Connect with us

LATEST NEWS

ಕಾಪು ಮೀನುಗಾರಿಕಾ ಬೋಟ್ ನಲ್ಲಿ ಲಕ್ಷಾಂತರ ಮೌಲ್ಯದ ಮೀನು ದರೋಡೆ..!

Published

on

ಉಡುಪಿ: ಕಾಪು ಸಮೀಪದ ಕಡಲಿನ 10 ನಾಟಿಕಲ್ ಮೈಲ್‌ ದೂರದಲ್ಲಿ ಮೀನುಗಾರಿಕಾ ಬೋಟ್ ಒಂದನ್ನು ದರೋಡೆ ಮಾಡಿದ ಪ್ರಕರಣ ವರದಿಯಾಗಿದೆ.

ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಮೀನುಗಾರಿಕಾ ಬೋಟ್  ದರೋಡೆಯಾದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನಿಂದ ತೆರಳಿದ್ದ ಮಿರಾಶ್ -2 ಎಂಬ ಟ್ರಾಲ್‌ ಬೋಟ್‌ ದರೋಡೆಯಾಗಿರುವುದಾಗಿ ಅದರ ಮಾಲೀಕ ದೂರು ನೀಡಿದ್ದಾರೆ. ಮೀನುಗಾರಿಕೆ ಮುಗಿಸಿ ವಾಪಾಸಾಗುವ ವೇಳೆ ಕಾಪು ಲೈಟ್‌ ಹೌಸ್‌ ಬಳಿ ದರೋಡೆಕೋರರು ದಾಳಿ ಮಾಡಿದ್ದಾರೆ.  ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳನ್ನು ದರೋಡೆ ಮಾಡಲಾಗಿದೆ. ಮಂಗಳವಾರ ಮುಂಜಾನೆ 5 ರ ಸುಮಾರಿಗೆ ಘಟನೆ ನಡೆದಿದ್ದು, ಪರ್ಸಿನ್ ಬೋಟ್‌ನಲ್ಲಿ ಬಂದಿದ್ದ ಏಳೆಂಟು ಜನರ ತಂಡ ಟ್ರಾಲ್ ಬೋಟ್‌ ಹತ್ತಿ ಬೋಟ್‌ನಲ್ಲಿದ್ದವರಿಗೆ ಹಲ್ಲೆ ಮಾಡಿ ಮೀನಿನ ಬಾಕ್ಸ್‌ಗಳನ್ನು ದರೋಡೆ ಮಾಡಿದೆ. ಟ್ರಾಲ್ ಬೋಟ್ ಹತ್ತಿದ್ದ ದರೋಡೆಕೋರರ ನಡುವೆ ನಡೆದ ಹೊಡೆದಾಟದಲ್ಲಿ ಆರು ಜನರಿಗೆ ಗಾಯವಾಗಿದ್ದು, 12 ಬಾಕ್ಸ್‌ ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು ಹಾಗೂ ನಾಲ್ಕು ಮೊಬೈಲ್ ಫೋನ್ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಟ್ರಾಲ್ ಬೋಟ್ ಮಾಲೀಕ ಮಹಮ್ಮದ್ ಮುಸ್ತಾಫ್ ಭಾಷಾ ದರೋಡೆ ಮಾಡಿರುವ ಬೋಟ್  ಹೆಸರು ಹಾಗೂ ದರೋಡೆ ಮಾಡಿದವರನ್ನು ಗುರುತಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

LATEST NEWS

Trending