Connect with us

  LATEST NEWS

  ಕಾರ್ಕಳದಲ್ಲಿ ರಸ್ತೆ ಅವ್ಯವಸ್ಥೆ-‘ಚಿನ್ನದ ರಸ್ತೆ’ಎಂದು ಹೆಸರಿಟ್ಟು ವಿನೂತನ ಪ್ರತಿಭಟನೆ

  Published

  on

  ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರು ಮಾರ್ಗದಿಂದ ಹೋಟೆಲ್ ಕಾಮಧೇನುವರೆಗಿನ ರಸ್ತೆ ಸಂಪೂರ್ಣ ಕೆಟ್ಟು ಹೋಗಿ ಬೃಹತ್ ಹೊಂಡ ಗು೦ಡಿಗಳು ನಿರ್ಮಾಣವಾಗಿದ್ದು, ಪುರಸಭಾ ಸದಸ್ಯ ಶುಭದರಾವ್ ನೇತೃತ್ವದಲ್ಲಿ ಸಾರ್ವಜನಿಕರು “ಚಿನ್ನದ ರಸ್ತೆ” ಎಂದು ಹೆಸರು ಇಟ್ಟು ವಿನೂತವಾಗಿ ಪ್ರತಿಭಟನೆ ನಡೆಸಿದರು.


  ಕಾರ್ಕಳ ಬಸ್ಸ್ ನಿಲ್ದಾಣದಿಂದ ಇಲ್ಲಿನ ಕಾಮಧೇನು ಹೋಟೆಲಿನ ರಸ್ತೆಯವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿ ಬಂತು.

  ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳ ಪುರಸಭಾ ಸದಸ್ಯ ಶುಭದರಾವ್ ಅವರು ‘ಈ ರಸ್ತೆ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಸುನಿಲ್ ಕುಮಾರ್ ಅವರ ಕ್ಷೇತ್ರದ ಈ ರಸ್ತೆಗೆ ನಾವು ಚಿನ್ನದ ರಸ್ತೆ ಅಂತ ಹೆಸರು ಇಟ್ಟು ಇವತ್ತು ಉದ್ಘಾಟನೆ ಮಾಡುತ್ತಿದ್ದೇವೆ.


  ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕಾರ್ಕಳ ಉತ್ಸವ ಮಾಡಿ ಹಣವನ್ನು ಲೂಟಿ ಮಾಡಿದ್ದಾರೆ. ಇವರ ಕ್ಷೇತ್ರದ ರಸ್ತೆಯ ಅವಸ್ಥೆ ನೋಡಿದ್ರೆ ಯಾರಿಗೂ ಬೇಡ. ಹಲವಾರು ಅಪಘಾತಗಳು ರಸ್ತೆಯಲ್ಲಿ ಸಂಭವಿಸಿದೆ.

  ಅದರೂ ಕೂಡ ಕಾರ್ಕಳ ಪುರಸಭೆಯಾಗಲಿ, ಶಾಸಕರಲ್ಲಿ ಯಾರು ಕೂಡ ಇದರ ಬಗ್ಗೆ ಗಮನಹರಿಸುತ್ತಿಲ್ಲ.

  ಎಷ್ಟೇ ಮನವಿಯನ್ನು ಕೊಟ್ಟರೂ ಕೋಣನ ಮುಂದೆ ಕಿನ್ನರಿ ಬಾರಿಸಿದ ಹಾಗೆ ಆಗಿದೆ.
  ಹಾಗಾಗಿ ಇವತ್ತು ಕೋಣವನ್ನು ಹಿಡಿದುಕೊಂಡು ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದೇವೆ.

  ಸಚಿವರಿಗೆ ಮತ್ತು ಕಾರ್ಕಳ ಪುರಸಭೆಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಸ್ತೆಯನ್ನು ರಿಪೇರಿ ಮಾಡಿ ಸಂಚಾರಕ್ಕೆ ಯೋಗ್ಯ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

  LATEST NEWS

  ಕೇಂದ್ರ ಬಜೆಟ್ 2024 : ಗಮನ ಸೆಳೆದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀರೆ

  Published

  on

  ಮಂಗಳೂರು / ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ.  ಪ್ರತೀ ವರ್ಷದಂತೆ ಈ ವರ್ಷವೂ ಅವರ ಸೀರೆ ಗಮನ ಸೆಳೆದಿದೆ. ಅವರು ಮೆಜೆಂಟಾ ಮತ್ತು ಗೋಲ್ಡ್ ಬಾರ್ಡರ್ ಹೊಂದಿರುವ ಬಿಳಿ ಚೆಕ್ ಸೀರೆಯನ್ನು ಉಟ್ಟಿದ್ದಾರೆ.


  ಸತತ ಏಳನೇ ಬಜೆಟ್ ಮಂಡಿಸುತ್ತಿರುವ ಮೊದಲ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಹೊರಹೊಮ್ಮಿದ್ದಾರೆ. ಇದು ಭಾರತದ ಇತಿಹಾಸದ ಪುಟ ಸೇರಿದೆ.

  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಕೈಮಗ್ಗ ಸೀರೆ ಸಂಗ್ರಹ ಅಧಿಕ. ಹೀಗಾಗಿ ಇದು ಎಲ್ಲರ ಗಮನ ಸೆಳೆಯುತ್ತದೆ. ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲು ಸಂಸತ್ತಿಗೆ ತೆರಳುತ್ತಿದ್ದಾಗ,  ತಮ್ಮ ತಂಡದೊಂದಿಗೆ ಫೋಟೋಗೆ ಫೋಸ್ ನೀಡಿದರು. ಅವರು ಚೌಕಾಕಾರದ ಚೆಕ್ ಮತ್ತು ಚಿನ್ನದ ಕಸೂತಿಯೊಂದಿಗೆ ಅಗಲವಾದ ಮೆಜೆಂಟಾ ಬಾರ್ಡರ್ ಹೊಂದಿರುವ ಆಫ್-ವೈಟ್ ಬೇಸ್ ಕೈಮಗ್ಗ ಸೀರೆಯಲ್ಲಿ ಕಂಗೊಳಿಸುತ್ತಿದ್ದರು.

  Continue Reading

  DAKSHINA KANNADA

  ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡಿ; ರಾಜ್ಯ ಸರಕಾರಕ್ಕೆ ದ.ಕ. ಹಾಲು ಒಕ್ಕೂಟ ಪ್ರಸ್ತಾವನೆ

  Published

  on

  ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಲು ಉತ್ಪಾದಕರಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡಲು ಒಪ್ಪಿಗೆ ಸೂಚಿಸುವಂತೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ.

  ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪ್ರಸಕ್ತ ಹೈನುಗಾರರಿಗೆ ಲೀಟರ್‌ಗೆ ಕನಿಷ್ಠ 35 ರೂ. ಹಾಗೂ ರಾಜ್ಯ ಸರಕಾರದ ಸಬ್ಸಿಡಿ ಮೊತ್ತ 5 ರೂ. ಸೇರಿ ಒಟ್ಟು 40 ರೂ. ನೀಡಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ದಿನಕ್ಕೆ ಸರಾಸರಿ 3,91,367 ಲೀ. ಹಾಲು ಉತ್ಪಾದನೆಯಾಗುತ್ತಿದ್ದು ಕೊರತೆ ಸರಿದೂಗಿಸಲು ಹೊರ ಜಿಲ್ಲೆಗಳಿಂದ 1 ಲಕ್ಷ ಲೀಟರ್‌ ಹಾಲು ಖರೀದಿಸಲಾಗುತ್ತಿದೆ. ಇತರ ಜಿಲ್ಲೆಗೆ ಹೋಲಿಸಿ ದರೆ ನಮ್ಮಲ್ಲಿ ಉತ್ಪಾದನ ವೆಚ್ಚವೂ ಅಧಿಕ. ಅದಕ್ಕಾಗಿ ಮತ್ತೆ 5 ರೂ. ಮೊತ್ತವನ್ನು ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಳ ನಿರೀಕ್ಷಿಸಬಹುದು ಎಂದರು.

  ನಂದಿನಿ ಪಶು ಆಹಾರ ಚೀಲಕ್ಕೆ 1,350 ರೂ. ದರವಿದ್ದು, ಆಗಸ್ಟ್‌ 1ರಿಂದ ಹೈನುಗಾರರಿಗೆ ಪ್ರತಿ ಚೀಲಕ್ಕೆ 25 ರೂ. ಸಬ್ಸಿಡಿ ನೀಡಲಾಗುವುದು. ಇದರಿಂದ ಒಕ್ಕೂಟಕ್ಕೆ 30 ಲಕ್ಷ ರೂ. ಹೊರೆಯಾಗಲಿದೆ. ಇದಲ್ಲದೆ ಪಶು ಸಾಕಣೆ, ಮೇವು ಮುಂತಾದವುಗಳಿಗೆ ಸಬ್ಸಿಡಿ ಯೋಜನೆ, ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಶೂನ್ಯಬಡ್ಡಿ ಸಾಲ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

  ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಸ್‌.ಬಿ.ಜಯರಾಮ ರೈ ಬಳಜ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನಾರಾಯಣ ಪ್ರಕಾಶ್‌, ಪದ್ಮನಾಭ ಶೆಟ್ಟಿ, ಸುಧಾಕರ ರೈ, ಬೋಳ ಸದಾಶಿವ ಶೆಟ್ಟಿ, ನರಸಿಂಹ ಕಾಮತ್‌, ಕಮಲಾಕ್ಷ ಹೆಬ್ಟಾರ್‌, ಸವಿತಾ ಎನ್‌.ಶೆಟ್ಟಿ, ಸ್ಮಿತಾ ಆರ್‌.ಶೆಟ್ಟಿ, ಸುಭದ್ರಾ ರಾವ್‌, ವ್ಯವಸ್ಥಾಪಕ ನಿರ್ದೇಶಕ ವಿವೇಕ್‌, ಮಾರುಕಟ್ಟೆ ಮುಖ್ಯಸ್ಥ ರವಿರಾಜ್‌ ಉಡುಪ ಉಪಸ್ಥಿತರಿದ್ದರು.

  Continue Reading

  DAKSHINA KANNADA

  ಲಾರಿಯ ಟಯರ್‌ ಬದಲಿಸುವಾಗ ಹೊರಚಿಮ್ಮಿದ ಡಿಸ್ಕ್; ವ್ಯಕ್ತಿಗೆ ಗಂಭೀ*ರ ಗಾ*ಯ

  Published

  on

  ಪುತ್ತೂರು : ಲಾರಿಯೊಂದರ ಟಯರ್‌ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್‌ ಸಮೇತ ಕಾಂಪೌಂಡ್‌ ಗೆ ಎಸೆಯಲ್ಪಟ್ಟು, ವ್ಯಕ್ತಿಯೊಬ್ಬರು ಗಂಭೀ*ರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ(ಜು.22) ರಾತ್ರಿ ನಡೆದಿದೆ.

  ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಗಂಭೀರವಾಗಿ ಗಾಯಗೊಂಡವರು. ತನ್ನ ಬಾವನಿಗೆ ಸೇರಿದ ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು ಎನ್ನಲಾಗಿದೆ.

  ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ನ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್ ಗೆ ಎಸೆಯಲ್ಪಟ್ಟಿದ್ದಾರೆ.

  ಇದನ್ನೂ ಓದಿ :‘ಕೊಹ್ಲಿ’ ಜೊತೆಗಿನ ನಿಮ್ಮ ಸಂಬಂಧ ಹೇಗಿದೆ? ಎಂದು ಪ್ರಶ್ನಿಸಿದಕ್ಕೆ ‘ಗಂಭೀರ್’ ಖಡಕ್ ಉತ್ತರವೇನು ಗೊತ್ತಾ?
  ತೀವ್ರ ಗಾಯಗೊಂಡ ರಶೀದ್‌ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

  Continue Reading

  LATEST NEWS

  Trending