ಉಡುಪಿ: ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಇಂದು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ಅವರು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನ ಪಡೆದರು.
ಈ ವೇಳೆ ಕೆಜಿಎಫ್-2 ನಿರ್ಮಾಪಕ ವಿಜಯ್ ಕಿರಂಗದೂರು ಜೊತೆಗಿದ್ದರು. ಏಪ್ರಿಲ್ 14ರಂದು ಬಹುನಿರೀಕ್ಷಿತ ಕೆಜಿಎಫ್-2 ವಿಶ್ವಾದ್ಯಾಂತ ರಿಲೀಸ್ ಆಗುವ ನಿರೀಕ್ಷೆ ಇದೆ.
ಕುಂದಾಪುರದ ಬಸ್ರೂರಿನಲ್ಲಿ ಬಹುನಿರೀಕ್ಷಿತ ಕೆಜಿಎಫ್-2ನ ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಹಿನ್ನೆಲೆ ಸಂಗೀತ ನೀಡಿದ್ದಾರೆ.
ಕೆಲವು ದಿನಗಳಿಂದ ಬಸ್ರೂರಿನಲ್ಲಿ ಬೀಡು ಬಿಟ್ಟಿರುವ ಚಿತ್ರತಂಡ ಇತ್ತೀಚೆಗೆ ಕೊಲ್ಲೂರು, ಧರ್ಮಸ್ಥಳ ಸೇರಿದಂತೆ ಕ್ಷೇತ್ರ ದರ್ಶನ ಮಾಡಿದ್ದರು.
ಮಂಗಳೂರು/ಮೈಸೂರು : ಪ್ರತೀ ವರ್ಷ ನಟ ದರ್ಶನ್ ತಮ್ಮ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಾರೆ. ಎತ್ತುಗಳು, ಹಸುಗಳನ್ನು ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕಿಚ್ಚು ಹಾಯಿಸುತ್ತಾರೆ. ಆದರೆ, ಈ ವರ್ಷ ದರ್ಶನ್ ಏನು ಮಾಡುತ್ತಿದ್ದಾರೆ ಎಂಬ ಕುತೂಹಲ ಇತ್ತು. ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಿಂದ ಜಾಮೀನು ಪಡೆದಿರುವ ದರ್ಶನ್ ಈ ಬಾರಿ ಸಂಕ್ರಾಂತಿ ಆಚರಿಸಿದ್ದಾರಾ ಎಂಬ ಕುತೂಹಲ ಮನೆ ಮಾಡಿತ್ತು.
ಈ ಕುತೂಹಲವನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ತಣಿಸಿದ್ದಾರೆ. ತನ್ನ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಅವರು ಸ್ಟೋರಿ ಹಾಕಿದ್ದಾರೆ. ಈ ಮೂಲಕ ಫಾರ್ಮ್ ಹೌಸ್‌ನಲ್ಲಿ ದರ್ಶನ್ ಜೊತೆ ಸಂಕ್ರಾಂತಿ ಆಚರಿಸುತ್ತಿದ್ದಾರೆ ಅನ್ನೋದು ಕನ್ಫಮ್ ಆಗಿದೆ.
ಸದ್ಯ ಈ ಫೋಟೋ ವೈರಲ್ ಆಗಿದೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ಮೈಸೂರಿನ ತಮ್ಮ ಫಾರ್ಮ್ ಹೌಸ್‌ನಲ್ಲಿದ್ದಾರೆ. ಅಲ್ಲಿ ಪ್ರಾಣಿಗಳ ಆರೈಕೆ ಮಾಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.
ಈ ಫೋಟೋದಲ್ಲಿ ಇಬ್ಬರೂ ಮುಖ ತೋರಿಸಿಲ್ಲ. ಪ್ರಾಣಿಗಳತ್ತ ನೋಡುತ್ತಿರುವಂತೆ ಫೋಟೋ ಕ್ಲಿಕ್ಕಿಸಲಾಗಿದೆ. ಬೆನ್ನಿನ ಭಾಗ ಮಾತ್ರ ತೋರಿಸಲಾಗಿದೆ ವಿಜಯಲಕ್ಷ್ಮಿ ತನ್ನ ಮುದ್ದಿನ ನಾಯಿಯನ್ನು ಫಾರ್ಮ್ ಹೌಸ್‌ಗೆ ಕೊಂಡೊಯ್ದಿದ್ದು, ಈ ಫೋಟೋದಲ್ಲಿ ನಾಯಿಯೂ ಇರುವುದನ್ನು ಕಾಣಬಹುದು.
ಡ್ರ*ಗ್ಸ್ ಕೇಸ್ನಲ್ಲಿ ನಟಿ ರಾಗಿಣಿ ದ್ವಿವೇದಿ ಹೆಸರು ತಳುಕು ಹಾಕಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಸೆಪ್ಟೆಂಬರ್ನಲ್ಲಿ ರಾಗಿಣಿ ಯನ್ನು ಬಂಧಿಸಲಾಗಿತ್ತು. ಅವರು ಹಲವು ದಿನ ಜೈಲಿನಲ್ಲೂ ಕೂಡ ಇದ್ದರು. ನಾಲ್ಕು ವರ್ಷಗಳ ಬಳಿಕ ಡ್ರ*ಗ್ಸ್ ಕೇಸ್ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ.
ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಇದರಿಂದ ರಾಗಿಣಿ ಅವರು ರಿಲೀಫ್ ಆಗಿದ್ದಾರೆ. ಡ್ರ*ಗ್ಸ್ ಮಾ*ಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರ*ಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ರಾಗಿಣಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ, ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ” ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಾಡಿದ್ದರು.
ಈ ವಾದವನ್ನು ಪರಿಣಿಸಿದ ನ್ಯಾಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ. ಎ 4 ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣ ಕೂಡ ರದ್ದಾಗಿದೆ. ರಾಗಿಣಿ ದ್ವಿವೇದಿ ಅವರು ‘ಕೆಂಪೇಗೌಡ’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದವರು. ‘ತುಪ್ಪ ಬೇಕಾ ತುಪ್ಪ..’ ಹಾಡಿಗೆ ಡ್ಯಾನ್ಸ್ ಮಾಡಿ ತುಪ್ಪದ ಹುಡುಗಿ ಎಂದೇ ಫೇಮಸ್ ಆದರು. ಡ್ರಗ್ಸ್ ಕೇಸ್ ಅವರ ವೃತ್ತಿ ಜೀವನಕ್ಕೆ ದೊಡ್ಡ ಕಪ್ಪು ಚುಕ್ಕಿ ಆಗಿತ್ತು. ಆದರೆ, ಈಗ ಅವರು ಆರೋಪ ಮುಕ್ತರಾಗಿದ್ದಾರೆ.
ಮಂಗಳೂರು/ಆಂಧ್ರಪ್ರದೇಶ : ತೆಲುಗು ನಟ ಪ್ರಭಾಸ್ ಮದುವೆ ಬಗ್ಗೆ ಯಾವಾಗಲೂ ಸುದ್ದಿಯಲ್ಲಿರುತ್ತದೆ. ಅವರ ಮದುವೆಯ ಬಗ್ಗೆ ಯಾವಾಗಲೂ ವದಂತಿಗಳು ಹಬ್ಬುತ್ತಿರುತ್ತದೆ. ಇದೀಗ ಮತ್ತೆ ಪ್ರಭಾಸ್ ಮದುವೆ ವಿಚಾರ ಸುದ್ದಿಯಾಗುತ್ತಿದೆ. ಈ ಬಾರಿ ಗಾಸಿಪ್ ಅಲ್ಲ. ಪ್ರಭಾಸ್ ಮದುವೆ ಬಗ್ಗೆ ನಟ ರಾಮ್ ಚರಣ್ ತೇಜ ಅವರು ಮಾಹಿತಿ ನೀಡಿದ್ದಾರೆ.
ಆಂಧ್ರ ಹುಡುಗಿ ಜೊತೆ ಮದುವೆ!
ನಂದಮೂರಿ ಬಾಲಕೃಷ್ಣ ಅವರ ಜನಪ್ರಿಯ ಅನ್‌ಸ್ಟಾಪೇಬಲ್ ಟಾಕ್ ಶೋನಲ್ಲಿ ರಾಮ್ ಚರಣ್ ಸ್ನೇಹಿತ ಪ್ರಭಾಸ್ ಮದುವೆ ಬಗ್ಗೆ ಸುಳಿವು ನೀಡಿದ್ದಾರೆ. ಬಾಲಕೃಷ್ಣ ಅವರು ಪ್ರಭಾಸ್ ಮದುವೆ ಬಗ್ಗೆ ಕೇಳಿದ್ದಾರೆ. ಈ ವೇಳೆ ರಾಮ್ ಚರಣ್ ನಕ್ಕಿದ್ದಾರೆ. ಪ್ರಭಾಸ್ ಮದುವೆಯ ಕುರಿತು ಸುಳಿವು ನೀಡಿದ್ದಾರೆ. ಆಂಧ್ರಪ್ರದೇಶದ ಗಾನಪವರಂನ ಹುಡುಗಿಯನ್ನು ಪ್ರಭಾಸ್ ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ.ಸದ್ಯ ಶೋನ ಟ್ರೇಲರ್ ಬಿಡುಗಡೆಯಾಗಿದ್ದು, ರಾಮ್ ಚರಣ್ ಹೇಳಿರುವ ಕೆಲವು ದೃಶ್ಯಗಳನ್ನು ತೋರಿಸಲಾಗಿದೆ. ಜನವರಿ 14 ರಂದು ಶೋ ಪ್ರಸಾರವಾಗಲಿದೆ. ಹಾಗಾಗಿ ಟ್ರೇಲರ್‌ನಲ್ಲಿ ತೋರಿಸಲಾಗಿರುವ ವಿಚಾರಗಳ ಸ್ಪಷ್ಟನೆ ಶೋ ಪೂರ್ತಿ ನೋಡಿದ ಮೇಲೆ ಗೊತ್ತಾಗಲಿದೆ.
ಈ ಹಿಂದೆ ಬಾಹುಬಲಿ ಸಿನಿಮಾ ವೇಳೆ ಪ್ರಭಾಸ್ ತಮ್ಮ ಮದುವೆ ಬಗ್ಗೆ ಮಾತನಾಡಿದ್ದರು. ನಾನು ಶೀಘ್ರದಲ್ಲಿ ಮದುವೆಯಾಗುವುದಿಲ್ಲ. ಏಕೆಂದರೆ, ನನ್ನ ಮಹಿಳಾ ಅಭಿಮಾನಿಗಳ ಭಾವನೆಗಳನ್ನು ನೋಯಿಸಲು ನಾನು ಬಯಸುವುದಿಲ್ಲ ಎಂದಿದ್ದರು.
ಪ್ರಭಾಸ್ ಜೊತೆ ಅನುಷ್ಕಾ ಶೆಟ್ಟಿ ಹೆಸರು ಹಲವು ಸಮಯಗಳಿಂದ ತಳುಕು ಹಾಕುತ್ತಿದೆ. ಇತ್ತೀಚೆಗೆ ಕೃತಿ ಸನೊನ್ ಜೊತೆ ಡೇಟಿಂಗ್‌ನಲ್ಲಿದ್ದಾರೆ ಎಂಬ ಗುಲ್ಲೂ ಹಬ್ಬಿತ್ತು. ಸದ್ಯ ಪ್ರಭಾಸ್ ಸಲಾರ್ ಬಳಿಕ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಜೊತೆ ಮೂರು ಸಿನಿಮಾ ಮಾಡುವ ಒಪ್ಪಂದ ಮಾಡಿಕೊಂಡಿದ್ದಾರೆ.
ಇನ್ನು ಆರ್ ಆರ್ ಆರ್ ಸಿನಿಮಾ ರಾಮ್ ಚರಣ್‌ಗೆ ದೊಡ್ಡ ಯಶಸ್ಸು ನೀಡಿತ್ತು. ಈಗ ಗೇಮ್ ಛೇಂಜರ್ ಆಗಿ ಅವರು ಬೆಳ್ಳಿ ಪರದೆಯ ಮೇಲೆ ಎಂಟ್ರಿ ಕೊಟ್ಟಿದ್ದಾರೆ. ಶಂಕರ್ ಆ್ಯಕ್ಷನ್ ಕಟ್ ಹೇಳಿರುವ ಈ ಬಹುಭಾಷಾ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ.