DAKSHINA KANNADA
ಉಳ್ಳಾಲ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳವು-ಆರೋಪಿಗಳು ಸಹಿತ ಬೈಕ್ ವಶ
Published
2 years agoon
By
Adminಉಳ್ಳಾಲ: ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದನ್ನು ಎಗರಿಸಿದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬುಧವಾರ ಬಂಧಿಸಿ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಸರಗೋಡಿನ ಚೆರ್ಕಳ ನಿವಾಸಿ ಅಬ್ದುಲ್ ರಶೀದ್ (23) ಕುಂಜಾರುಪ್ಪಾರ ನಿವಾಸಿ ಅಬ್ದುಲ್ ಶಬೀರ್ (21) ಬಂಧಿತ ಆರೋಪಿಗಳು.
ಎ.25 ರಂದು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ಬಗಂಬಿಲ ನಿವಾಸಿ ರಂಜಿತ್ ಎಂಬವರ ಎಫ್ ಝಡ್ ಬೈಕ್ ಕಳವು ನಡೆದಿತ್ತು. ಈ ಕುರಿತು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಜೂ.೧ ರಂದು ಉಚ್ಚಿಲ ಬ್ರಿಡ್ಜ್ ಬಳಿ ಉಳ್ಳಾಲ ಠಾಣಾ ಪಿಎಸ್ ಐ ಪ್ರದೀಪ್ ಟಿ.ಆರ್ ಮತ್ತು ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿರುವಾಗ ಬೈಕ್ ಪತ್ತೆಯಾಗಿದೆ. ಮುಂಭಾಗದಲ್ಲಿ ನಂಬರ್ ಪ್ಲೇಟ್ ಇಲ್ಲದೇ ತೆರಳುತ್ತಿರುವುದನ್ನು ಗಮನಿಸಿ ಸಂಶಯಗೊಂಡು ಬೈಕನ್ನು ತಡೆದು ದಾಖಲೆಗಳ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇಬ್ಬರು ಕಳವು ನಡೆಸಿದ ಬೈಕನ್ನು ಕೆಲಕಾಲ ಉಪಯೋಗಿಸಿ ನಂತರ ಮಾರಾಟ ಮಾಡುವ ಯೋಚನೆಯಲ್ಲಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ.
ಎಸಿಪಿ ದಿನಕರ ಶೆಟ್ಟಿ ಮಾರ್ಗದರ್ಶನದಂತೆ ಆರೋಪಿಗಳ ಪತ್ತೆ ಕಾರ್ಯದಲ್ಲಿ ಉಳ್ಳಾಲ ಠಾಣಾ ನಿರೀಕ್ಷಕ ಸಂದೀಪ್ ಜಿ.ಎಸ್, ಉಪನಿರೀಕ್ಷಕರ ಪ್ರದೀಪ್ ಟಿ.ಆರ್, ಪಿಎಸ್ಐ ರೇವಣ್ಣ ಸಿದ್ದಪ್ಪ, ಎಎಸ್ ಐ ಶೇಖರ್ ಗಟ್ಟಿ , ಸಿಬ್ಬಂದಿಗಳಾದ ಪ್ರವೀಣ್ ಶೆಟ್ಟಿ, ರಂಜಿತ್ ಕುಮಾರ್, ಅಶೋಕ್, ಚಿದಾನಂದ್ , ವಾಸುದೇವ, ಅಕ್ಬರ್ ಭಾಗವಹಿಸಿದ್ದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
24 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ