Connect with us

    sports

    ಎರಡನೇ ಮಗುವಿಗೆ ತಂದೆಯಾದ ಟೀಂ ಇಂಡಿಯಾ ನಾಯಕ; ಜೂನಿಯರ್ ಹಿಟ್ ಮ್ಯಾನ್ ಆಗಮನ

    Published

    on

    ಮಂಗಳೂರು/ಮುಂಬಯಿ : ಭಾರತ ಕ್ರಿಕೆಟ್ ತಂಡದ ನಾಯಕ  ರೋಹಿತ್ ಶರ್ಮಾ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ರೋಹಿತ್ ಪತ್ನಿ ರಿತಿಕಾ ಸಜ್ದೇ ಶುಕ್ರವಾರ(ನ.15) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಈ ಮಾಹಿತಿ ತಿಳಿಯುತ್ತಿದ್ದಂತೆ ರೋಹಿತ್  ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಷ್ ಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ಕ್ರಿಕೆಟಿಗನಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

    ರೋಹಿತ್ ಶರ್ಮಾ ತಮ್ಮ ಮ್ಯಾನೇಜರ್ ಆಗಿದ್ದ ರಿತಿಕಾ ಅವರನ್ನು 2015 ರ ಡಿಸೆಂಬರ್ 13ರಂದು ವರಿಸಿದ್ದರು. ರೋಹಿತ್ ಮತ್ತು ರಿತಿಕಾ ದಂಪತಿ 2018ರಲ್ಲಿ ಮಗಳು ಸಮೈರಾಳನ್ನು ಸ್ವಾಗತಿಸಿದ್ದರು.

    ಇದನ್ನೂ ಓದಿ : ದಾರಿ ತಪ್ಪಿಸಿದ ಗೂಗಲ್‌ ಮ್ಯಾಪ್‌ : ರಂಗ ಕಲಾವಿದರಿಬ್ಬರ ದಾ*ರುಣ ಸಾವು..!

    2ನೇ ಮಗುವಿನ ನಿರೀಕ್ಷೆಯಲ್ಲಿದ್ದ ರೋಹಿತ್ ಆಸ್ಟ್ರೇಲಿಯಾ ವಿರುದ್ದದ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗುತಿತ್ತು. ಒಂದು ವೇಳೆ ರೋಹಿತ್ ಮೊದಲ ಪಂದ್ಯದಲ್ಲಿ ಭಾಗಿಯಾಗದಿದ್ದಲ್ಲಿ ಭಾರತ ತಂಡವನ್ನು ಜಸ್ಪ್ರೀತ್ ಬೂಮ್ರಾ ಮುನ್ನಡೆಸಲ್ಲಿದ್ದಾರೆ.  ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವಿನ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ.

    Click to comment

    Leave a Reply

    Your email address will not be published. Required fields are marked *

    International news

    ಹತ್ತು ನಿಮಿಷದಲ್ಲಿ 2.63 ಕೋಟಿಗೆ ಬ್ರಾಡ್ಮನ್ ಕ್ಯಾಪ್ ಹರಾಜು !

    Published

    on

    ಮಂಗಳೂರು/ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ ಸರ್ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಗ್ರೀನ್ ಕ್ಯಾಪ್ ಹರಾಜಿನಲ್ಲಿ 2. 63 ಕೋಟಿ ರೂಪಾಯಿಗೆ ಮಾರಾಟವಾಗಿ ಅಚ್ಚರಿ ಮೂಡಿಸಿದೆ.


    ಕ್ರಿಕೆಟ್ ಇತಿಹಾಸದ ಅಪರೂಪದ ವಸ್ತುವೊಂದನ್ನು ಮಂಗಳವಾರ ಹರಾಜಿಗಿಟ್ಟ ನಂತರ ಬ್ರಾಡ್ಮನ್ ಅವರ ಕ್ಯಾಪ್ ಗೆ ಇಷ್ಟೊಂದು ದೊಡ್ಡ ಮೊತ್ತ ಲಭಿಸಿದೆ. 1947-48ರಲ್ಲಿ ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸದ ವೇಳೆ ಬ್ರಾಡ್ಮನ್ ಈ ಕ್ಯಾಪ್ ಧರಿಸಿದ್ದರು ಎಂದು ಹೇಳಲಾಗಿದೆ. ಈ ಕ್ಯಾಪ್ ಗೆ ಈಗ 80 ವರ್ಷ ವಯಸ್ಸಾಗಿದೆ ಎಂದು ಹರಾಜು ಸಂಸ್ಥೆ ಬೊನ್ಸಾಮ್ ಹೇಳಿದೆ.

    ಇದನ್ನೂ ಓದಿ: 16 ವರ್ಷದ ಬಾಲಕನನ್ನು ಮದುವೆಯಾದ ಶಿಕ್ಷಕಿ !

    ಕ್ರಿಕೆಟ್ ಅಂಗಳದಲ್ಲಿ ”ದಿ ಡಾನ್” ಎಂದು ಕರೆಸಿಕೊಂಡಿದ್ದ ಬ್ರಾಡ್ಮನ್ 2001ರಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಆದರೆ 20 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್ ನಲ್ಲಿ ನಿರ್ಮಿಸಿದ ದಾಖಲೆಗಳು ಇನ್ನೂ ಸಹ ಅವರನ್ನು ಅಜರಾಮರರನ್ನಾಗಿರಿಸಿದೆ.

    ಆಸ್ಟ್ರೇಲಿಯಾ ಪರ 52 ಟೆಸ್ಟ್ ಗಳನ್ನಾಡಿದ್ದ ಬ್ರಾಡ್ಮನ್, 2 ತ್ರಿಶತಕ, 12 ದ್ವಿಶತಕ, 29 ಶತಕಗಳು ಮತ್ತು 13 ಅರ್ಧ ಶತಕಗಳೊಂದಿಗೆ 6996 ರನ್ ಗಳನ್ನು ಗಳಿಸಿದ್ದಾರೆ. ಅಂದರೆ ಅವರ ಬ್ಯಾಟಿಂಗ್ ಸರಾಸರಿ 99.94 ಇತ್ತು. ಇದು ಕ್ರಿಕೆಟ್ ಇತಿಹಾಸದಲ್ಲೇ ಬ್ಯಾಟರ್ ರೊಬ್ಬರ ಗರಿಷ್ಠ ರನ್ ಸರಾಸರಿ ಎಂಬುದು ವಿಶೇಷ.

    Continue Reading

    sports

    ‘ಆರ್ ಸಿಬಿ ನನ್ನನ್ನು ಖರೀದಿ ಮಾಡಿದಕ್ಕೆ ದೇವರಿಗೆ ಧನ್ಯವಾದ’: ಜಿತೇಶ್ ಶರ್ಮಾ !

    Published

    on

    ಮಂಗಳೂರು/ಬೆಂಗಳೂರು: ಇತ್ತಿಚೇಗೆ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಜಿತೇಶ್ ಶರ್ಮಾ ಅವರನ್ನು ಆರ್ ಸಿಬಿ 11 ಕೋಟಿಗೆ ಖರೀದಿಸಿತು. ಬೆಂಗಳೂರು ತಂಡ ಸೇರಿದ ಜಿತೇಶ್ ಆರ್ ಸಿಬಿ ಅಭಿಮಾನಿಗಳನ್ನು ಹಾಡಿ ಹೊಗಳಿದ್ದಾರೆ.


    ಆರ್ ಸಿಬಿಯಲ್ಲಿ ವಿರಾಟ್ ಕೊಹ್ಲಿ ಜೊತೆಗೆ ಆಡಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ. ಆರ್ ಸಿಬಿ ನನ್ನನ್ನು ಖರೀದಿ ಮಾಡಿದ್ದಕ್ಕೆ ದೇವರಿಗೆ ಧನ್ಯವಾದ ತಿಳಿಸಿದರು. ಹರಾಜಿನ ಬಗ್ಗೆ ನನಗೆ ಯಾವುದೇ ನಿರೀಕ್ಷೆಗಳು ಇರಲಿಲ್ಲ. ಉತ್ತಮ ತಂಡ ಖರೀದಿಸುತ್ತದೆ ಎನ್ನುವ ವಿಶ್ವಾಸವಿತ್ತು. ಆರ್ ಸಿಬಿ ನನ್ನನ್ನು ಖರೀದಿ ಮಾಡಿದ್ದು ಖುಷಿ ಹೆಚ್ಚಿಸಿದೆ ಎಂದಿದ್ದಾರೆ.

    ಇದನ್ನೂ ಓದಿ: ಐಪಿಎಲ್ ಹರಾಜು ಪ್ರಕ್ರಿಯೆ ನಡೆಸಿ ಕೊಟ್ಟ ಈ ಮಹಿಳೆ ಯಾರು ?

    ವಿರಾಟ್ ಕೊಹ್ಲಿ ಜೊತೆ ಆಡಲು ನಾನು ಕಾಯುತ್ತಿದ್ದೇನೆ. ಅವರಿಂದ ಕಲಿಯುವುದು ಬಹಳಷ್ಟಿದೆ. ಅವರ ಫಿಟ್ ನೆಸ್ ನನಗೆ ಯಾವಾಗಲೂ ಸ್ಪೂರ್ತಿಯಾಗಿದೆ. ಅವರ ಜೊತೆ ಆಡಲು ನನಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

    ”ಹರಾಜಿನಿಂದ ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಂಡಿರಲಿಲ್ಲ. ಮುಕ್ತವಾಗಿ ಆಡುವ ಮತ್ತು ತಮ್ಮ ಸಾಮರ್ಥ್ಯವನ್ನು ವ್ಯಕ್ತಪಡಿಸಲು ಅವಕಾಶ ನೀಡುವ ತಂಡಕ್ಕಾಗಿ ಆಡಬೇಕು ಎನ್ನುವ ಆಸೆ ಇತ್ತು, ಆರ್ ಸಿಬಿ ನನ್ನನ್ನು ಖರೀದಿ ಮಾಡಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ. ದೇವರಿಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು, ಆರ್ ಸಿಬಿ ನನಗೆ ಪರಿಪೂರ್ಣ ತಂಡವಾಗುತ್ತದೆ ಎನ್ನುವ ವಿಶ್ವಾಸವಿದೆ” ಎಂದಿದ್ದಾರೆ.

    Continue Reading

    International news

    ರೋಹಿತ್ ಬಿಟ್ಟು, ಕೊಹ್ಲಿ ಆಟೋಗ್ರಾಫ್ ಪಡೆದಿದ್ದೇಕೆ ಆಸ್ಟ್ರೇಲಿಯಾ ಪ್ರಧಾನಿ ?

    Published

    on

    ಮಂಗಳೂರು/ಕ್ಯಾನ್ ಬೆರಾ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರಧಾನಿ ಆಂಥೊನಿ ಆಲ್ಬನೀಸ್ ಅವರನ್ನು ಭೇಟಿ ಮಾಡಿತು. ಈ ವೇಳೆ ಆಸೀಸ್ ಪ್ರಧಾನಿ, ಕೊಹ್ಲಿ ಅವರ ಆಟೋಗ್ರಾಫ್ ಪಡೆದುಕೊಂಡಿದ್ದು ತುಂಬಾ ಸದ್ದು ಮಾಡಿತ್ತು.


    ಅಷ್ಟಕ್ಕೂ, ಆಂಥೋನಿ ಆಲ್ಬನೀಸ್ ಅವರು ಟೀಂ ಇಂಡಿಯಾ ನಾಯಕ ರೋಹಿತ್ ಅವರನ್ನು ಬಿಟ್ಟು ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆದಿದ್ದೇಕೆ ಎಂಬುದನ್ನು ಸ್ವತಃ ಅವರೇ ರಿವಿಲ್ ಮಾಡಿದ್ದಾರೆ.

    ಇದನ್ನೂ ಓದಿ: ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು ! 

    ಈ ಬಗ್ಗೆ ಮಾತನಾಡಿರುವ ಆಲ್ಬನೀಸ್,’ನನ್ನ ಖಾಸಗಿ ವೈದ್ಯರು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ. ಅವರು ಕೊಹ್ಲಿಯ ಬಗ್ಗೆ ಎಷ್ಟು ಭಾವೋದ್ರಿಕೃತರಾಗಿದ್ದಾರೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ನಾನು ಕೊಹ್ಲಿಯನ್ನು ಭೇಟಿಯಾಗುತ್ತೇನೆ ಎಂದು ಹೇಳಿದಾಗ ಅವರಿಗೆ ನಂಬಲು ಸಾಧ್ಯವಾಗಲಿಲ್ಲ. ಈಗಾಗೀ ಕೊಹ್ಲಿಯ ಆಟೋಗ್ರಾಫ್ ಕೊಡಿಸಲು ಅವರು ನನ್ನಲ್ಲಿ ಹೇಳಿದ್ದಾರೆ. ಎಂದು ತಿಳಿಸಿದರು.

    ಇನ್ನೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಎರಡನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯಾವು ಶುಕ್ರವಾರದಿಂದ ಶುರುವಾಗಲಿದೆ.

    Continue Reading

    LATEST NEWS

    Trending