Connect with us

    DAKSHINA KANNADA

    ಬಹುಕಾಲದ ಸಮಸ್ಯೆಗೆ ಮುಕ್ತಿ – ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ಅನುದಾನ..!

    Published

    on

    ಬಹುಕಾಲದ ಸಮಸ್ಯೆಗೆ ಮುಕ್ತಿ – ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ಅನುದಾನ..!ಉಪ

    ಮಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮಂಗಳೂರು ತಾಲೂಕು ಉಪನೋಂದಣಿ ಕಚೇರಿಯ ಅವ್ಯವಸ್ಥೆಗಳ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ ಅವರು ದಿಢೀರ್ ಭೇಟಿ ನೀಡುವುದು ಫಲಪ್ರದವಾಗಿದೆ.

    ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರ ಕಚೇರಿಯಲ್ಲಿ ನಿನ್ನೆ ಸಭೆ ನಡೆದಿದ್ದು ಕಂದಾಯ ಇಲಾಖೆಯು ಅನುದಾನವನ್ನು ಹೆಚ್ಚುವರಿ ಕಂಪ್ಯೂಟರ್ ಹಾಗೂ ಆಪರೇಟರ್ ವ್ಯವಸ್ಥೆಗೆ 10 ಲಕ್ಷ ಅನುದಾನ ಬಿಡುಗಡೆಗೊಳಿಸಿದೆ.ಹಾಗೂ ಕಂಪ್ಯೂಟರ್ ಹಾಗೂ ಆಪರೇಟರ್ ವ್ಯವಸ್ಥೆಗಳಿಗೆ ಸ್ಥಳದ ಅಭಾವವಿದ್ದು ಉಪನೋಂದಣಿ ಕಚೇರಿಯ ಕೊಠಡಿ ಸಂಖ್ಯೆ 8 ಹಾಗೂ 9ರ ನಡುವಿನ ಗೋಡೆಯನ್ನು ಕೆಡವಿ ಸ್ಥಳಾವಕಾಶ ಒದಗಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಕೋರಿದೆ.

    ಸಾರ್ವಜನಿಕರ ಬಹುಕಾಲದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ, ವಕೀಲರ ಸಂಘದ ಪ್ರಮುಖರಿಗೆ ಶಾಸಕ ವೇದವ್ಯಾಸ್ ಕಾಮತ್ ಧನ್ಯವಾದಗಳನ್ನು ತಿಳಿಸಿದ್ದಾರೆ.

    DAKSHINA KANNADA

    ಗೆಜ್ಜೆ ಹಸ್ತಾಂತರ, ಚೌಕಿ ಪೂಜೆಯೊಂದಿಗೆ ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಆರಂಭ

    Published

    on

    ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ನಡೆಯಿತು. ನಿನ್ನೆ (ನ.25) ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ, ಸೇವೆಯಾಟ ‘ಪಾಂಡಾಶ್ವಮೇಧ’ ನಡೆಯಿತು.

    ಈ ಸಂದರ್ಭ ವೇದವ್ಯಾಸ ತಂತ್ರಿ, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಗಣೇಶ್ ವಿ. ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ ಎಕ್ಕಾರು, ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಮತ್ತಿತರ ಹಿರಿಯ ಗಣ್ಯರು ಉಪಸ್ಥಿತರಿದ್ದರು. ಈ ಬಾರಿಯೂ ಕಟೀಲು ಮೇಳದ ಯಕ್ಷಗಾನ ಬಯಲಾಟಗಳು ಕಾಲಮಿತಿಯಲ್ಲಿ ನಡೆಯಲಿವೆ.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    DAKSHINA KANNADA

    ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ

    Published

    on

    ಮಂಗಳೂರು/ಮಸ್ಕತ್  : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು  ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.

    ಈ ಸಂದರ್ಭ  ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

    ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :

    ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ  ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.

    Continue Reading

    LATEST NEWS

    Trending