LATEST NEWS
ಕಾರು ಅಡ್ಡಗಟ್ಟಿ 1 ಕೋಟಿ ಹಣ ದೋಚಿದ ಕಳ್ಳರು
ಮಂಗಳೂರು/ತುಮಕೂರು: ಇತ್ತೀಚೆಗೆ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಾರು ಅಡ್ಡಗಟ್ಟಿ ಒಂದು ಕೋಟಿ ರೂಪಾಯಿಯನ್ನು ಖದೀಮರು ಎಗರಿಸಿದ್ದಾರೆ. ಈ ಘಟನೆ ತುಮಕೂರು ತಾಲ್ಲೂಕಿನ ನೆಲಹಾಳ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿನ್ನೆ(ಶನಿವಾರ) ನಡೆದಿದೆ.
ತಮಿಳುನಾಡಿನ ಸೇಲಂ ನಗರದ ಬೆಳ್ಳಿ ಆಭರಣ ವರ್ತಕ ಅನಿಲ್ ಮಹದೇವ್ ಗೆ ಸೇರಿದ ಹಣ ಮತ್ತು ಬೆಳ್ಳಿಯನ್ನ ದರೋಡೆ ಮಾಡಲಾಗಿದೆ. ಅನಿಲ್, ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬೆಳ್ಳಿ ಗಟ್ಟಿ ಖರೀದಿಸಿ ಕಾರಿನಲ್ಲಿ ಸೇಲಂಗೆ ಕೊಂಡೊಯ್ಯುತ್ತಿದ್ದರು. ಅವರ ಮಗ ಬಾಲಾಜಿ, ಸ್ನೇಹಿತರಾದ ಗಣೇಶ್, ವಿನೋದ್ ಜೊತೆಯಲ್ಲಿದ್ದರು. ಬೆಳಗಿನ ಜಾವ ಮೂರು ಕಾರುಗಳಲ್ಲಿ ಬಂದ ಏಳೆಂಟು ಕಳ್ಳರು ಕಾರು ಅಡ್ಡಗಟ್ಟಿ ಹ*ಲ್ಲೆ ನಡೆಸಿದ್ದಾರೆ. ಈ ವೇಳೆ ತಕ್ಷಣ ಕಾರಿನಿಂದ ಇಳಿದು ಬಾಲಾಜಿ, ಗಣೇಶ್, ವಿನೋದ್ ಕಳ್ಳರಿಂದ ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ : ಕಳ್ಳನನ್ನು ಹಿಡಿಯಲು ಹೋಗಿ ತಮ್ಮ ಪ್ರಾ*ಣಕ್ಕೆ ಕುತ್ತು ತಂದುಕೊಂಡ ಪೊಲೀಸರು
ಅನಿಲ್ ಅವರನ್ನು ಕಾರು ಸಮೇತ ಅಪಹರಿಸಿಕೊಂಡು ಹೋಗಿದ್ದ ಕಳ್ಳರು, ಸ್ವಲ್ಪ ದೂರ ಕರೆದೊಯ್ದು ಕೋರ ಪೊಲೀಸ್ ಠಾಣೆ ವ್ಯಾಪ್ತಿಯ ಅಜ್ಜೇನಹಳ್ಳಿ ಬಳಿ ಅನಿಲ್ ಮತ್ತು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. 350 ಕೆ.ಜಿ ಬೆಳ್ಳಿ ಗಟ್ಟಿ, 1 ಕೋಟಿ ಹಣ ದರೋಡೆ ಮಾಡಿದ್ದಾರೆ.
ಈ ಸಂಬಂಧ ಅನಿಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಅನಿಲ್ ತಮಿಳುನಾಡಿನ ಸೇಲಂನಲ್ಲಿ ಹತ್ತು ವರ್ಷದಿಂದ ಬೆಳ್ಳಿ ಆಭರಣ ಮಾರಾಟ ಮಳಿಗೆ ವ್ಯಾಪಾರ ಮಾಡುತ್ತಿದ್ದಾರೆ. ಕಳ್ಳರು ಎಲ್ಲಿಂದ ಬಂದಿದ್ದರು? ಬೆಳ್ಳಿ ಗಟ್ಟಿ ಸಾಗಿಸುತ್ತಿರುವ ಮಾಹಿತಿ ಸಿಕ್ಕಿದ್ದು ಹೇಗೆ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಗಾಂಜಾ ಸಾಗಾಟ ಪ್ರಕರಣ: ಓರ್ವ ಆರೋಪಿ ಸೆರೆ
ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಸಹಿತ ಒಟ್ಟು 1,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿಯ ಕುಕ್ಕೇಡಿಯ ಗೋಳಿಯಂಗಡಿ ನಿವಾಸಿ ಅಬುತಾಹಿರ್ ಯಾನೆ ಅನ್ವರ್ (25) ಬಂಧಿತ ಆರೋಪಿ. ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ನಲ್ಲಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್ಐ ನರೇಂದ್ರ, ಎಎಸ್ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
DAKSHINA KANNADA
ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ
ಕಾರ್ಕಳ: ಬ್ಯಾಂಕ್ ಅಕೌಂಟ್ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.
ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್ಡಿಎಫ್ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.
LATEST NEWS
SHOCKING NEWS : ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗುತ್ತಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- DAKSHINA KANNADA7 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- BIG BOSS4 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS4 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್
- BIG BOSS4 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!