BANTWAL
ಬಂಟ್ವಾಳದಲ್ಲಿ ಸೂರ್ಯ-ಚಂದ್ರ ಶಿವಲಿಂಗ ಚಿತ್ರದ ಶಿಲಾಶಾಸನ ಪತ್ತೆ
Published
3 years agoon
By
Adminಬಂಟ್ವಾಳ: ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ಇಲ್ಲಿನ ಮಾಣಿ ಗ್ರಾಮದ ವೀರಕಂಭ ಸಮೀಪದ ಶ್ರೀ ಗುಡ್ಡೆ ಚಾಮುಂಡಿ- ಪಂಜುರ್ಲಿ- ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆಯ ಕಂಬಳದ ಗದ್ದೆಯ ಬದಿಯಲ್ಲಿ ಇರುವಿಕೆಯ ಬಗ್ಗೆ ಮಾಹಿತಿ ಲಭ್ಯ ವಾಗಿದೆ.
ಈ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಚಂದ್ರರ ಚಿತ್ರ ನಡುವಿನಲ್ಲಿ ಶಿವಲಿಂಗ ದ ಚಿತ್ರವಿದೆ. ಬರಹಗಳು ತುಂಬಾ ಇದ್ದು ಅಸ್ಪಷ್ಟವಾಗಿದೆ ಮತ್ತು ಅಪೂರ್ವ ಮಾಹಿತಿಯನ್ನು ಒದಗಿಸುವ ಸಾಧ್ಯತೆ ಇದೆ. ಪ್ರಾಚೀನ ಕಾಲದಲ್ಲಿ ರಾಜ ಮಹಾರಾಜರ ಕಾಲದಲ್ಲಿ ದಾನ ಭೂಮಿಯನ್ನು ಗುರುತಿಸುವ ಕಲ್ಲೇ ಇದು ಅಥವಾ ಬಂಗರಸನ ಕಾಲದಲ್ಲಿ ಪ್ರತೀ ಗ್ರಾಮದ ದೇವರು ಮತ್ತು ದೈವಗಳ ವ್ಯಾಪ್ತಿಯಲ್ಲಿ ಬರುವ ಭೂಮಿಯನ್ನು ಗುರುತಿಸಲ್ಪಡುವ ಉದ್ದೇಶ ದಿಂದ ಸ್ತಾಪಿಸಿದ ಕಲ್ಲು ಇದಾಗಿರಬಹುದೇ ಎಂಬುದು ಸದ್ಯದ ಕುತೂಹಲ.
ನಾಲ್ಕು ಗುತ್ತು ಮೂರು ಗ್ರಾಮದ, ಅರಸು ದೈವ ಶ್ರೀ ಗುಡ್ಡೆ ಚಾಮುಂಡಿ ದೈವ ಈ ಪರಿಸರದಲ್ಲಿ ಗ್ರಾಮ ದೈವವಾಗಿದ್ದು ಸೀಮೆಯ ಅರಸು ದೈವಗಳಿಂದ ಅರ್ಧ ಸೀಮೆಯ ಭೂ ಭಾಗದ ಅಧಿಕಾರವನ್ನು ಸೆಳೆದುಕೊಂಡ ದೈವ ಎಂಬ ಹೆಗ್ಗಳಿಕೆ ಇದೆ. ಈ ದೈವದ ಅಧೀನದಲ್ಲಿ ಮೂರು ಗ್ರಾಮದಲ್ಲಿ 16ಕ್ಕೂ ಹೆಚ್ಚು ಕಂಬಳ ಗದ್ದೆಗಳು ಒಳಪಡುತ್ತದೆ.
ಈ ದಾಸಗದ್ದೆ ಅಥವಾ ದಾಸಖಂಡ ಕಂಬಳದ ಗದ್ದೆಯ ಬದಿಯಲ್ಲಿ ದೈವಗಳ ಚಾವಡಿ ಸಮೀಪದಲ್ಲಿ ಈ ಶಿಲಾ ಶಾಸನ ಪತ್ತೆಯಾಗಿರುವುದು ಐತಿಹಾಸಿಕ ವಾಗಿ ಒಂದು ಮಹತ್ವದ ಸಂಗತಿಯಾಗಿದೆ. ತಜ್ಞ ಇತಿಹಾಸಕಾರರು ಇದನ್ನು ಓದುವ ಪ್ರಯತ್ನ ಮಾಡಿದರೆ ಈ ಶಾಸನ ಕಲ್ಲಿನ ರೋಚಕ ಇತಿಹಾಸ ಬೆಳಕಿಗೆ ಬರಬಹುದು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ