Connect with us

  BANTWAL

  ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ: ಧೂಳಿನಿಂದ ವಿಪರೀತ ಸಮಸ್ಯೆ-ಸಾರ್ವಜನಿಕರ ಆಕ್ರೋಶ..!

  Published

  on

  ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಗ್ಗಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

  ಬಂಟ್ವಾಳ: ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಗ್ಗಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

  ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ಬುಧವಾರದೊಳಗೆ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದ ಬಳಿಕ ತಾತ್ಕಾಲಿಕವಾಗಿ ಅಂತ್ಯಗೊಂಡಿತು.

  ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು ಕಲ್ಲಡ್ಕದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಹೊಂಡ ಮುಚ್ಚಿ, ರಸ್ತೆಯನ್ನು ಸದೃಢವಾಗಿಸುವ ಕೆಲಸ ಆರಂಭಿಸಬೇಕು, ಧೂಳಿನ ಸಮಸ್ಯೆ ತಲೆದೋರಿದ್ದು, ಇದಕ್ಕೆ ಮುಕ್ತಿ ನೀಡಬೇಕು, ಡ್ರೈನೇಜ್ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

  ಬುಧವಾರದೊಳಗೆ ಕಾಮಗಾರಿ ಆರಂಭಗೊಳ್ಳದೇ ಇದ್ದರೆ, ಕಲ್ಲಡ್ಕ ಪೇಟೆ ಬಂದ್, ಹೆದ್ದಾರಿ ತಡೆಯಂಥ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

  ಸಂಸದ ನಳಿನ್ ಕುಮಾರ್ ಕಟೀಲ್ ಆ. 16ಕ್ಕೆ ಬಂಟ್ವಾಳಕ್ಕೆ ಬಂದಿದ್ದ ಸಂದರ್ಭ ಕಲ್ಲಡ್ಕದ ವರ್ತಕರ, ಸಾರ್ವಜನಿಕರ ನಿಯೋಗ ಭೇಟಿ ಮಾಡಿ, ಕಲ್ಲಡ್ಕದಲ್ಲಿ ಹೆದ್ದಾರಿ ಕಾಮಗಾರಿ ಸಂದರ್ಭ ಉಂಟಾಗುವ ತೊಂದರೆ ಕುರಿತು ಗಮನ ಸೆಳೆದಿದ್ದರು.

  ಮುಖ್ಯವಾಗಿ ಹದಗೆಟ್ಟ ರಸ್ತೆ ಹಾಗೂ ಧೂಳಿನಿಂದ ಉಂಟಾಗುವ ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದರು.

  ಈ ಸಂದರ್ಭ ಮಳೆ ಕಡಿಮೆಯಾದಾಗ ಗಟ್ಟಿಯಾದ ಡಾಂಬರು ಹಾಕಿಸುವುದು ಹಾಗೂ ಧೂಳಿಗೆ ತಕ್ಷಣವೇ ಕಲ್ಲಡ್ಕದಲ್ಲಿ ಪ್ರತಿನಿತ್ಯ ನೀರು ಸಿಂಪಡಿಸುವ ಕುರಿತು ಸಂಸದ ನಳಿನ್ ಸೂಚನೆ ನೀಡಿದ್ದರು.

  ಆದರೆ ಸಂಸದರು ಸೂಚನೆ ನೀಡಿದಾಗ ಒಪ್ಪಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಯಾವುದನ್ನೂ ಅನುಷ್ಠಾನ ಮಾಡದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯಿತು.

  ಗುರುವಾರ ಮಧ್ಯಾಹ್ನ ಪ್ರತಿಭಟನೆ ನಡೆದ ಸಂದರ್ಭ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಎಸ್.ಐ. ರಾಮಕೃಷ್ಣ ಮತ್ತು ಸಿಬಂದಿ, ಗುತ್ತಿಗೆ ಕಂಪನಿಯ ಅಧಿಕಾರಿಗಳು ಆಗಮಿಸಿ ಮಾತುಕತೆ ನಡೆಸಿದರು.

  ಈ ಸಂದರ್ಭ ಸಮಸ್ಯೆ ಕುರಿತು ಪ್ರತಿಭಟನಾಕಾರರು ಅಧಿಕಾರಿಗಳಿಗೆ ಮನದಟ್ಟು ಮಾಡಿದರು.

  BANTWAL

  ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

  Published

  on

  ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

  ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

  ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

  Continue Reading

  BANTWAL

  ಬಂಟ್ವಾಳ: ವಿದ್ಯುತ್ ಶಾ*ಕ್‌ ಹೊಡೆದು ಶಾಮಿಯಾನದ ಕೆಲಸಗಾರ ಬ*ಲಿ

  Published

  on

  ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ನಿನ್ನೆಯ ದಿನ ಶಾಮಿಯಾನದ ಲಾರಿ ಪಲ್ಟಿಯಾಗಿ ಓರ್ವ ಮೃ*ತಪಟ್ಟ ಘಟನೆಯ ಬೆನ್ನಲ್ಲೇ ಶಾಮಿಯಾನದ ಕೆಲಸಗಾರನೋರ್ವ ವಿದ್ಯುತ್ ಶಾ*ಕ್‌ ಗೆ ಬ*ಲಿಯಾದ ದುರಂ*ತ ಘಟನೆ ನಡೆದಿದೆ.

  ಲಾರಿಯಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ ವಿದ್ಯುತ್ ವಯರ್ ತಾಗಿ ನಾಲ್ವರು ಕೆಲಸಗಾರರಿಗೆ ಗಾಯವಾಗಿದ್ದು, ಅದರಲ್ಲಿ ಓರ್ವ ಗಂಭೀರವಾಗಿ ಗಾ*ಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಇದ್ದರು. ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃ*ತಪಟ್ಟ ಘಟನೆ ಕಡೇಶಿವಾಲಯ ಸಮೀಪ ಕಾಡಬೆಟ್ಟು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

  ಈತ ಕಲ್ಲಡ್ಕ ಸಾಲಿಯಾನ್ ಶಾಮಿಯಾನದ ಕೆಲಸಗಾರರು ಎಂದು ಸ್ಥಳೀಯರು ತಿಳಿಸಿದ್ದು, ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ನಾಲ್ವರು ಕೆಲಸಗಾರರು ಉತ್ತರಪ್ರದೇಶ ಮೂಲದವರು ಎಂದು ಹೇಳಲಾಗುತ್ತಿದೆ.

  ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  BANTWAL

  ವಿಟ್ಲದಲ್ಲಿ ಕುಸಿದು ಬಿದ್ದ ಕೋಳಿ ಶೆಡ್; 1500ಕ್ಕೂ ಅಧಿಕ ಕೋಳಿ ಸಾ*ವು

  Published

  on

  ವಿಟ್ಲ: ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ.

  ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು.

  ಶೆಡ್ಡಿನ ಮೇಲ್ಚಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತುಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾ*ಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

  Continue Reading

  LATEST NEWS

  Trending