Connect with us

    BELTHANGADY

    ಬೆಳ್ತಂಗಡಿ: ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರಿಂದ ಗಿಡ ನೆಟ್ಟು ಪ್ರತಿಭಟನೆ

    Published

    on

    ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದೆ. ಹೀಗಾಗಿ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಸ್ಥಳೀಯ ನಿವಾಸಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

    ರಸ್ತೆಯ ಅವ್ಯವಸ್ಥೆಯಿಂದಾಗಿ ವಾಹನಗಳು ಸಂಚರಿಸಲು ಪರದಾಡುವ ಸ್ಥಿತಿ ಉಂಟಾಗಿದೆ. ಪ್ರತಿ ನಿತ್ಯ ಈ ರಸ್ತೆಯಲ್ಲಿ ಶಾಲಾ ಕಾಲೇಜು ಮಕ್ಕಳು, ಸಾರ್ವಜನಿಕರು, ಪ್ರವಾಸಿಗರು ಸೇರಿದಂತೆ ನೂರಾರು ಜನರು ಸಂಚರಿಸುತ್ತಾರೆ. ಈ ರಸ್ತೆ ದುರಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದರೂ ರಸ್ತೆ ದುರಸ್ತಿಗೆ ಯಾರೂ ಮುಂದಾಗಿಲ್ಲ ಎಂದು ತಿಳಿದುಬಂದಿದೆ.

    ಹದಗೆಟ್ಟ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಆಗ್ರಹಿಸಿ ಸ್ಥಳೀಯ ನಾಗರಿಕರು ಬಾಳೆಗಿಡ, ಇತರ ಸಸಿಗಳನ್ನು ರಸ್ತೆ ಮಧ್ಯೆ ನೆಟ್ಟು ಪ್ರತಿಭಟನೆ ನಡೆಸಿದರು.

    BELTHANGADY

    ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾ*ವು

    Published

    on

    ಬೆಳ್ತಂಗಡಿ: ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃ*ತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ.

    ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ (26) ಮೃ*ತ ಯುವಕ.

    ಸಜೇಶ್ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ನ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ. ಈ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಜೇಶ್ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃ*ತಪಟ್ಟಿದ್ದಾರೆ ಎನ್ನಲಾಗಿದೆ.

    Continue Reading

    BELTHANGADY

    ಬೆಳ್ತಂಗಡಿ: ಕ*ರೆಂಟ್ ಶಾ*ಕ್ ಹೊಡೆದು ಬಾಲಕ ಸಾ*ವು

    Published

    on

    ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕ*ರೆಂಟ್ ಶಾ*ಕ್ ಹೊಡೆದು ಸಾ*ವನ್ನಪ್ಪಿದ ಘಟನೆ ಬೆಳ್ತಂಗಡಿಯ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು (ಡಿ.1ಬೆಳಗ್ಗೆ ನಡೆದಿದೆ.

    ತೆಂಕಕಾರಂದೂರು ಪೆರೋಡಿತ್ತಾಯನಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಪನ್ (14) ಮೃ*ತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

    ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಗೋದಲಿ ಲೈಟಿಂಗ್ ಮಾಡುವ ವೇಳೆ ವಿದ್ಯುತ್ ಸ್ಪ*ರ್ಶಿಸಿ ಅವಘಡ ಸಂಭವಿಸಿದೆ. ತಕ್ಷಣ ಆತನ ಅಜ್ಜಿ ಹಾಗು ದೊಡ್ಡಪ್ಪ ಸ್ಥಳೀಯ ಆಸ್ಪತ್ರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆವಾಗಲೇ ಮೃ*ತ ಪಟ್ಟಿರುವುದಾಗಿ ತಿಳಿದು ಬಂದಿದೆ. ಬಾಲಕನ ತಂದೆ ತಾಯಿ ಎರಡು ವರ್ಷದ ಹಿಂದೆ ಮೃ*ತ ಪಟ್ಟಿರುತ್ತಾರೆ. ತಮ್ಮ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ.

     

    ಇದನ್ನೂ ಓದಿ : ತೆರೆದ ಬಾವಿಗೆ ಬಿದ್ದು ಶಾಲಾ ವಿದ್ಯಾರ್ಥಿ ದಾ*ರುಣ ಅಂ*ತ್ಯ !!

     

    ಸ್ಥಳಕ್ಕೆ ವೇಣೂರು ಠಾಣಾಧಿಕಾರಿ ಶ್ರೀ ಶೈಲಾ , ಮೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ಕ್ಲೇಮೆಂಟ್ ಬ್ರಗ್ಸ್ ಘಟನಾ ಭೇಟಿ ನೀಡಿದ ಪರಿಶೀಲನೆ ನಡೆಸಿದರು.

    Continue Reading

    BELTHANGADY

    ಬೆಳ್ತಂಗಡಿ : ಖಾಸಗಿ ಬಸ್ ಬೈಕ್‌ಗೆ ಡಿ*ಕ್ಕಿಯಾಗಿ ಸವಾರ ದಾ*ರುಣ ಅಂ*ತ್ಯ

    Published

    on

    ಬೆಳ್ತಂಗಡಿ : ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎನ್ನುವಲ್ಲಿ ಬಸ್ಸಿನಡಿಗೆ ಬೈಕ್‌ ಬಿ*ದ್ದ ಪರಿಣಾಮ ಸವಾರ ಮೃ*ತಪಟ್ಟ ಘಟನೆ ಡಿ. 15ರ ಸಂಜೆ ಸಂಭವಿಸಿದೆ.

    ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಮೃ*ತ ಬೈಕ್‌ ಸವಾರ.

    ಖಾಸಗಿ ಬಸ್ಸಿನಲ್ಲಿ ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಆ ಬಸ್‌, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯ ಅವರ ಬೈ*ಕಿಗೆ ಕಾಪಿನಬಾಗಿಲು ಸಪ್ತಗಿರಿ ಕಾಂಪ್ಲೆಕ್ಸ್‌ ಸಮೀಪ ಮು*ಖಾಮುಖಿ ಡಿ*ಕ್ಕಿ ಆಗಿದೆ.

    ಅ*ಪಘಾತದ ರಭಸಕ್ಕೆ ಬೈಕ್‌ ಸವಾರನ ತ*ಲೆಗೆ ಗಂ*ಭೀರ ಗಾ*ಯವಾಗಿದ್ದು, ತಕ್ಷಣ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃ*ತಪಟ್ಟಿದ್ದಾರೆ. ಮೃ*ತರು ಮರದ ಕೆಲಸ (ಬಡಗಿ) ಮಾಡುತ್ತಿದ್ದರು. ತಂದೆ, ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

    Continue Reading

    LATEST NEWS

    Trending