Sunday, December 5, 2021

ಮಡಿಕೇರಿ 2.5 ಲಕ್ಷ ಮೌಲ್ಯದ ಬೀಟೆ ನಾಟಾ ವಶ..!

ಮಡಿಕೇರಿ : ಲಕ್ಷಾಂತರ ಮೌಲ್ಯದ ಅಕ್ರಮ ಬೀಟೆ ಮರಗಳನ್ನು ಮಡಿಕೇರಿ ಅರಣ್ಯ ಇಲಾಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಾಲ್ನೂರು ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ  2.5 ಲಕ್ಷ ಮೌಲ್ಯದ ಬೀಟೆ ಮರದ ನಾಟಾಗಳನ್ನು  ಅರಣ್ಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಗೆ ಬರುವ ಕಾಫಿ ತೋಟದಲ್ಲಿ ಅಕ್ರಮ ಬೃಹತ್ ಬೀಟೆ ಮರ ಕಡಿದು ನಾಟಾಗಳಾಗಿ ಮಾಡಿ ಸಂಗ್ರಹಿಸಿಡಲಾಗಿತ್ತು.

ಈ ಕುರಿತು ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಉಪ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಹಾಗೂ ಸೋಮವಾರಪೇಟೆ ವಿಭಾಗದ ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರೂ ಮಾರ್ಗದರ್ಶನದಲ್ಲಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ಮತ್ತು ಮೀನುಕೊಲ್ಲಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ ಹಾಗೂ ಸಿಬ್ಬಂದಿ ದಾಳಿ ಮಾಡಿ ಬೀಟೆ ಮರದ 15 ನಾಟಾಗಳನ್ನು ವಶಪಡಿಸಿಕೊಂಡರು.

ಕಾಫಿ ತೋಟದಲ್ಲಿ ಬೀಟೆ ಮರ ಕಡಿದು ಕಡಿದು ಸಂಗ್ರಹ ಮಾಡಿರುವ ವ್ಯಕ್ತಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.‌

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...