Wednesday, January 27, 2021

ರೌಡಿ ಶೀಟರ್ ಕಾರ್ತಿಕ್  ಬಂಧನ; ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು..!

ರೌಡಿ  ಕಾರ್ತಿಕ್  ಬಂಧನ; ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು..!

ಬೆಂಗಳೂರು : ಸುಲಿಗೆ, ಜೀವ‌ ಬೆದರಿಕೆ ಸೇರಿದಂತೆ ಹಲವಾರು  ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿ  ಕಾರ್ತಿಕ್ ಅಲಿಯಾಸ್ ಗುಂಡ (21) ಎಂಬಾತನನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಗುಂಡು ಹಾರಿಸಿ ಬುಧವಾರ ತಡರಾತ್ರಿ ಸೆರೆ ಹಿಡಿದಿದ್ದಾರೆ.

ನಂದಿನಿ ಲೇ ಔಟ್ ‘ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರನ್ನು ಸುಲಿಗೆ‌ ಮಾಡಿದ್ದ ಗುಂಡ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಿಎಸ್‌ಐ‌ ಎಚ್.ಎನ್. ನಿತ್ಯಾನಂದಾಚಾರಿ ಅವರು ರೌಡಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಗಾಯಗೊಂಡಿರುವ ರೌಡಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯದಲ್ಲಿ ಚೇತರಿಕೆ‌ ಕಂಡುಬಂದ ನಂತರ ಕಸ್ಟಡಿಗೆ ಪಡೆದು ವಿಚಾರಣೆ ‌ನಡೆಸಲಾಗುವುದು’ ಎಂದೂ ಹೇಳಿವೆ.’15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಗುಂಡನ ಹೆಸರು, ಶ್ರೀರಾಮಮಪುರ ಠಾಣೆ ರೌಡಿ ಪಟ್ಟಿಯಲ್ಲಿದೆ’ ಎಂದು ಮೂಲಗಳು ಹೇಳಿವೆ‌.

‘ತಲೆಮರೆಸಿಕೊಂಡಿದ್ದ ಆರೋಪಿ, ಓಕಳಿಪುರ ಬಳಿ ಬುಧವಾರ ರಾತ್ರಿ ಕಾಣಿಸಿಕೊಂಡಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರ ತಂಡ, ಸ್ಥಳಕ್ಕೆ ಹೋಗಿ ಆರೋಪಿಯನ್ನು ಹಿಡಿಯಲು ಮುಂದಾಗಿತ್ತು.

ಕಾನ್‌ಸ್ಟೆಬಲ್ ಉಮೇಶ್ ಎಂಬುವರ ಮೇಲೆಯೇ ಹಲ್ಲೆ ಮಾಡಿದ್ದ ರೌಡಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಇದೇ ವೇಳೆಯೇ ಪಿಎಸ್‌ಐ ನಿತ್ಯಾನಂದಾಚಾರಿ, ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದರು.

ಕುಸಿದು ಬಿದ್ದ ರೌಡಿಯನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ..

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.