Tuesday, March 28, 2023

ಮುಖದ ಗುರುತು ಸಿಗದಂತೆ ರೌಡಿಶೀಟರ್‌ನ ಕೊಚ್ಚಿ ಕೊಲೆ

ಹುಬ್ಬಳ್ಳಿ: ಮನೆಗೆ ಹೋಗುತ್ತಿದ್ದ ರೌಡಿಶೀಟರೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಅರವಿಂದನಗರದ ಪಿಎನ್​​ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ನಡೆದಿದೆ.


ತೊರವಿಹಕ್ಕಲದ ನಿವಾಸಿಯಾಗಿದ್ದ ಅಕ್ಬರ ಅಲ್ಲಾಭಕ್ಷ್ಯ ಮುಲ್ಲಾ ಹತ್ಯೆಯಾದ ರೌಡಿಶೀಟರ್.

ಹುಬ್ಬಳ್ಳಿಯ ಹೊಸೂರಿನಲ್ಲಿದ್ದ ಅಕ್ಬರ್ ಹಲವು ವರ್ಷಗಳ ಹಿಂದೆ ಅರವಿಂದನಗರದ ಬಳಿ ಮನೆ ಮಾಡಿಕೊಂಡಿದ್ದ, ಮುಖ ಗುರುತು ಸಿಗದಂತೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಶಿರಡಿನಗರದ ರಮೇಶ ನೀರಗಟ್ಟಿ ಹಾಗೂ ಇಂದಿರಾನಗರದ ನವೀನ್ ಎಂಬುವವರೊಂದಿಗೆ ಕುಡಿದು ನಂತರ ಮನೆಗೆ ಬರುವಾಗ ಆತನನ್ನು ಕೊಲೆ ಮಾಡಿದ್ದೇನೆ ಎಂದು ಸದಾನಂದ ಬುರ್ಲಿ ಎಂಬಾತ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

ಪ್ರಕರಣ ರಾತ್ರಿ 11.30 ರಿಂದ 12 ಗಂಟೆಯೊಳಗೆ ನಡೆದಿದ್ದು, ಘಟನೆಯ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಹಳೇಹುಬ್ಬಳ್ಳಿ ಠಾಣೆಗೆ ಸದಾನಂದ ಬುರ್ಲಿ ತಾನೇ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.

ಆದರೆ ಕೊಲೆ ಹಿಂದೆ ಹಲವರು ಶಾಮೀಲಾಗಿರುವ ಶಂಕೆ ಇದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಪತ್ನಿ ಆತ್ಮಹತ್ಯೆ ಬಗ್ಗೆ ಸಂಶಯ- ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಠಾಣೆ ಮೆಟ್ಟಲೇರಿದ ಪತಿ..!

ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ...

puttur : ಉಪ್ಪಿನಂಗಡಿಯಲ್ಲಿ ಬೈಕುಗಳ ಮುಖಾಮುಖಿ ಢಿಕ್ಕಿ – ಓರ್ವ ಸ್ಥಳದಲ್ಲೇ ಮೃತ್ಯು..!

ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಿನ್ನೆ ಸೋಮವಾರ ಸಂಜೆ ನಡೆದಿದೆ. ಪುತ್ತೂರು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ...

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ-20 ಉಮ್ರಾ ಯಾತ್ರಾರ್ಥಿಗಳ ದಾರುಣ ಮೃತ್ಯು..!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ.ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ...