DAKSHINA KANNADA
ಮಂಗಳಾ ಕ್ರೀಡಾಂಗಣದ 1ಕೋ. ವೆಚ್ಚದ ವಾಕಿಂಗ್ ಟ್ರ್ಯಾಕ್ ಕಾಮಗಾರಿಗೆ ಶಾಸಕ ಕಾಮತ್ ಚಾಲನೆ
ಮಂಗಳೂರು: ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಮಂಗಳಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದೇವೆ.
ಈ ಭಾಗದಲ್ಲಿ ಸಾರ್ವಜನಿಕರಿಗೆ ಅದರಲ್ಲೂ ಪ್ರಮುಖವಾಗಿ ಹಿರಿಯ ನಾಗರಿಕರಿಗೆ ಮುಂಜಾನೆ ಹಾಗೂ ಸಂಜೆಯ ವೇಳೆಗೆ ವಾಕಿಂಗ್ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.
1 ಕೋಟಿ ಅನುದಾನದಲ್ಲಿ ವಾಕಿಂಗ್ ಟ್ರ್ಯಾಕ್ ಜೊತೆಗೆ ಮಂಗಳ ಕ್ರೀಡಾಂಗಣದಲ್ಲಿ ಬೆಳಕಿನ ವ್ಯವಸ್ಥೆ ಹಾಗೂ ವಾಲಿಬಾಲ್ ಕೋರ್ಟಿನಲ್ಲಿ ಅಭಿವೃದ್ಧಿಯನ್ನು ಕೂಡ ಕೈಗೆತ್ತಿಕೊಂಡಿದ್ದೇವೆ.
ವಾಕಿಂಗ್ ಟ್ರ್ಯಾಕ್ ನಿರ್ಮಾಣದ ಸಂದರ್ಭದಲ್ಲಿ ಚರಂಡಿ ನಿರ್ಮಿಸಿ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಲು ನಮ್ಮ ಆಡಳಿತ ಬದ್ಧವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮಹಾಪೌರರಾದ ಸುಮಂಗಲ ರಾವ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್,
ಪಾಲಿಕೆ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ಸದಸ್ಯರಾದ ಕಿಶೋರ್ ಕೊಟ್ಟಾರಿ, ಕದ್ರಿ ಮನೋಹರ್ ಶೆಟ್ಟಿ, ಗಣೇಶ್ ಕುಲಾಲ್,
ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯರಾದ ಪುರುಷೋತ್ತಮ ಪೂಜಾರಿ, ಕೃಷ್ಣ ಶೆಣೈ, ಸಂಧ್ಯಾ ವೆಂಕಟೇಶ್, ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಪ್ರದೀಪ್ ಡಿ.ಸೋಜ,
ಹಿರಿಯ ವಾಲಿಬಾಲ್ ತರಬೇತುದಾರರಾದ ನಾರಾಯಣ ಆಳ್ವ, ಹಿರಿಯ ವಾಲಿಬಾಲ್ ಕ್ರೀಡಾಪಟು ಭಗವಾನ್ ದಾಸ್, ಬಿಜೆಪಿ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!