ಉಡುಪಿ : ಬಹು ನಿರೀಕ್ಷಿತ KGF 2 ಚಿತ್ರ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮತ್ತು ಚಿತ್ರ ತಂಡ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.
ಕೆಜಿಎಫ್-2 ಚಿತ್ರತಂಡ ಸದ್ಯ ಕುಂದಾಪುರದ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಊರಿನಲ್ಲಿ ಬೀಡುಬಿಟ್ಟಿದೆ. ಇಂದು ಸಿನಿಮಾ ತಂಡ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ.
ರಾಜ್ಯದಲ್ಲಿ ಕೊರೊನಾ ಕೇಸ್ಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಂತ ಹಂತವಾಗಿ ಹೇರಿದ ನಿರ್ಬಂಧಗಳನ್ನು ಸಡಿಲಿಕೆ ಮಾಡುತ್ತಿದೆ.
ಏಪ್ರಿಲ್.14ರಂದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್-2 ವಿಶ್ವದಾದ್ಯಂತ ತೆರೆ ಕಾಣೋದು ಬಹುತೇಕ ಖಚಿತವಾಗಿದೆ.
ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ಕೆಜಿಎಫ್-2 ಚಿತ್ರದ ಮ್ಯೂಸಿಕ್ ಕೆಲಸಗಳು ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ನಾಯಕ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರ್, ಸಂಗೀತ ನಿರ್ದೇಶಕ ರವಿ ಬಸ್ರೂರ್ ಸೇರಿದಂತೆ ಇಡೀ ಚಿತ್ರತಂಡ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.