Connect with us

    LATEST NEWS

    ನಡುರಸ್ತೆಯಲ್ಲೇ ಬ್ಲಾಸ್ಟ್ ಆದ ರಾಯಲ್ ಎನ್‌ಫೀಲ್ಡ್‌.! ಪೊಲೀಸ್ ಸೇರಿ 10 ಮಂದಿ ಗಂಭೀರ

    Published

    on

    ಹೈದರಾಬಾದ್/ಮಂಗಳೂರು: ರಾಯಲ್ ಎನ್‌ಫೀಲ್ಡ್ ಬೈಕ್‌ ರಸ್ತೆಯಲ್ಲೇ ಹೊತ್ತಿ ಉರಿದು ಬ್ಲಾಸ್ಟ್‌ ಆಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಬೈಕ್‌ಗೆ ಬೆಂಕಿ ತಗುಲಿದ್ದು ಅದನ್ನು ಆರಿಸಲು ಜನರು ಮುಂದಾದ ಜನರು ಗಂಭೀರ ಗಾಯಗೊಂಡಿದ್ದಾರೆ.

    royal enfield

    ಬೈಕ್‌ಗೆ ತಗುಲಿದ್ದ ಬೆಂಕಿಯನ್ನು ಅಲ್ಲಿ ನೆರೆದಿದ್ದ ಜನರು ಆರಿಸುವಲ್ಲಿ ತೊಡಗಿದ್ದರು. ನೀರು, ಮರಳು ಹಾಕಿ ಬೆಂಕಿ ಆರಿಸಲು ಕಸರತ್ತು ಮಾಡಿದ್ದಾರೆ. ಅಷ್ಟರಲ್ಲಾಗಲೇ ಬೆಂಕಿಯ ತೀವ್ರತೆ ಹೆಚ್ಚಾಗಿ ಬ್ಲಾಸ್ಟ್ ಆಗಿದೆ. ಇದರಿಂದ ಪಕ್ಕದಲ್ಲಿದ್ದ ಬೇರೆ ಗಾಡಿಗಳಿಗೂ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದೆ. ಘಟನೆಯಿಂದ ಅಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಹತ್ತು ಜನರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯ ಆಸ್ಒತ್ರೆಗೆ ದಾಖಲಿಸಲಾಗಿದೆ.

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಯತೀಶ್ ಎನ್ ನೇಮಕ

    Published

    on

    ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜುಲೈ 2 ಮಂಗಳವಾರ ತಡರಾತ್ರಿ ಈ ಆದೇಶವನ್ನು ಹೊರಡಿಸಿದ್ದಾರೆ. ಈ ವರ್ಗಾವಣೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿ ಬಿ ರಿಷ್ಯಂತ್ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರು ಈಗ ವೈರ್‌ಲೆಸ್ ವಿಭಾಗಕ್ಕೆ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ.

    ಮೇ 2023 ರಲ್ಲಿ ರಿಷ್ಯಂತ್ ಅವರು ದ.ಕ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ರಿಶ್ಯಾಂತ್‌ ಅವರಿಂದ ಅಧಿಕಾರ ವಹಿಸಿಕೊಂಡವರು ಈ ಹಿಂದೆ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಯತೀಶ್ ಎನ್. ಇವರು 2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದರು.

    Continue Reading

    LATEST NEWS

    ಉಡುಪಿ ಭುಜಂಗ ಪಾರ್ಕ್‌ನಲ್ಲಿ ಮರಗಳ ಮಾರಣಹೋಮ..! ಪೌರಾಯುಕ್ತರು ನೀಡಿದ ಶಿಕ್ಷೆ ಏನು ಗೊತ್ತಾ?

    Published

    on

    ಉಡುಪಿ: ಉಡುಪಿ ನಗರಸಭೆಯ ಅನುಮತಿ ಇಲ್ಲದೆ ನಗರದ ಭುಜಂಗ ಪಾರ್ಕ್‌ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಪೌರಾಯುಕ್ತರು, ಆತನಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

    ಪಾರ್ಕ್ ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಪಾರ್ಕ್ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರ ಸುರೇಶ್ ಎಂಬವರ ಸೂಚನೆಯಂತೆ ಕಾರ್ಮಿಕರು ಕಡಿಯುತ್ತಿದ್ದರು. ಇದಕ್ಕೆ ಪಾರ್ಕ್ ನಲ್ಲಿ ವಿಹರಿಸುವ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಕಾರ್ಮಿಕರು ನಾಲ್ಕೈದು ಮರಗಳನ್ನು ಕಡಿದು ಧರೆಗೆ ಉರುಳಿಸಿದರು. ಉಳಿದ ಮರಗಳನ್ನು ಕಡಿಯಲು ಸಿದ್ಧತೆ ಮಾಡುತ್ತಿದ್ದಾಗ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ರಾಯಪ್ಪ ಮರ ಕಡಿಯುವುದನ್ನು ತಡೆದರು.

    ಅಕ್ಷರ ದಾಸೋಹದ ಅನ್ನ ಚರಂಡಿಗೆ ಎಸೆದು ಬೇಜವಾಬ್ದಾರಿ..! ಎಸ್‌ಡಿಎಂಸಿ, ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

    ಈ ವೇಳೆ ಗುತ್ತಿಗೆದಾರರನನ್ನು ಸ್ಥಳಕ್ಕೆ ಕರೆಸಿ, ಯಾವುದೇ ಅನುಮತಿ ಇಲ್ಲದೇ ಮರ ಕಡಿದಿರುವುದಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡರು. ಈ ತಪ್ಪಿಗೆ 25 ಸಾವಿರ ರೂ. ದಂಡ ಪಾವತಿಸುವಂತೆ ಮತ್ತು ಒಂದು ಮರದ ಬದಲು 10 ಗಿಡಗಳನ್ನು ನೆಡುವಂತೆ ಗುತ್ತಿಗೆದಾರನಿಗೆ ಪೌರಾಯುಕ್ತರು ಸೂಚಿಸಿದರು. ಈ ಸಂದರ್ಭದಲ್ಲಿ ಪರಿಸರ ಇಂಜಿನಿಯರ್ ಸ್ನೇಹಾ ಕೆ.ಎಸ್. ಹಾಜರಿದ್ದರು. ಮಾಹಿತಿ ತಿಳಿದು ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    DAKSHINA KANNADA

    ಅಕ್ಷರ ದಾಸೋಹದ ಅನ್ನ ಚರಂಡಿಗೆ ಎಸೆದು ಬೇಜವಾಬ್ದಾರಿ..! ಎಸ್‌ಡಿಎಂಸಿ, ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

    Published

    on

    ಉಪ್ಪಿನಂಗಡಿ: ಅಕ್ಷರ ದಾಸೋಹದ ಅನ್ನವನ್ನು ಚರಂಡಿಗೆ ಎಸೆದು ಬೇಜವಾಬ್ದಾರಿ ಪ್ರದರ್ಶಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಮಾದರಿ ಉನ್ನತ ಶಿಕ್ಷಣ ಶಾಲೆಯ ಶಿಕ್ಷಕರ ಮತ್ತು ಎಸ್‌.ಡಿ.ಎಂ.ಸಿ. ಸದಸ್ಯರ ವಿರುದ್ಧ ಪೋಷಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಶಾಲೆಯಲ್ಲಿ  ಪ್ರತಿನಿತ್ಯ ಅನ್ನವನ್ನು ರಸ್ತೆ ಬದಿಯ ಚರಂಡಿಗೆ ಎಸೆಯುತ್ತಿರುವುದು ಬೆಳಕಿಗೆ ಬಂದಿದ್ದು, ಸರಕಾರ ಮಕ್ಕಳಿಗೆ ನೀಡುವ ಪೌಷ್ಟಿಕಾಂಶಯುಕ್ತ ಮಧ್ಯಾಹ್ನದ ಊಟದ ಯೋಜನೆಗೆ ಎಳ್ಳುನೀರು ಬಿಡಲಾಗುತ್ತಿದೆ ಎಂದು ಊರಿನ ಜನರು ಆರೋಪಿಸುತ್ತಿದ್ದಾರೆ.

    ಕಂದಮ್ಮನನ್ನು ತಬ್ಬಲಿ ಮಾಡಿ ನೇ*ಣಿಗೆ ಶರಣಾದ ತಾಯಿ..! ಕಾರಣ ಇನ್ನೂ ನಿಗೂಢ

    ಅನ್ನವನ್ನು ಚರಂಡಿಗೆ ಎಸೆಯುತ್ತಿರುವುದರಿಂದ ಚರಂಡಿ ಬ್ಲಾಕ್ ಆಗಿ ಗಬ್ಬು ನಾರುತ್ತಿದೆ. ಚರಂಡಿಯಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಶಾಲೆಯ ಮಕ್ಕಳಿಗೆ ಮತ್ತು ಸುತ್ತಮುತ್ತಲ ಜನರಿಗೆ  ರೋಗ ಹರಡುವ ಭೀತಿ ಎದುರಾಗಿದೆ.  ಈ ಶಾಲೆಯಲ್ಲಿ ಸಿದ್ಧಪಡಿಸಿದ ಊಟವನ್ನು ಮಕ್ಕಳು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ. ಶಾಲೆಯ ಊಟ ಸೇವನೆಯಿಂದ ಹೊಟ್ಟೆ ನೋವು ಆಗುತ್ತದೆ ಎಂಬ ಕಾರಣ ನೀಡಿ ಹಲವಾರು ಮಂದಿ ವಿದ್ಯಾರ್ಥಿಗಳು ಊಟವನ್ನು ನಿರಾಕರಿಸುತ್ತಿದ್ದಾರೆ. ಮತ್ತು ಅಂತಹ ಮಕ್ಕಳು ಮನೆಯಿಂದಲೇ ಬುತ್ತಿ ಊಟ ತರುತ್ತಿರುವುದು ಬೆಳಕಿಗೆ ಬಂದಿದೆ. ಕರಾವಳಿ ಭಾಗದಲ್ಲಿ ಹೆಚ್ಚಾಗಿ ಕುಚಲಕ್ಕಿ ಉಪಯೋಗ ಮಾಡುತ್ತಾರೆ. ಆದರೆ ಶಾಲೆಯಲ್ಲಿ ಬಿಳಿ ಅಕ್ಕಿ ಊಟ ನೀಡಲಾಗುತ್ತಿದ್ದು, ಇದರಿಂದ ಹಲವು ಮಕ್ಕಳ  ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಹಾಗಾಗಿ ಶಾಲೆಯಲ್ಲಿ ತಯಾರಿಸುವ ಅನ್ನದ ಊಟವನ್ನು ವಿದ್ಯಾರ್ಥಿಗಳು ಸೇವಿಸುತ್ತಿಲ್ಲ ಎನ್ನಲಾಗಿದೆ. ಇವೆಲ್ಲದರ ನಡುವೆ ಅಕ್ಷರ ದಾಸೋಹದ ಅನ್ನವನ್ನು ಶಾಲೆಯ ಶಿಕ್ಷಕ ವರ್ಗ ಚರಂಡಿಗೆ ಎಸೆದು ವ್ಯರ್ಥಮಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಉಪ್ಪಿನಂಗಡಿ ಪಂಚಾಯತ್ ಸದಸ್ಯ ಧನಂಜಯ ಕುಮಾರ್ ಅವರು ಶಾಲಾ ಆಡಳಿತ ಮತ್ತು ಶಿಕ್ಷಕರು ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

     

     

    Continue Reading

    LATEST NEWS

    Trending