Connect with us

    ರಸ್ತೆಗೆ ಆವರಣ ಗೋಡೆ ಕುಸಿದು ಬಿದ್ದು ಸಂಚಾರಕ್ಕೆ ಅಡ್ಡಿ: ಆತಂಕದಲ್ಲಿ ಗ್ರಾಮಸ್ಥರು

    Published

    on

    ರಸ್ತೆಗೆ ಆವರಣ ಗೋಡೆ ಕುಸಿದು ಬಿದ್ದು ಸಂಚಾರಕ್ಕೆ ಅಡ್ಡಿ: ಆತಂಕದಲ್ಲಿ ಗ್ರಾಮಸ್ಥರು..

    ಪಡುಬಿದ್ರಿ: ಭಾರಿ ಮಳೆಗೆ ಪಡುಬಿದ್ರಿ ಅವರಾಲು ಮಟ್ಟು ರಸ್ತೆಗೆ ಆವರಣ ಗೋಡೆಯೊಂದು ಕುಸಿದು ಬಿದ್ದು ರಸ್ತೆ ಸಂಪೂರ್ಣ ಮುಚ್ಚಲ್ಪಟ್ಟಿದ್ದು, ವಾಹನ ಸಂಚಾರಕ್ಕೆ ತೊಡಕು ಉಂಟಾದ ಘಟನೆ ನಡೆದಿದೆ.

    ಸುಜ್ಲಾನ್ ಗಾಳಿ ಯಂತ್ರ ತಯಾರಿಕಾ ಸಂಸ್ಥೆಗೆ ಸೇರಿದ ಯೋಜನಾ ಪ್ರದೇಶಕ್ಕೆ ನಿರ್ಮಿಸಲಾದ ಆವರಣ ಗೋಡೆ ಇದಾಗಿದ್ದು,

    ಅತೀ ಎತ್ತರಕ್ಕೆ ಅವೈಜ್ಞಾನಿಕವಾಗಿ ನಿರ್ಮಿಸಲಾದ ಆವರಣ ಗೋಡೆಯ ತಳಭಾಗದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆಗಳಿಲ್ಲ.

    ಮಳೆ ನೀರು ಹರಿದು ಬರುವ ರಭಸಕ್ಕೆ ಆವರಣ ಗೋಡೆಗೆ ಅಡಿಪಾಯ ಸಡಿಲಗೊಂಡು ಗೋಡೆ ಕುಸಿದಿದೆ ಎನ್ನಲಾಗಿದ್ದು, ಘಟನೆ ವೇಳೆ ಯಾವುದೇ ವಾಹನ ಸಂಚರಿಸದೆ ಇರುವುದರಿಂದ ಭಾರಿ ಅನಾಹುತ ತಪ್ಪಿದೆ.

    ಹಲವು ವರ್ಷಗಳಿಂದ ಈ ಭಾಗದಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿದ್ದು, ಯೋಜನೆಯ ಸುತ್ತ ನಿರ್ಮಿಸಲಾದ ಆವರಣ ಗೋಡೆ ಅಲ್ಲಲ್ಲಿ ಶಿಥಿಲಗೊಂಡಿದೆ.

    ಇದರಿಂದಾಗಿ ಆವರಣ ಗೋಡೆಯ ಪಕ್ಕದಲ್ಲೇ ಸಾಗುವ ಸಂಚಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

    ಗೋಡೆ ಕುಸಿದು ರಸ್ತೆ ತಡೆಯಾದ ವಿಚಾರ ತಿಳಿದ ಕೂಡಲೇ ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಬಳಿಕ ಜಿಸಿಬಿ ಯಂತ್ರದ ಮೂಲಕ ತುರ್ತಾಗಿ ರಸ್ತೆಯಲ್ಲಿದ್ದ ಕಲ್ಲು ಮಣ್ಣು ತೆರವುಗೊಳಿಸಿದರು.

    ಆದರೆ ರಭಸದಿಂದ ಹರಿದು ಬರುವ ಮಳೆ ನೀರು ರಸ್ತೆಗೆ ಬಿದ್ದು ಕೆಂಪು ಮಣ್ಣಿನೊಂದಿಗೆ ಮಿಶ್ರಣಗೊಂಡು ರಸ್ತೆ ಸಂಪೂರ್ಣ ಕೆಸರುಮಯವಾಗಿ ನಡೆದಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಕುಂದಾಪುರ : ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಡಿ*ಕ್ಕಿ; ಕಾರು ಚಾಲಕ ಸ್ಥಳದಲ್ಲೇ ಸಾ*ವು

    Published

    on

    ಕುಂದಾಪುರ : ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಡಿ*ಕ್ಕಿ ಹೊಡೆದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃ*ತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಬಳಿ ನಿನ್ನೆ ರಾತ್ರಿ ನಡೆದಿದೆ.

    ಭಟ್ಕಳ ಮೂಸ ನಗರದ ನಿವಾಸಿ ದಿವಂಗತ ಅಬೂಬಕರ್ ಸಿದ್ದೀಕ್ವಾ ಅವರ ಪುತ್ರ ಮೊಹಮ್ಮದ್ ನಾಸಿರ್ ಸಿದ್ದೀಕ್ವಾ ಮೃತಪಟ್ಟವರು. ಇವರು ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳದ ಮನೆಗೆ ಮರಳುತ್ತಿದ್ದ ವೇಳೆ ಅರಾಟೆ ಸೇತುವೆ ಬಳಿ ಬರುತ್ತಿದಾಗ ವಾಹನದಿಂದ ಶಬ್ಧ ಕೇಳಿ ಬಂದ ನಂತರ ನಾಸಿರ್ ಕಾರನ್ನು ನಿಲ್ಲಿಸಿದ್ದರು ಎನ್ನಲಾಗಿದೆ. ರಸ್ತೆ ಬದಿ ವಾಹನ ನಿಲ್ಲಿಸಿ ಸಮಸ್ಯೆ ಪರಿಶೀಲಿಸಲು ಮುಂದಾಗಿದ್ದಾರೆ. ಬಳಿಕ ಮತ್ತೆ ಅವರು ಕಾರನ್ನು ಹತ್ತಲು ಮುಂದಾದಾಗ, ಅದೇ ಮಾರ್ಗದಲ್ಲಿ ಕುಂದಾಪುರದಿಂದ ಗಂಗೊಳ್ಳಿಗೆ ತೆರಳುತ್ತಿದ್ದ ಖಾಸಗಿ ಬಸ್ ಕಾರಿನ ಡೊರಿಗೆ ಡಿಕ್ಕಿ ಹೊಡೆದಿದ್ದು, ಅಲ್ಲೇ ಇದ್ದ ನಾಸಿರ್ಗೆ ತೀವ್ರ ಸ್ವರೂಪದ ಗಾ*ಯಗಳಾಗಿವೆ. ತಕ್ಷಣ ನಾಸಿರ್ ಅವರನ್ನು ಇಬ್ರಾಹಿಂ ಗಂಗೊಳ್ಳಿ ಅವರು ಆಂಬ್ಯುಲೆನ್ಸ್ ನಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಅದಾಗಲೇ ಮೃ*ತಪಟ್ಟಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಪುತ್ತೂರು : ಆಂಬ್ಯುಲೆನ್ಸ್ – ಪಿಕಪ್ ನಡುವೆ ಅಪ*ಘಾತ

    Published

    on

    ಪುತ್ತೂರು: ಆಂಬ್ಯುಲೆನ್ಸ್ ಹಾಗೂ ಪಿಕಪ್ ನಡುವೆ ಅಪ*ಘಾತತ ಸಂಭವಿಸಿ, ಚಾಲಕ ಹಾಗೂ ಆಂಬ್ಯುಲೆನ್ ನಲ್ಲಿದ್ದ ಮಗು ಗಾಯ*ಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ.

    ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿ*ಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

    Continue Reading

    DAKSHINA KANNADA

    ಬಸ್‌ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ..! ಧರ್ಮದೇಟು ತಿಂದ ಮುಸ್ಲಿಂ ಯುವಕ..!

    Published

    on

    ಮಂಗಳೂರು ( ಸುಳ್ಯ ) : ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಈ ವಿಚಾರ ತಿಳಿದ ವಿದ್ಯಾರ್ಥಿನಿಯ ಸಹಪಾಠಿಗಳು ಯುವಕನನ್ನು ಹಿಡಿದು ಹಲ್ಲೆ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

    ಸುಬ್ರಹ್ಮಣ್ಯ ಸಮೀಪದ ಬಿಸಲೆ ಘಾಟ್‌ ಬಳಿ ವಿದ್ಯಾರ್ಥಿನಿ ಬೆಂಗಳೂರಿನಿಂದ ಬಂದಿದ್ದ ಬಸ್ ಹತ್ತಿದ್ದಳು. ಈ ವೇಳೆ ಯುವಕೊನೊಬ್ಬ ಕುಳಿತಿದ್ದ ಸೀಟ್‌ ಪಕ್ಕದ ಸೀಟ್ ಖಾಲಿ ಇದ್ದ ಕಾರಣ ಆಕೆ ಆತನ ಪಕ್ಕದಲ್ಲೇ ಕುಳಿತಿದ್ದಾಳೆ. ಆದ್ರೆ ವಿದ್ಯಾರ್ಥಿನಿ ಪಕ್ಕದಲ್ಲಿ ಕುಳಿತ ಸ್ವಲ್ಪ ಸಮಯದಲ್ಲೇ ಯುವಕ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದಾನೆ. ಈ ವಿಚಾರವನ್ನು ಬಸ್ ನಿರ್ವಾಹಕನಿಗೆ ತಿಳಿಸಿದಾಗ ನಿರ್ವಾಹಕ ಹಾಗೂ ಬಸ್‌ ಪ್ರಯಾಣಿಕರು ಆರೋಪಿ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ವಿದ್ಯಾರ್ಥಿನಿ ಈ ವಿಚಾರವನ್ನು ಸುಳ್ಯದ ತನ್ನ ಕಾಲೇಜು ಸಹಪಾಠಿಗಳ ಗಮನಕ್ಕೂ ತಂದಿದ್ದಾಳೆ. ಈ ನಡುವೆ ಯುವಕ ಸುಬ್ರಹ್ಮಣ್ಯದಲ್ಲಿ ಬಸ್‌ನಿಂದ ಇಳಿದು ಬೇರೆ ಬಸ್ ಮೂಲಕ ಸುಳ್ಯದತ್ತ ಪ್ರಯಾಣ ಮಾಡಿದ್ದಾನೆ. ಬೆಂಗಳೂರಿನ ಬಸ್‌ನಲ್ಲಿ ಪ್ರಯಾಣಿಸಿ ಸುಳ್ಯ ತಲುಪಿದ್ದ ವಿದ್ಯಾರ್ಥಿನಿ ಈ ವಿಚಾರವನ್ನು ತನ್ನ ಸಹಪಾಠಿಗಳಿಗೆ ತಿಳಿಸಿದ್ದಾಳೆ. ತಕ್ಷಣ ಸುಳ್ಯದ ಪೈಚಾರು ಎಂಬಲ್ಲಿಗೆ ಕಾರಿನಲ್ಲಿ ತೆರಳಿದ ವಿದ್ಯಾರ್ಥಿಗಳು ಅಲ್ಲಿ ಯುವಕ ಪ್ರಯಾಣಿಸುತ್ತಿದ್ದ ಬಸ್‌ನಿಂದ ಆತನನ್ನು ಇಳಿಸಿದ್ದಾರೆ. ಬಳಿಕ ಆತನನ್ನು ಕಾರಿನಲ್ಲಿ ಸುಳ್ಯ ಬಸ್ ನಿಲ್ದಾಣಕ್ಕೆ ಕರೆತಂದು ಬಸ್ ನಿಲ್ದಾಣದಲ್ಲಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

    ವಿದ್ಯಾರ್ಥಿಗೆ ಕಿರುಕುಳ ನೀಡಿದ ಯುವಕ ಕೇರಳ ಮೂಲದವನಾಗಿದ್ದು, ಆತನ ಹೆಸರು ನಿಯಾಜ್‌ ಎಂದು ಗೊತ್ತಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ ನಿಯಾಜ್‌ನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಕೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

    Continue Reading

    LATEST NEWS

    Trending