Saturday, November 27, 2021

ಬೆಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು : ರೌಡಿ ಶೀಟರ್ ಆನಂದ ಬರ್ಬರ ಹತ್ಯೆ..!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ನಗರದ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಓರ್ವನ ಬರ್ಬರ ಹತ್ಯೆಯಾಗಿದೆ.

ಜೆ.ಸಿ.ಆನಂದ್ ಕೊಲೆಯಾದ ರೌಡಿಶೀಟರ್ ಎಂದು ತಿಳಿದು ಬಂದಿದೆ.

ಪೀಣ್ಯ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಆನಂದ್, ಕಳೆದ ಮೂರು ದಿನಗಳಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ.

ಭಾನುವಾರ ರಾತ್ರಿ 8ಗಂಟೆಯ ಹೊತ್ತಿಗೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಐದಾರು ಜನ ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಆನಂದ್‌ನನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

2016 ರಲ್ಲಿ ಜೆಡಿಎಸ್ ಲೀಡರ್ ಆಗಿ ಗುರುತಿಸಿಕೊಂಡಿದ್ದ ಮೃತ ರೌಡಿಶೀಟರ್ ಆನಂದ್ 18 ವರ್ಷದವನಿದ್ದಾಗಲೇ ಕೊಲೆ ಮಾಡಿ ಜೈಲು ಸೇರಿದ್ದನಂತೆ.

ಬಳಿಕ ಅಪ್ಪಿ ಎಂಬಾತನನ್ನ ಕೂಡ ಕೊಲೆ ಮಾಡಿದ್ದ ಆನಂದ್ ಕೆಲ ದಿನಗಳ ಹಿಂದೆ ಕಿಡ್ನಾಪ್ ಕೇಸ್ ವೊಂದರಲ್ಲಿಯೂ ಜೈಲು ಸೇರಿ ಮೂರು ದಿನಗಳಿಂದಷ್ಟೇ ಬಿಡುಗಡೆಯಾಗಿದ್ದ.

ಸದ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಮುಂದಾಗಿರೋ ಪೀಣ್ಯ ಪೊಲೀಸರು ಹಳೆ ದ್ವೇಷಕ್ಕೆ ಪರಿಚಿತರೇ ಕೊಲೆ ಮಾಡಿರೋ ಶಂಕೆ ವ್ಯಕ್ತಪಡಿಸಿದ್ದು ತನಿಖೆ ಮಂದುವರೆದಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...