕರ ರಸ್ತೆ ಅಪಘಾತ: 18 ಜನ ಮೃತ್ಯು, 19 ಮಂದಿ ಗಂಭೀರ

ಲಕ್ನೋ: ಉತ್ತರ ಪ್ರದೇಶದ ಲಕ್ನೋ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯ ಬಾರಾಬಂಕಿ ಬಳಿ ಟ್ರಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ಮೃತಪಟ್ಟಿದ್ದಾರೆ. 19 ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಅತೀ ವೇಗದಲ್ಲಿ ಟ್ರಕ್ ಬಂದು ಡಬಲ್ ಡೆಕ್ಕರ್ ಬಸ್ ಗೆ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ರಸ್ತೆ ಬದಿಯಲ್ಲಿ ಮಲಗಿದ್ದ 18 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟದ್ದಾರೆ. ಬಸ್ಸಿನಲ್ಲಿದ್ದ 24 ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

140 ಕ್ಕೂ ಹೆಚ್ಚು ಮಂದಿ ಕೂಲಿ ಕಾರ್ಮಿಕರು ಬಿಹಾರಕ್ಕೆ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದರು.ಬಸ್ಸು ಕೆಟ್ಟು ರಸ್ತೆ ಪಕ್ಕದಲ್ಲಿ ನಿಂತಿತ್ತು.ಆಗ ಟ್ರಕ್ ಬಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ಸು ರಸ್ತೆ ಪಕ್ಕದಲ್ಲಿ ಮಲಗಿದ್ದವರ ಮೇಲೆ ಸಾಗಿದೆ. ಅದರಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದವರು 24 ಮಂದಿಗೆ ಗಾಯಗಳಾಗಿವೆ. ಅದರಲ್ಲಿ 19 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ರಾಮ್ ಸ್ನೇಹಿಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...