Connect with us

sports

ಎರಡನೇ ಮಗುವಿಗೆ ತಂದೆಯಾದ ಟೀಂ ಇಂಡಿಯಾ ನಾಯಕ; ಜೂನಿಯರ್ ಹಿಟ್ ಮ್ಯಾನ್ ಆಗಮನ

Published

on

ಮಂಗಳೂರು/ಮುಂಬಯಿ : ಭಾರತ ಕ್ರಿಕೆಟ್ ತಂಡದ ನಾಯಕ  ರೋಹಿತ್ ಶರ್ಮಾ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ರೋಹಿತ್ ಪತ್ನಿ ರಿತಿಕಾ ಸಜ್ದೇ ಶುಕ್ರವಾರ(ನ.15) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಮಾಹಿತಿ ತಿಳಿಯುತ್ತಿದ್ದಂತೆ ರೋಹಿತ್  ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಷ್ ಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ಕ್ರಿಕೆಟಿಗನಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ರೋಹಿತ್ ಶರ್ಮಾ ತಮ್ಮ ಮ್ಯಾನೇಜರ್ ಆಗಿದ್ದ ರಿತಿಕಾ ಅವರನ್ನು 2015 ರ ಡಿಸೆಂಬರ್ 13ರಂದು ವರಿಸಿದ್ದರು. ರೋಹಿತ್ ಮತ್ತು ರಿತಿಕಾ ದಂಪತಿ 2018ರಲ್ಲಿ ಮಗಳು ಸಮೈರಾಳನ್ನು ಸ್ವಾಗತಿಸಿದ್ದರು.

ಇದನ್ನೂ ಓದಿ : ದಾರಿ ತಪ್ಪಿಸಿದ ಗೂಗಲ್‌ ಮ್ಯಾಪ್‌ : ರಂಗ ಕಲಾವಿದರಿಬ್ಬರ ದಾ*ರುಣ ಸಾವು..!

2ನೇ ಮಗುವಿನ ನಿರೀಕ್ಷೆಯಲ್ಲಿದ್ದ ರೋಹಿತ್ ಆಸ್ಟ್ರೇಲಿಯಾ ವಿರುದ್ದದ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗುತಿತ್ತು. ಒಂದು ವೇಳೆ ರೋಹಿತ್ ಮೊದಲ ಪಂದ್ಯದಲ್ಲಿ ಭಾಗಿಯಾಗದಿದ್ದಲ್ಲಿ ಭಾರತ ತಂಡವನ್ನು ಜಸ್ಪ್ರೀತ್ ಬೂಮ್ರಾ ಮುನ್ನಡೆಸಲ್ಲಿದ್ದಾರೆ.  ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವಿನ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ.

LATEST NEWS

ಸಂಜು ಸ್ಯಾಮ್ಸನ್-ತಿಲಕ್ ವರ್ಮಾ ಜೊತೆಯಾಟ: ಭಾರತಕ್ಕೆ ಜಯ

Published

on

ಮಂಗಳೂರು/ಜೋಹಾನ್ಸ್ ಬರ್ಗ್: ದಿ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರೀಕಾ ನಡುವಿನ ಟಿ-20 ಸರಣಿಯ 4ನೇ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡವು 135 ರನ್ ಗಳ ಭರ್ಜರಿ ಜಯ ದಾಖಲಿಸಿದೆ.ಈ ಮೂಲಕ 3-1ರ ಅಂತರದಿಂದ ಭಾರತ ಸರಣಿಯನ್ನು ವಶಪಡಿಸಿಕೊಂಡಿದೆ.


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ 109 ರನ್ ಸಿಡಿಸಿದರು. ಇದರಲ್ಲಿ 9 ಸಿಕ್ಸರ್,6 ಬೌಂಡರಿ ಸೇರಿದೆ. ತಿಲಕ್ ವರ್ಮಾ 47 ಎಸೆತಗಳಲ್ಲಿ 120 ರನ್ ಗಳ ಶತಕ ಆಟ ಆಡಿದರು.ಇದರಲ್ಲಿ 10 ಸಿಕ್ಸರ್,9 ಬೌಂಡರಿ ಇದ್ದವು. ಇವರಿಬ್ಬರ ಶತಕದಾಟದ ನೆರವಿನಿಂದ 20 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ ಗಳ ಬೃಹತ್ ಮೊತ್ತ ಪ್ರೇರಿಸಿತು. ಈ ಮೂಲಕ ದಕ್ಷಿಣ ಆಫ್ರೀಕಾದ ಬೌಲರ್ ಗಳು ದುಬಾರಿಯಾದರು.

ನಂತರ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರೀಕಾ ತಂಡದ ಬ್ಯಾಟರ್ ಗಳನ್ನು,ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು. ಭಾರತ ತಂಡ ದಕ್ಷಿಣ ಆಫ್ರೀಕಾವನ್ನು 148 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 135 ರನ್ ಗಳ ಭರ್ಜರಿ ಜಯ ತಂದುಕೊಟ್ಟರು. ಭಾರತದ ಪರ 3 ಓವರ್ ಬೌಲಿಂಗ್ ಮಾಡಿದ ವೇಗಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದು 20 ರನ್ ಬಿಟ್ಟುಕೊಟ್ಟರು,4 ಓವರ್ ಬೌಲಿಂಗ್ ಮಾಡಿದ ಸ್ಪೀನ್ನರ್ ವರುಣ್ ಚಕ್ರವರ್ತಿ 2 ವಿಕೆಟ್ ಪಡೆದು 42 ರನ್ ಕೊಟ್ಟರು ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ 2 ಓವರ್ ಬೌಲಿಂಗ್ ಮಾಡಿ,ಕೇವಲ 6 ರನ್ ಕೊಟ್ಟು 2 ವಿಕೆಟ್ ಪಡೆದು ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.
ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳು

ಅಂತರಾಷ್ಟ್ರೀಯ ಟಿ-20 ಮಾದರಿಯ ಈ ಪಂದ್ಯದಲ್ಲಿ ಭಾರತ 283 ರನ್ ಕಲೆ ಹಾಕುವ ಮೂಲಕ ವಿದೇಶಿ ನೆಲದಲ್ಲಿ ಅತಿ ಹೆಚ್ಚು ಮೊತ್ತ ಪ್ರೇರಿಸುವ ಮುಲಕ ದಾಖಲೆ ಬರೆದಿದೆ.ಸಂಜು ಸ್ಯಾಮ್ಸನ್ ಒಂದು ವರ್ಷದಲ್ಲಿ ಮೂರು ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದರು.ಒಂದೇ ಸರಣಿಯಲ್ಲಿ 2 ಶತಕ ಸಿಡಿಸಿದ ದಾಖಲೆಗೂ ಸಂಜು ಭಾಜನರಾದರು.ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಭರ್ಜರಿ ಶತಕ ಬಾರಿಸುವ ಮೂಲಕ ಭರ್ಜರಿ ಜೊತೆಯಾಟವಾಡಿ ಒಂದೇ ಇನ್ನಿಂಗ್ಸ್ ನಲ್ಲಿ ಇಬ್ಬರು ಬ್ಯಾಟ್ಸ್ ಮ್ಯಾನ್ ಗಳು ಶತಕ ಸಿಡಿಸಿದ್ದು ಇದೇ ಮೊದಲು.ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಶತಕ ಸಿಡಿಸಿದಲ್ಲದೆ, 210 ರನ್ ಗಳ ದಾಖಲೆಯ ಜೊತೆಯಾಟವನ್ನು ಆಡಿದರು.ಈಗಾಗೀ ಅತೀ ದೊಡ್ಡ ಜೊತೆಯಾಟವಾಡಿದ ದಾಖಲೆ ಈ ಇಬ್ಬರು ಆಟಗಾರರ ಪಾಲಾಯಿತು.

Continue Reading

sports

“ಕುಡ್ಲದ ಜನಕ್ಲೆನ ಮೋಕೆ, ಅಭಿಮಾನ ಎನ್ನ ಈ ಸಾಧನೆಗ್‌ ಕಾರಣ” : ಕೆ.ಎಲ್.ರಾಹುಲ್

Published

on

ಮಂಗಳೂರು: “ಕುಡ್ಲದ ಜನಕ್ಲೆನ ಮೋಕೆ, ಅಭಿಮಾನ ಎನ್ನ ಈ ಸಾಧನೆಗ್‌ ಕಾರಣ” (ಮಂಗಳೂರಿನ ಜನರ ಪ್ರೀತಿ, ಅಭಿಮಾನ ನನ್ನ ಈ ಸಾಧನೆಗೆ ಕಾರಣ) ಎಂದು ಭಾರತ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್‌. ರಾಹುಲ್‌ ತುಳು ಪ್ರೇಮವನ್ನು ಮೆರೆದಿದ್ದಾರೆ. ತುಳು ಭಾಷೆಯಲ್ಲಿ ಮಾತನಾಡುವ ಮೂಲಕ ಮಂಗಳೂರಿನಲ್ಲಿ ತಾನು ಕಳೆದ ದಿನಗಳನ್ನು ಸಂದರ್ಶನವೊಂದರಲ್ಲಿ ಮೆಲುಕು ಹಾಕಿದ್ದಾರೆ.


“ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು ಎಂಬ ಕನಸು ಮಂಗಳೂರಿನ ಎನ್‌ಐಟಿಕೆ ಮೈದಾನದಲ್ಲಿ ಕ್ರಿಕೆಟ್‌ ಆಡುವಾಗಲೇ ಇತ್ತು. ಇದು ಸಾಕಾರಗೊಳ್ಳಬಹುದು ಎಂಬ ಆತ್ಮವಿಶ್ವಾಸ ಇರಲಿಲ್ಲ. ಆದರೆ ಮಂಗಳೂರಿನ ಜನರ ಪ್ರೀತಿ, ವಿಶ್ವಾಸ ದಿಂದಲೇ ಇದು ಸಾಧ್ಯವಾಯಿತು. ನಾನು ಬಾಲ್ಯದಿಂದ ಈವರೆಗೆ ಇಷ್ಟೊಂದು ಸಾಧನೆಗೈದಿದ್ದೇನಾ ಎಂದು ನನಗೆ ಅನಿಸುವುದುಂಟು” ಎಂದು ಹೆಮ್ಮೆಯಿಂದ ತುಳು ಭಾಷೆಯಲ್ಲೇ ಹೇಳಿದ್ದಾರೆ.

ಕೆ.ಎಲ್‌. ರಾಹುಲ್‌ ಬಾಲ್ಯವನ್ನು ಮಂಗಳೂರಿನಲ್ಲಿ ಕಳೆದಿದ್ದು, ನಗರದ ನೆಹರೂ ಮೈದಾನದಲ್ಲಿ ಕ್ರಿಕೆಟ್‌ ಅಭ್ಯಾಸ ಮಾಡುತ್ತಿದ್ದರು. ರಾಹುಲ್ ತಂದೆ ಲೋಕೇಶ್‌ ಎನ್‌ಐಟಿಕೆಯಲ್ಲಿ ಪ್ರೊಫೆಸರ್‌ ಮತ್ತು ತಾಯಿ ರಾಜೇಶ್ವರಿ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿದ್ದರು. ಇದೇ ಕಾರಣಕ್ಕೆ ರಾಹುಲ್‌ಗೆ ಮಂಗಳೂರಿನ ಬಗ್ಗೆ ವಿಶೇಷ ಗೌರವ. ಅನೇಕ ಸಂದರ್ಭಗಳಲ್ಲಿ ಮಂಗಳೂರಿನ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದ್ದಾರೆ.

ರಾಹುಲ್ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದಿಂದ ಹೊರಬಿದ್ದ ಬಳಿಕ ಈಗ 2025ರ ಐಪಿಎಲ್‌ನಲ್ಲಿ ಯಾವ ತಂಡದ ಪರ ಆಡಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ. ‘ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು’ ತಂಡಕ್ಕೆ ರಾಹುಲ್‌ ಸೇರ್ಪಡೆ ಕುರಿತು ಚರ್ಚೆ ನಡೆಯುತ್ತಿವೆ. ನ.22ರಿಂದ ಆರಂಭವಾಗಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಸರಣಿಗೆ ರಾಹುಲ್‌ ಆಯ್ಕೆಯಾಗಿದ್ದಾರೆ.

Continue Reading

LATEST NEWS

ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತ; ಸೆಮಿಫೈನಲ್ ಗೆ ಲಗ್ಗೆ

Published

on

ಮಂಗಳೂರು/ ಚೀನಾ: ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ – ಪಾಕಿಸ್ತಾನ  ನಡುವೆ ಹೈವೋಲ್ಟೇಜ್ ಪಂದ್ಯ ಇಂದು(ಸೆ.14) ನಡೆಯಿತು. ಪಂದ್ಯದಲ್ಲಿ ಹರ್ಮನ್ಪ್ರೀತ್ ನಾಯಕತ್ವದ ಭಾರತ ಹಾಕಿ ತಂಡ, ಪಾಕಿಸ್ತಾನ ತಂಡವನ್ನು 2-1 ಗೋಲುಗಳಿಂದ ಮಣಿಸಿ ಸತತ ಐದನೇ ಜಯ ದಾಖಲಿಸಿತು. ಇದರೊಂದಿಗೆ ಭಾರತ ಹಾಕಿ ತಂಡ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.

ಚೀನಾದಲ್ಲಿ ನಡೆಯುತ್ತಿರುವ ಟೂರ್ನಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಿದ್ದ ಟೀಂ ಇಂಡಿಯಾ ಮತ್ತೊಮ್ಮೆ ಅಮೋಘ ಪ್ರದರ್ಶನ  ನೀಡಿದೆ. ಟೂರ್ನಿಯಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋಲದೆ, ಸೋಲಿಲ್ಲದ ಸರದಾರನಾಗಿ ಮಿಂಚಿದೆ.

ಹಳದಿ ಕಾರ್ಡ್​ ಪಡೆದ ಮೂವರು :

ಭಾರತ ಮತ್ತು ಪಾಕಿಸ್ತಾನ ನಡುವೆ ಸ್ಪರ್ಧೆ ಇದ್ದರೆ ಫೈಟ್ ನಡೆಯುವುದು ಮಾಮೂಲಿ. ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಈ ಪಂದ್ಯದಲ್ಲೂ ಹಾಗೆಯೇ ನಡೆದಿದೆ. ಪಂದ್ಯದ ವೇಳೆ ಉಭಯ ತಂಡಗಳ ಆಟಗಾರರ ನಡುವೆ ತೀವ್ರ ವಾಗ್ವಾದ ನಡೆಯಿತು.

ಇದನ್ನೂ ಓದಿ : ಜ್ಯೂಸ್‌ನಲ್ಲಿ ಮೂತ್ರ ಮಿಕ್ಸ್‌..! ಅಂಗಡಿ ಮಾಲೀಕ ಪೊಲೀಸ್ ವಶಕ್ಕೆ..!

ಆಟಗಾರರು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಹೋದರು. ಹೀಗಾಗಿ ಕಠಿಣ ಕ್ರಮ ಕೈಗೊಂಡ ಅಂಪೈರ್‌ ಮೂವರು ಆಟಗಾರರಿಗೆ ಹಳದಿ ಕಾರ್ಡ್ ನೀಡಿದರು. ಹೀಗಾಗಿ ಪಾಕಿಸ್ತಾನದ ಇಬ್ಬರು ಆಟಗಾರರು ಪಂದ್ಯದಿಂದ ಹೊರಬಿದ್ದರೆ, ಭಾರತದ ಒಬ್ಬ ಆಟಗಾರ ಅಮಾನತು ಶಿಕ್ಷೆ ಅನುಭವಿಸಬೇಕಾಯಿತು.

Continue Reading

LATEST NEWS

Trending

Exit mobile version