Sunday, November 27, 2022

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ವಿನೂತನ ರೀತಿಯ ಪ್ರತಿಭಟನೆ ನಡೆಯಿತು.


ಉಡುಪಿಯ ಕಲ್ಮಾಡಿ ಚರ್ಚ್ ಬಳಿಯಿಂದ ಕರಾವಳಿ ಬೈಪಾಸ್‌ವರೆಗೆ  ಪಾದಯಾತ್ರೆ ನಡೆಸಿದರು.

ಪ್ರತಿಭಟನೆಯಲ್ಲಿ ರಸ್ತೆಯಲ್ಲಿನ ಹೊಂಡಗಳ ದುರವಸ್ಥೆಗೆ ಕಾರಣವಾದ ಬಿಜೆಪಿ ಸರಕಾರದ ವಿರುದ್ದ, ಹಾಗೂ ಸಂಸದೆ ಶೋಧಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ವಿರುದ್ದ‌ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ದುರವಸ್ತೆ ಬಗ್ಗೆ ಉಡುಪಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ರಮೇಶ್‌ ಕಾಂಚನ್‌ ವಾಗ್ದಾಳಿ ನಡೆಸಿದರು.

 

LEAVE A REPLY

Please enter your comment!
Please enter your name here

Hot Topics

ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸಿದ್ರೆ ಭಾರತದಲ್ಲಿ 30 ಮಕ್ಕಳು ಜನಿಸ್ತಾರೆ-ಕೇಂದ್ರ ಸಚಿವ

ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ...

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...