Connect with us

    DAKSHINA KANNADA

    ಕಡಬ ಕೆರೆ ನೀರಿನಿಂದ ರಸ್ತೆ ಮುಳುಗಡೆ..! ಸಂಕಷ್ಟದಲ್ಲಿ ದಲಿತ ಕುಟುಂಬ..!

    Published

    on

    ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವ್ಯಾಪ್ತಿಗೆ ಬರುವ ಕಡಬ ಹಳೆ ಸ್ಟೇಷನ್ ಕೆರೆಯಲ್ಲಿ ನೀರು ತುಂಬಿ ಸಮೀಪ ಇರುವ ದಲಿತ ವರ್ಗದ ಮನೆಯ ರಸ್ತೆಗೆ ನುಗ್ಗಿದ್ದು, ಇದರಿಂದ ದಲಿತ ಕುಟುಂಬ ಮನೆಯಿಂದ ಹೊರಹೋಗಲು ಕಷ್ಟ ಪಡುವಂತಾಗಿದೆ.

    ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಪಾತ್ರಿ ಶ*ವವಾಗಿ ಪತ್ತೆ!

    ಹಳೆಸ್ಟೇಷನ್ ನಿವಾಸಿ ಪೊಡಿಯ ಎಂಬವರ ಕುಟುಂಬ ಈ ಸಮಸ್ಯೆಗೆ ಸಿಲುಕಿದ್ದು ಸಂಬಂಧಪಟ್ಟವರು ಕೂಡಲೇ ಗಮನಹರಿಸಬೇಕೆಂದು ಒತ್ತಾಯಿಸಲಾಗಿದೆ. ಹೆಚ್ಚಿನ ಮಳೆಯಾದಾಗ ಮನೆಗೆ ನೀರು ನುಗ್ಗುವ ಸಂಭವವೂ ಇದೆ. ಈ ಮನೆಯಿಂದ ದಿನನಿತ್ಯ ಸಣ್ಣ ಮಕ್ಕಳು ಶಾಲೆಗೆ ಹೋಗುತ್ತಿದ್ದು, ಮಕ್ಕಳನ್ನು ತಾಯಿ ಅಪಾಯಕಾರಿ ರೀತಿಯಲ್ಲಿ ನೀರಿನ ಮಧ್ಯೆಯೇ ಕರೆದೊಯ್ಯುತ್ತಿರುವುದು ಕಂಡು ಬಂದಿದೆ. ಸ್ವಲ್ಪ ಹೆಚ್ಚು ಕಮ್ಮಿ ಆದರೂ ದೊಡ್ಡ ತೊಂದರೆ ಆಗಲಿದೆ. ಈ ಕೆರೆಗೆ ಮೋರಿ ನಿರ್ಮಿಸಿ ನೀರನ್ನು ಹೊರಗಡೆ ಬಿಡಲಾಗುತ್ತಿದ್ದರೂ ಸರಾಗವಾಗಿ ನೀರು ಹೋಗದೆ ಇರುವುದರಿಂದ ದೊಡ್ಡ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ನಿನ್ನೆ(ಜು.5) ಕಡಬ ಸಮುದಾಯ ಕೇಂದ್ರದ ಆರೋಗ್ಯ ಸಹಾಯಕಿ ಹಾಗೂ ಆಶಾ ಕಾರ್ಯಕರ್ತೆ ಮನೆ ಭೇಟಿಗೆ ಹೋಗುವ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಅವರಿಗೆ ಆ ಮನೆಯನ್ನು ಸಂಪರ್ಕ ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

     

    DAKSHINA KANNADA

    ಜಾತ್ರಾ ವ್ಯಾಪಾರಿಯ ಪ್ರಾಮಾಣಿಕತೆ..! ಬೆಲೆಬಾಳುವ ಬ್ಯಾಗ್ ಮಾಲೀಕರಿಗೆ ವಾಪಾಸ್‌..!

    Published

    on

    ಕಾಪು : ಉಚ್ಚಿಲ ದಸರಾದಲ್ಲಿ ನಮ್ಮ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ರಘು ಧರ್ಮಸ್ಥಳ ಇವರಿಗೆ ದೇವಸ್ಥಾನದ ವಠಾರದಲ್ಲಿ 20,000.ಸಾವಿರ ನಗದು ಮತ್ತು ಕೆಲವೊಂದು ದಾಖಲೆ ಪತ್ರಗಳು, ಬ್ಯಾಗ್ ಸಮೇತ ಸಿಕ್ಕಿತ್ತು.


    ತಕ್ಷಣ ಅವರು ವಾರೀಸುದಾರರಾದ ಧರಣೇಂದ್ರ ಬಳ್ಳಾಂಜ ಅವರ ಫೋನ್ ನಂಬರನ್ನು ಸಂಪರ್ಕಿಸಿ ಸೊತ್ತುಗಳನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    Continue Reading

    DAKSHINA KANNADA

    ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ

    Published

    on

    ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.

    ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
    ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ

    Published

    on

    ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.

    ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.

    ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್‌ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.

    Continue Reading

    LATEST NEWS

    Trending