Thursday, October 29, 2020

ದಕ್ಷಿಣಕನ್ನಡ ಜಿಲ್ಲೆಯ ಆರೋಗ್ಯ ಕೇತ್ರದ ಸಮಸ್ಯೆಗಳ ಕುರಿತಂತೆ ಡಿವೈಎಫ್ಐ ನಿಂದ ದುಂಡು ಮೇಜಿನ ಸಭೆ

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..! ಬಂಟ್ವಾಳ :ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮುಂದುವೆರೆದಿದೆ. ಫೋಟೋ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು ಫೋಟೊ ಗ್ರಾಫರ್ ಮೇಲೆ ತಲವಾರು...

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..!

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..! ಮೈಸೂರು: ಕೊಲೆ ಪ್ರಕರಣದ ಆರೋಪದಲ್ಲಿ ಸೋಜಿಗದ ಸೋಜಿಮಲ್ಲಿಗೆ ಖ್ಯಾತಿಯ ಗಾಯಕಿ ಅನನ್ಯ ಭಟ್ ತಂದೆ ವಿಶ್ವನಾಥ್ ಭಟ್ ನನ್ನು...

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..!

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..! ಸ್ಪೇನ್ :   ಭಾರತದ ಹಲವೆಡೆ ಕೋವಿಡ್ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ ಯುರೋಪ್‌ ನ ಅನೇಕ...

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..! ಉಡುಪಿ :  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ. ತೃಷಾ ಉಡುಪಿಯ...

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ.. ಮಂಗಳೂರು : ಸರಣಿ ಅಪಘಾತ ಮತ್ತು ಜೀವಹಾನಿಗೆ ಕುಖ್ಯಾತಿ ಪಡೆದ ಮಂಗಳೂರು ಹೊರವಲಯದ...

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಕ್ಷೇತ್ರದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಸಮಾನ ಮನಸ್ಕ ಸಂಘಟನೆ, ಸಾಮಾಜಿಕ ಕಾರ್ಯಕರ್ತರ ದುಂಡು ಮೇಜಿನ ಸಭೆ ಕೊಡಿಯಲ್ ಬೈಲ್ ನ ಸಿಬಿಇಯು ಗೋಲ್ಡನ್ ಜ್ಯುಬುಲಿ ಹಾಲ್ ನಲ್ಲಿ ನಡೆಯಿತು.

ಸಭೆಯ ಅದ್ಯಕ್ಷತೆಯನ್ನು ಡಿವೈಎಫ್‍ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ವಹಿಸಿದ್ದರು. ಸಭೆಯಲ್ಲಿ ಪ್ರಸ್ತುತ ಸನ್ನೀವೇಶದಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಹಾಗು ಆಸ್ಪತ್ರೆಗಳು ವೈದ್ಯಕೀಯ ಸೇವೆಯನ್ನು ಒಂದು ಉದ್ಯಮವನ್ನಾಗಿ ಪರಿವರ್ತಿಸುತ್ತಿದ್ದು. ಔಷಧಿಗಳ ಅಲಭ್ಯತೆಯಿಂದ ಜನರನ್ನು ಸರಕಾರಿ ಆಸ್ಪತ್ರೆಗಳಿಂದ ದೂರವಿಡಲಾಗುತ್ತಿದೆ. ಸರಕಾರಿ ವೈದ್ಯಕೀಯ ಸೇವೆಗಳಿಗೆ ಸಂಬಂಧಿಸಿ ಸರಕಾರವೇ ರೂಪಿಸಿದ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಜಿಲ್ಲೆಯಲ್ಲಿ ಆರೋಗ್ಯ ಹಾಗು ವೈದ್ಯಕೀಯ ಶಿಕ್ಷಣ ಖಾಸಗಿಯವರ ಏಕಸ್ವಾಮ್ಯಕ್ಕೆ  ಒಳಪಟ್ಟಿದೆ.ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬಡವರು ಶ್ರೀಮಂತರು ಎನ್ನದೆ ಸಮಾನ ರೀತಿಯಲ್ಲಿ ಚಿಕಿತ್ಸೆ ಸಿಗಬೇಕು ಎನ್ನುವ ಚರ್ಚೆಯನ್ನು ಮಾಡಲಾಯಿತು.

ಡಿವೈಎಫ್ಐ ಇಂದು ಮಂಗಳೂರಿನಲ್ಲಿ ಆಯೋಜಿಸಿದ ದುಂಡು ಮೇಜಿನ ಸಭೆಯ ನಿರ್ಣಯಗಳು.

1. ಜಿಲ್ಲಾ ಆರೋಗ್ಯ ನಿಯಂತ್ರಣ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳು ತಕ್ಷಣ ಕರೆಯಬೇಕು.

2. ಖಾಸಗಿ ಆಸ್ಪತ್ರೆಗಳು ವಿಧಿಸುವ ನಿಯಮ ಬಾಹಿರ ದುಬಾರಿ ಬಿಲ್ ಗಳ ಮೇಲೆ ಕ್ರಮ ಕೈಗೊಳ್ಳಬೇಕು. ಕೊರೋನ ಸೋಂಕಿತನಿಗೆ ಗುಣಮಟ್ಟದ ಉಚಿತ ಚಿಕಿತ್ಸೆ ಒದಗಿಸಬೇಕು.

3. ಸರಕಾರದ ವೈದ್ಯಕೀಯ ಅಧಿನಿಯಮದ ಪ್ರಕಾರ ದೊರಕಬೇಕಾದಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆಸ್ಪತ್ರೆ, ತಾಲೂಕು ಮಟ್ಟದ ಆಸ್ಪತ್ರೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಕ್ಷಣ ತೆರೆಯಲು ಕ್ರಮ ಕೈಗೊಳ್ಳಬೇಕು.

4. ಜಿಲ್ಲಾಸ್ಪತ್ರೆ ವೆನ್ ಲಾಕ್ ಅನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು.

5. ಜಿಲ್ಲೆಯಲ್ಲಿ ಸುಸಜ್ಜಿತ ಸರಕಾರಿ ಕ್ಯಾನ್ಸರ್ ಆಸ್ಪತ್ರೆ ತೆರೆಯಬೇಕು.

6. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ತೆರೆಯಬೇಕು.

7. ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಬಿದ್ದಿರುವ 900 ಹುದ್ದೆಗಳನ್ನು ಭರ್ತಿ ಮಾಡಬೇಕು

8. ಮೇಲ್ಕಂಡ ಬೇಡಿಕೆಗಳ ಮೇಲೆ ಸಮಾನ ಮನಸ್ಕ ಸಂಘಟನೆಗಳು ಜೊತೆ ಸೇರಿ ಜನಾಂದೋಲನ ರೂಪಿಸಲು. ಪ್ರಥಮ ಹಂತದಲ್ಲಿ ಜಿಲ್ಲೆಯ ಎಲ್ಲಾ ಎಂಟು ಶಾಸಕರ ಕಚೇರಿಗಳ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಯಿತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.