ಉಡುಪಿ: ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಇಂದು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ಅವರು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನ ಪಡೆದರು.
ಈ ವೇಳೆ ಕೆಜಿಎಫ್-2 ನಿರ್ಮಾಪಕ ವಿಜಯ್ ಕಿರಂಗದೂರು ಜೊತೆಗಿದ್ದರು. ಏಪ್ರಿಲ್ 14ರಂದು ಬಹುನಿರೀಕ್ಷಿತ ಕೆಜಿಎಫ್-2 ವಿಶ್ವಾದ್ಯಾಂತ ರಿಲೀಸ್ ಆಗುವ ನಿರೀಕ್ಷೆ ಇದೆ.
ಕುಂದಾಪುರದ ಬಸ್ರೂರಿನಲ್ಲಿ ಬಹುನಿರೀಕ್ಷಿತ ಕೆಜಿಎಫ್-2ನ ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಹಿನ್ನೆಲೆ ಸಂಗೀತ ನೀಡಿದ್ದಾರೆ.
ಕೆಲವು ದಿನಗಳಿಂದ ಬಸ್ರೂರಿನಲ್ಲಿ ಬೀಡು ಬಿಟ್ಟಿರುವ ಚಿತ್ರತಂಡ ಇತ್ತೀಚೆಗೆ ಕೊಲ್ಲೂರು, ಧರ್ಮಸ್ಥಳ ಸೇರಿದಂತೆ ಕ್ಷೇತ್ರ ದರ್ಶನ ಮಾಡಿದ್ದರು.